ರಾಯಚೂರು | ದೈಹಿಕವಾಗಿ ಹಲ್ಲೆ ಮಾಡಿದ ಪೊಲೀಸರ ಅಮಾನತುಗೊಳಿಸುವಂತೆ ಒತ್ತಾಯ

Date:

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದ ವಾಲ್ಮೀಕಿ ವೃತ್ತದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಮಾಯಕ ಯುವಕರನ್ನು ಬಂಧಿಸಿದ್ದು, ದೈಹಿಕವಾಗಿ ಹಲ್ಲೆ ಮಾಡಿರುವ ಪೊಲೀಸರ ಅಮಾನತು ಮಾಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ನಿತೀಶ್ ಕೆ ಅವರಿಗೆ ಮನವಿ ಸಲ್ಲಿಸಿದರು.

- Advertisement -

“ದೇವದುರ್ಗ ತಾಲೂಕಿನ ಗಬ್ಬೂರು ವ್ಯಾಪ್ತಿಯ ಖಾನಾಪುರ ಗ್ರಾಮದಲ್ಲಿ ಜನವರಿ 07ರಂದು ವಾಲ್ಮೀಕಿ ವೃತ್ತಕ್ಕೆ ಧಕ್ಕೆ ಮಾಡಿದ ಕುರಿತು ಮಾದಿಗ ಸಮುದಾಯದ ಇಬ್ಬರನ್ನು ಬಂಧಿಸಿ ದೈಹಿಕವಾಗಿ ಹಲ್ಲೆ ಮಾಡಿದ್ದು, ಪ್ರಕರಣವನ್ನು ತಾವೇ ಮಾಡಿದ್ದಾಗಿ ಒಪ್ಪಿಕೊಳ್ಳಬೇಕೆಂದು ಕಾನ್‌ಸ್ಟೆಬಲ್‌ಗಳಾದ ಹನುಮಂತ ಹಾಗೂ ಬಂದಯ್ಯ ಸ್ವಾಮಿ ಇಬ್ಬರೂ ಸೇರಿ ಯುವಕರನ್ನು ಬೆದರಿಸಿದ್ದಾರೆ. ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಪೊಲೀಸರು ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

“ಸಿಡಿಆರ್ ವರದಿಯಂತೆ 14 ಜನರ ಮೇಲೆ ಮೊಬೈಲ್ ಸಂಖ್ಯೆಗಳು ಕಂಡುಬಂದಿವೆ. ಆದರೆ ಇಬ್ಬರನ್ನು ಬಂಧಿಸಿ ಇನ್ನು 12 ಜನರನ್ನು ಬಂಧಿಸಿಲ್ಲ. ಯಾವುದೇ ಕ್ರಮ ಕೈಗೊಂಡಿಲ್ಲ, ತನಿಖೆ ನಡೆಸಿಲ್ಲ. ಉಳಿದ ಆರೋಪಿಗಳನ್ನು ಕೂಡಲೇ ಬಂಧಿಸಿ ತನಿಖೆ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದರು.

“ಹಾಲುಮತ ಸಮಾಜಕ್ಕೂ ವಾಲ್ಮೀಕಿ ಸಮಾಜದವರಿಗೂ ಬಹಳ ವರ್ಷಗಳಿಂದ ದ್ವೇಷ ಇದೆ. ಇಷ್ಟೇ ಅಲ್ಲದೆ ನಾಯಕ ಜನಾಂಗದವರಿಗೆ ಈಗಾಗಲೇ ವೃತ್ತವನ್ನು ಬೇರೆ ಬೇರೆ ರೀತಿಯಲ್ಲಿ ಬದಲಾಯಿಸಬೇಕಾದ ಕಾರಣ ಹೆಚ್ಚಿನ ಕಾಮಗಾರಿ ಮಾಡುವುದಕ್ಕಾಗಿ ಸಾಮಗ್ರಿಗಳನ್ನು ಹಾಕಿದ್ದರು. ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ಎರಡೂ ಜನಾಂಗದವರನ್ನು ಬಿಟ್ಟು, ಉದ್ದೇಶ ಪೂರ್ವಕವಾಗಿ ಅಮಾಯಕರಾದ ಮಾದಿಗ ಯುವಕರ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಪೊಲೀಸರಿಂದಲೇ ದೌರ್ಜನ್ಯ; ಚಿನ್ನ-ಬೆಳ್ಳಿ ವ್ಯಾಪಾರಸ್ಥರ ಸಂಘದಿಂದ ಪ್ರತಿಭಟನೆ

“ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಕ್ರಮ ಜರುಗಿಸಿ ಹಾಗೂ ದೈಹಿಕವಾಗಿ ಹಲ್ಲೆ ಮಾಡಿರುವ ಇಬ್ಬರು ಪೊಲೀಸರನ್ನು ಅಮಾನತು ಮಾಡಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಶಾಂತಕುಮಾರ ಹೊನ್ನಟಗಿ, ಎಂ ಆರ್ ಭೇರಿ, ಮುತ್ತುರಾಜ್, ಬಸವರಾಜ್, ನಾಗಪ್ಪ, ರಮೇಶ್ ಖಾನಾಪುರ, ಮಲ್ಲಯ್ಯ ಖಾನಾಪುರ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವಾರ್ಡ್ ಮಟ್ಟದ ಸಮಿತಿ ರಚನೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಮುಂದುವರಿದಿದ್ದು, ಅರ್ಹ...

ಅ.2ರಂದು ಟಿ. ನರಸೀಪುರದಲ್ಲಿ ಕೋಮು ಸೌಹಾರ್ದತೆಗಾಗಿ ಬೃಹತ್ ಸಮಾವೇಶ

ಟಿ. ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಂಟಾಗಿರುವ...

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ಕಾರವಾರ | ಫ್ಲೈ ಓವರ್ ಕೆಳಗಿನ ಸರ್ಕಾರಿ ಜಾಗದಲ್ಲಿ ಅನಧಿಕೃತ ನರ್ಸರಿ

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ...