ರಾಯಚೂರು | ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನ ಮಂಜೂರು ಮಾಡುವಂತೆ ಆಗ್ರಹ

Date:

ಆಶಾ ಕಾರ್ಯಕರ್ತೆಯರಿಗೆ ರಾಜ್ಯದಲ್ಲಿ ಪ್ರೋತ್ಸಾಹಧನ ನೀಡಲು ಆಶಾನಿಧಿ ಪೋರ್ಟಲ್‌ನಲ್ಲಿ ಆನ್ಸೆನ್ ದಾಖಲು ಮಾಡಿದರು, ಮಾಡಿದ ಕೆಲಸಗಳು ದಾಖಲಾಗದೆ ಸುಮಾರು 8 ವರ್ಷಗಳಿಂದ ಪ್ರೋತ್ಸಾಹ ಧನ ಸಿಗುತ್ತಿಲ್ಲ. ಇದರಿಂದ ಪ್ರತಿಯೊಬ್ಬ ಆಶಾ ಕಾರ್ಯಕರ್ತೆಯರು ಸಾವಿರಾರು ರೂಪಾಯಿ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ ಎಂದು ಮಾನ್ವಿ ಘಟಕದ ಆಶಾ ಕಾರ್ಯಕರ್ತೆಯರು ಶಾಸಕ ಹಂಪಯ್ಯ ನಾಯಕರವರಿಗೆ ಹಕ್ಕೊತ್ತಾಯ ಸಲ್ಲಿಸಿದರು.

- Advertisement -

“ಪ್ರಸ್ತುತ ರಾಜ್ಯ ಸರ್ಕಾರದ ಗೌರವಧನ ಮತ್ತು ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಎರಡನ್ನೂ ಒಂದುಗೂಡಿಸಿ ಮಾಸಿಕ ₹15,000 ಗೌರವಧನ ನಿಗದಿ ಮಾಡಬೇಕು ಮತ್ತು ಆಶಾ ಕಾರ್ಯಕರ್ತೆಯರ ವಿವಿಧ ಜ್ವಲಂತ ಸಮಸ್ಯೆಗಳ ಬೇಡಿಕೆಗೆ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ತೀವ್ರ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ 3 ತಿಂಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರುಟೀನ್ ಚಟುವಟಿಕೆಗಳ ನಿಗದಿತ ಪ್ರೋತ್ಸಾಹಧನ ನೀಡಬೇಕು. ಪ್ರತಿ ವರ್ಷ ಎಲ್ಲ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಬೇಕು. ತೀವ್ರ ಕಾಯಿಲೆಗಳಿದ್ದಲ್ಲಿ ಕೂಡಲೇ ಉಚಿತ ಚಿಕಿತ್ಸೆ ನೀಡುವುದಕ್ಕೆ ಆದೇಶ ಹೊರಡಿಸಬೇಕು” ಎಂದು ಮನವಿ ಮಾಡಿದರು.

“ಕಳೆದ ಹಲವಾರು ವರ್ಷಗಳಿಂದ ಆರ್‌ಸಿಎಚ್ ಪೋರ್ಟಲ್‌ನ ವಿವಿಧ ಸಮಸ್ಯೆಗಳ ಕಾರಣಗಳಿಂದ ಬಾಕಿಯಿರುವ ಪ್ರೋತ್ಸಾಹಧನವನ್ನು ನೀಡಲು ಕ್ರಮಕೈಗೊಳ್ಳಬೇಕು. 2019-21ರ ವರೆಗಿನ ಕೋವಿಡ್ ವಿಶೇಷ ಪ್ರೋತ್ಸಾಹಧನ ಹಾಗೂ ನಾನ್ ಎಂಸಿಟಿಎಸ್ ಹಣ ₹2000ವನ್ನು ಪಾವತಿಸಬೇಕು” ಎಂದು ಒತ್ತಾಯಿಸಿದರು.

“ಆಶಾ ಕಾರ್ಯಕ್ರಮದಲ್ಲಿ ಫೆಸಿಲಿಟೇಟರ್ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಅವರ ಹುದ್ದೆಗೆ ತಕ್ಕಂತೆ ಮಾಸಿಕ ವೇತನ, ಪ್ರಯಾಣ ಭತ್ಯೆ ಸೇರಿದಂತೆ ಇತ್ಯಾದಿಗಳನ್ನು ಹೆಚ್ಚಿಸಬೇಕು. ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಠ ವೇತನ, ಗ್ರಾಜ್ಯುಟಿ, ಪಿಎಫ್-ಇಎಸ್‌ಐ ಸೌಲಭ್ಯ ನೀಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಸ್ಕಿ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೆಬಲ್ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

“ಆಶಾ ಕಾರ್ಯಕರ್ತೆಯರ ಶ್ರಮಕ್ಕೆ ತಕ್ಕ ಫಲ ಸಿಗುತ್ತಿಲ್ಲ.‌ ಹಾಗಾಗಿ ತಾವು ಕೂಡಲೇ ಸರ್ಕಾರದ ಗಮನಕ್ಕೆ ತಂದು ಬೇಡಿಕೆ ಈಡೇರಿಸಬೇಕು” ಎಂದು ಶಾಸಕರಿಗೆ ಮನವಿ ಸಲ್ಲಿಸಿದರು.

ಈ ವೇಳೆ ತಾಲೂಕು ಕಾರ್ಯದರ್ಶಿ ಶೈಲಜಾ, ಶ್ರೀದೇವಿ, ಸುಜಾತ, ಸುಂದರಮ್ಮ, ಶಾರದಾ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...