ರಾಯಚೂರು | ಹೊರಗುತ್ತಿಗೆ ಕಾರ್ಮಿಕರ ಶಾಸನಬದ್ಧ ಸೌಲಭ್ಯಕ್ಕೆ ಆಗ್ರಹ

Date:

ವಸತಿನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಕಾರ್ಮಿಕರ ವೇತನ ಸಮಸ್ಯೆ ನಿವಾರಣೆ ಮತ್ತು ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ಅಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದಿಂದ ರಾಯಚೂರು ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.

- Advertisement -

ಕಾರ್ಮಿಕರು ಮಾತನಾಡಿ, “ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಬರುವ ವಸತಿ ನಿಲಯಗಳಲ್ಲಿ ಡಿ ಗ್ರೂಪ್ ಹುದ್ದೆಗಳಲ್ಲಿ ಅಡುಗೆಯವರು, ಅಡುಗೆ ಸಹಾಯಕರು, ರಾತ್ರಿ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕರ ವೇತನ ಬಾಕಿ ಸಮಸ್ಯೆ ಬಗೆಹರಿಯದಿರುವ ಹಾಗೂ ಇತರ ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಲು ಕೆಲ ತಿಂಗಳ ಹಿಂದೆ ಮನವಿ ಸಲ್ಲಿಸಿದ್ದು, ಜನವರಿ ಅಂತ್ಯದೊಳಗೆ ವೇತನ ಬಾಕಿ ಸಮಸ್ಯೆ ಇತ್ಯರ್ಥಪಡಿಸುವುದಾಗಿ ಮತ್ತು ಇತರ ಶಾಸನಬದ್ಧ ಸೌಲಭ್ಯಗಳನ್ನು ಖಾತ್ರಿಪಡಿಸುವ ಬಗ್ಗೆಯೂ ನಡಾವಳಿ ಮಾಡಲಾಗಿತ್ತು. ಆದರೆ ಈವರೆಗೂ ವೇತನ ಬಾಕಿ ಹಾಗೆಯೇ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಸಮಾಜ ಕಲ್ಯಾಣ ಇಲಾಖೆಯಡಿ ಮಾನ್ವಿ ತಾಲೂಕಿನ ಮೆಟ್ರಿಕ್ ಪೂರ್ವ ಹಾಸ್ಟೆಲ್ ಕಾರ್ಮಿಕರಿಗೆ 5 ತಿಂಗಳು, ಮೆಟ್ರಿಕ್ ನಂತರದ ಹಾಸ್ಟೆಲ್ ಕಾರ್ಮಿಕರಿಗೆ 6 ತಿಂಗಳು ಬಾಕಿಯಿದೆ. ಲಿಂಗಸಗೂರಿನಲ್ಲಿ ಮೆಟ್ರಿಕ್ ಪೂರ್ವ ಹಾ‌ಸ್ಟೆಲ್ ಕಾರ್ಮಿಕರಿಗೆ 7 ತಿಂಗಳು, ಬಿಸಿಎಂ ಹಾಸ್ಟೆಲ್ ಕಾರ್ಮಿಕರಿಗೆ 3 ತಿಂಗಳು ಇನ್ನು ಲಿಂಗಸಗೂರು, ಮಾನ್ವಿ, ರಾಯಚೂರುಗಳ ಎಸ್‌ಟಿ ಹಾಸ್ಟೆಲ್ ಕಾರ್ಮಿಕರಿಗೆ 3ರಿಂದ 4 ತಿಂಗಳ ವೇತನ ಬಾಕಿಯಿದೆ. ಅಲ್ಲದೆ ಪರಿಷ್ಕೃತ ವೇತನದ ಅರಿಯರ್ಸ್ ಪಾವತಿಸಿಲ್ಲ. ಶಾಸನಬದ್ಧ ಸೌಲಭ್ಯಗಳಾದ ಪಿಎಫ್ ಮತ್ತು ಇಎಸ್‌ಐ ಸೌಲಭ್ಯಗಳನ್ನು, ವಾರದ ರಜೆ, ಸಾರ್ವತ್ರಿಕ ರಜೆ ಹಾಗೂ ರಾಷ್ಟ್ರೀಯ ಹಬ್ಬದ ದಿನಗಳಲ್ಲಿ ಕೆಲಸ ಮಾಡಿದ್ದಕ್ಕೆ ದ್ವಿಗುಣ ವೇತನ ಮತ್ತು ವೇತನ ಚೀಟಿ, ಸಮವಸ್ತ್ರ ಮುಂತಾದ ಸೌಲಭ್ಯಗಳನ್ನು ನೀಡುತ್ತಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಖಾಸಗಿ ಬಸ್ ಮಾಲೀಕರು ಮತ್ತು ಏಜೆಂಟರ ನಡುವೆ ಗಲಾಟೆ; ಪ್ರಯಾಣಿಕರು ಹೈರಾಣ

“ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಫೆಬ್ರವರಿ 15ರ ಒಳಗೆ ಸಮಸ್ಯೆಗಳು ಇತ್ಯರ್ಥವಾಗದಿದ್ದಲ್ಲಿ‌ ಗುತ್ತಿಗೆ ಕಾರ್ಮಿಕರೆಲ್ಲರೂ ಒಗ್ಗೂಡಿ ಹೋರಾಟ ನಡೆಸಲಾಗುತ್ತದೆ” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಮಹೇಶ ಚೀಕಲಪರ್ವಿ, ಅಮರೇಶ, ಹುಸೇನಪ್ಪ, ಹನುಮಂತ, ಜೋಸೆಫ್, ಮಹೇಶ, ಗೋವಿಂದ ರಾಯ, ನಿತಿನ್ ಕುಮಾರ, ಶೋಭಾ, ಎಸ್ ಕುಮಾರ, ಗೌರಿ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...