ರಾಯಚೂರು | ಜಾಲಹಳ್ಳಿ ಜಿ.ಪಂ. ಮತ್ತು ತಾ.ಪಂ. ಕ್ಷೇತ್ರಗಳಿಗೆ ಎಸ್‌ಸಿ ಮೀಸಲಾತಿಗೆ ಆಗ್ರಹ

Date:

ಜಾಲಹಳ್ಳಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ತಾಲೂಕು ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಯಿತು.

- Advertisement -

ನಗರದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಆಗ್ರಹ ವ್ಯಕ್ತಪಡಿಸಿದ ಸಂಘಟನೆಯ ಮುಖಂಡರು, ಬಳಿಕ ಕರ್ನಾಟಕ ರಾಜ್ಯ ಚುನಾವಣಾ ಆಯೋಗ, ಬೆಂಗಳೂರು ಇವರಿಗೆ ದೇವದುರ್ಗ ತಹಶೀಲ್ದಾರ್ ಮುಖಾಂತರ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

1992ರಿಂದಲೂ ಮೀಸಲಾತಿ ಇಲ್ಲ ಎಂಬ ಆರೋಪ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳಿಗೆ 1992ರಿಂದ ಈವರೆಗೂ ಎಸ್.ಸಿ ಮೀಸಲಾತಿ ದೊರಕಿಲ್ಲ. ಈ ಕ್ಷೇತ್ರದಲ್ಲಿ ಸುಮಾರು 15,000 ಎಸ್.ಸಿ ಜನಾಂಗದ ಮತದಾರರು ಇದ್ದರೂ, ರಾಜಕೀಯ ಸ್ಥಾನಮಾನದಿಂದ ದಲಿತರನ್ನು ಕಡೆಗಣಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರಸಕ್ತ ಪ್ರಕಟಿಸಿರುವ ಮೀಸಲಾತಿ ಪಟ್ಟಿಯಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಪಂಗಡ ಮಹಿಳೆ ಮೀಸಲಾತಿ ಪ್ರಕಟಿಸಿದ್ದು, ಒಮ್ಮೆಯಾದರೂ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ

ಚುನಾವಣಾ ಅಧಿಕಾರಿಗಳು 19-10-2026ರವರೆಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ. ಇನ್ನೂ ಕಾಲಾವಕಾಶವಿರುವುದರಿಂದ ಈ ಕ್ಷೇತ್ರದಲ್ಲಿ ಬಹುಸಂಖ್ಯಾತರಾಗಿರುವ ದಲಿತರಿಗೆ ಎಸ್.ಸಿ ಮೀಸಲಾತಿ ಒದಗಿಸಬೇಕು ಎಂದು ಒತ್ತಾಯಿಸಲಾಗಿದೆ.

ಹಿಂದಿನಿಂದಲೂ ಯಾವ ಯಾವ ಜನಾಂಗದವರಿಗೆ ಮೀಸಲಾತಿ ದೊರಕಿದೆ ಎಂಬುದನ್ನು ಪರಿಶೀಲಿಸಿ, ಕಾನೂನಿನ ಅಡಿಯಲ್ಲಿ ನ್ಯಾಯಸಮ್ಮತವಾದ ಮೀಸಲಾತಿಯನ್ನು ಎಸ್.ಸಿ ಜನಾಂಗದವರಿಗೆ ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಮತದಾನ ಬಹಿಷ್ಕಾರ ಎಚ್ಚರಿಕೆ

ಒಂದು ವೇಳೆ ಚುನಾವಣೆಗೆ ಮೀಸಲಾತಿ ನೀಡದಿದ್ದರೆ, ಆ ಕ್ಷೇತ್ರದಲ್ಲಿ ಬರುವ ಎಲ್ಲಾ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಮತದಾನ ಬಹಿಷ್ಕಾರ ಮಾಡಲಾಗುತ್ತದೆ ಎಂದು ಸಂಘಟನೆ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ನ್ಯಾಯಾಲಯದ ಆದೇಶದಂತೆ ಪರಿಹಾರ ಪಾವತಿಸದ ಕೆಕೆಆರ್‌ಟಿಸಿ ಬಸ್ ಜಪ್ತಿ

ಈ ಮನವಿಗೆ ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಹನುಮಂತಪ್ಪ ಮನ್ನಾಪೂರ, ರವಿ ಪ್ರಕಾಶ್ ಅಕ್ಕರಕಿ, ಬೂತಪ್ಪ ದೇವಶಮನಿ, ಗ್ರಾಮ ಪಂಚಾಯತ್ ಸದಸ್ಯ ಕುಮಾರ್ ಚಪ್ಪಳಕಿ ಸೇರಿದಂತೆ ಜಾಲಹಳ್ಳಿ ಭಾಗದ ಹಲವು ಮುಖಂಡರು ಇನ್ನಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನ್ಯಾಯಾಲಯದ ಆದೇಶದಂತೆ ಪರಿಹಾರ ಪಾವತಿಸದ ಕೆಕೆಆರ್‌ಟಿಸಿ ಬಸ್ ಜಪ್ತಿ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಗೆ ನ್ಯಾಯಾಲಯ ಆದೇಶಿಸಿದ ಪರಿಹಾರವನ್ನು ಪಾವತಿಸದ ಹಿನ್ನೆಲೆಯಲ್ಲಿ...

ದೆಹಲಿ ಸಭೆಯಲ್ಲೂ ಸಿಗದ ಸ್ಪಂದನೆ: ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರ ಪ್ರತಿಭಟನೆ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ಸಭೆಯಲ್ಲಿಯೂ ಯಾವುದೇ...