ರಾಯಚೂರು | ಸ್ಲಂಗಳ ಮೂಲ ಸೌಲಭ್ಯಕ್ಕೆ ಅನುದಾನ ಮಂಜೂರು ಮಾಡುವಂತೆ ಆಗ್ರಹ

Date:

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬರುವ ಸ್ಲಂಗಳ ಮೂಲ ಸೌಲಭ್ಯ ಮತ್ತು ಮನೆಗಳ ಕಾಮಗಾರಿಗೆ ಕೆಕೆಆರ್‌ಡಿಬಿಯಲ್ಲಿ ₹1000 ಕೋಟಿ ಅನುದಾನ ಮಂಜೂರು ಮಾಡಲು ಸರ್ಕಾರಕ್ಕೆ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ
ಒತ್ತಾಯಿಸಿದೆ.

- Advertisement -

ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಮುಖಂಡರು ಸ್ಲಂ ಬೋರ್ಡ್ ಅಧ್ಯಕ್ಷರಿಗೆ ಮನವಿ ಸಲ್ಲಿಸಿ ಮಾತನಾಡಿ, “ಪಿಎಂಎವೈ ಯೋಜನೆ ಫಲಾನುಭವಿಗಳಿಗೆ ವಂತಿಕೆ ಹಣ ಒಂದು ಲಕ್ಷ ರೂ. ಸರ್ಕಾರವೇ ಭರಿಸಬೇಕು. ಸರ್ವೇ ನಂ.581,726/727, 929/2 ಭೂಮಿಯನ್ನು ನಗರಸಭೆಯಿಂದ ಸ್ಲಂ ಬೋರ್ಡ್‌ಗೆ ಹಸ್ತಾಂತರಿಸಿ ನಿವೇಶನ ರಹಿತರಿಗೆ 1050 ಮನೆಗಳನ್ನು ಮಂಜೂರು ಮಾಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಪಿಎಂಎವೈ ಯೋಜನೆಯ 2770 ಮನೆಗಳ ಮಂಜೂರಿಯಲ್ಲಿ 1000 ಮನೆಗಳ ಕಾಮಗಾರಿಯಲ್ಲಿ ಕೇವಲ 400 ರಿಂದ 450 ಮನೆಗಳು ಪೂರ್ಣಗೊಂಡಿವೆ. ಉಳಿದ ಮನೆಗಳ ಕಾಮಗಾರಿ ಅಪೂರ್ಣಗೊಂಡಿದ್ದರಿಂದ ಸ್ಲಂ ಜನರು ಬೀದಿಯಲ್ಲಿ ಮಳೆಗಾಳಿಯಲ್ಲಿ ವಾಸ ಮಾಡುತ್ತಿದ್ದಾರೆ” ಎಂದರು.

“ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನಿರ್ಲಕ್ಷ್ಯ ವಹಿಸಿದ ಗುತ್ತಿಗೆದಾರರ ವಿರುದ್ದ ಕ್ರಮಕ್ಕೆ ಮುಂದಾಗಬೇಕು. ಸ್ಲಂಗಳಲ್ಲಿ ವಾಸಿಸುವ ಸ್ಲಂ ನಿವಾಸಿಗಳ ಮನೆಗಳಿಗೆ ದಾಖಲೆಗಳು ಇಲ್ಲದೆ ಅಭದ್ರತೆ ಜೀವನ ಸಾಗಿಸುತ್ತಿದ್ದಾರೆ. ಸ್ಲಂ ಜನರು ವಾಸಿಸುವ ಮನೆಗಳಿಗೆ ಹಕ್ಕುಪತ್ರ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಸತಿ ಯೋಜನೆಯ ಹೆಸರಿನಲ್ಲಿ ಹಣ ವಸೂಲಿ: ಪಿಡಿಒ ಶಂಶುದ್ದೀನ್ ವಿರುದ್ಧ ಆರೋಪ

“ಸರ್ವೇ ನಂ.1403ರಲ್ಲಿ ಆರು ಎಕರೆ ಭೂಮಿಯನ್ನು ರಾಯಚೂರು ಜಿಲ್ಲಾಡಳಿತ ಸ್ಲಂ ಬೋರ್ಡ್‌ಗೆ ಮಂಜೂರು ಮಾಡಿ ಸುಮಾರು ಹತ್ತು ವರ್ಷ ಕಳೆದರೂ ಈವರೆಗೂ ಡಿಪಿಆರ್ ಮಾಡಿಲ್ಲ. ಕೆಲವು ಭೂಗಳ್ಳರು ಕಬ್ಜ ಮಾಡಲು ಮುಂದಾಗಿದ್ದಾರೆ. ಕೂಡಲೇ ಡಿಪಿಆರ್ ಮಾಡಿ ನಿವೇಶನ ಇಲ್ಲದ ಸ್ಲಂ ಜನರಿಗೆ ನಿವೇಶನ ಹಂಚಿಕೆ ಮಾಡಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘಟನೆ ಅಧ್ಯಕ್ಷ ಜನಾರ್ಧನ ಹಳ್ಳಿಬೆಂಚಿ, ಮುಖಂಡರಾದ ಮಹೇಶ, ರಾಜಶೇಖರ್, ಬಸವರಾಜ ಹೊಸೂರು, ಜೆ ರಾಜು, ಶರಣಬಸವರೆಡ್ಡಿ, ಪವನ್, ಮಾಧವರೆಡ್ಡಿ, ಆರ್ ಜಂಬಣ್ಣ ಇದ್ದರು.

ವರದಿ: ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...