ರಾಯಚೂರು | ತಹಶೀಲ್ದಾರ್ ಅಜಿತ್ ಕುಮಾರ್ ರೈ ವರ್ಗಾವಣೆ ಹಿಂಪಡೆಯುವಂತೆ ಒತ್ತಾಯ

Date:

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆ ಆರ್ ಪುರ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಸಿರವಾರ ತಾಲೂಕಿಗೆ ವರ್ಗಾವಣೆ ಮಾಡಿರುವ ಸರ್ಕಾರ ಕೂಡಲೇ ಆದೇಶ ಹಿಂಪಡೆಯಬೇಕು ಎಂದು ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ರಾಯಚೂರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

- Advertisement -

“ಲೋಕಾಯುಕ್ತ ದಾಳಿಗೆ ಒಳಗಾಗಿ ಬಂಧನದಲ್ಲಿ ಇರುವಾಗಲೇ ಕಂದಾಯ ಇಲಾಖೆ ಅಜಿತ್ ರೈ ವಿರುದ್ಧ ಅಮಾನತು ಆದೇಶ ಹೊರಡಿಸಿತ್ತು. ಅಜಿತ್ ಕುಮಾರ್ ರೈನನ್ನು ಅಮಾನತಿನಲ್ಲಿಟ್ಟು, ಇದೀಗ ಭ್ರಷ್ಟ ಅಧಿಕಾರಿ ಎಸ್ ಅಜಿತ್‌ ಕುಮಾರ್ ರೈನ್ನು ಸಿರವಾರ ತಾಲೂಕಿಗೆ ವರ್ಗಾವಣೆ ಮಾಡಿರುವುದು ಖಂಡನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

“ಬೆಂಗಳೂರಿನ ತಹಶೀಲ್ದಾರ್ ಗ್ರೇಡ್ 1 ಅಧಿಕಾರಿಯಾಗಿದ್ದ ಅಜಿತ್ ಕುಮಾರ್ ರೈ ಅಕ್ರಮ ಹಣ ಪತ್ತೆಯಾದ ಬಳಿಕ ಗ್ರೇಡ್ -1 ತಹಶೀಲ್ದಾರ್ ಹುದ್ದೆಯಿಂದ ಗ್ರೇಡ್ –2 ತಹಶೀಲ್ದಾರ್ ಹಿಂಬಡ್ತಿ ಮಾಡಿ ಸರ್ಕಾರ ವರ್ಗಾವಣೆ ಮಾಡಿದೆ” ಎಂದು ಆರೋಪಿಸಿದರು.

“ಆದಾಯಕ್ಕಿಂತ ಹೆಚ್ಚು ಆಸ್ತಿ ಪತ್ತೆಯಾಗಿ ಸಾಕ್ಷಿ ಸಹಿತ ಸಿಕ್ಕಿಬಿದ್ದಿದ್ದು, ಅಮಾನತುಗೊಂಡಿದ್ದ ತಹಶೀಲ್ದಾರ್‌ನನ್ನು ಸಿರವಾರಗೆ ಯಾಕೆ ವರ್ಗಾಯಿಸಿದ್ದಾರೆ. ರಾಯಚೂರು ಜಿಲ್ಲೆ ಬಿಟ್ಟು ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಬೇಕಿತ್ತು” ಎಂದು ಆಗ್ರಹಿಸಿದರು.

ಸಿರವಾರ ತಾಲೂಕು ನೂತನವಾಗಿ ರಚನೆಯಾಗಿದೆ. ಅಭಿವೃದ್ಧಿಯಾಗಬೇಕಾದ ತಾಲೂಕಿಗೆ ಭ್ರಷ್ಟ ಅಧಿಕಾರಿಯನ್ನು ವರ್ಗಾವಣೆ ಮಾಡಿರುವುದನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎಸ್‌ ಶಿವಕುಮಾರ್ ಯಾದವ್, ಕರುಣಾಕರರೆಡ್ಡಿ, ಗೋವಿಂದರಾಜ್, ಎಂ ಡಿ ರಫೀಕ್, ಬಾವಸಲಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಲ್ಹಾರ | ಗ್ರಾಮಸಭೆ ಮಾಹಿತಿ, ಅಧಿಕಾರಿಗಳ ಹಾಜರಾತಿ ಬಹಿರಂಗಪಡಿಸಿ: ಪ್ರದೀಪ ಪಾಟೀಲ

ಗಾಂಧಿ ಜಯಂತಿ ಅಂಗವಾಗಿ ಅಕ್ಟೋಬರ್ 2ರಂದು ವಿಜಯಪುರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ...

ಉಡುಪಿ | ಅ.11 ರಂದು ‘ಮಹಿಷ ಮಹೋತ್ಸವ’ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ : ಗಣೇಶ್ ನೆರ್ಗಿ

ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ಹಾಗೂ ವಿವಿಧ ಸಹಭಾಗಿ ಸಂಘಟನೆಗಳ ಸಹಯೋಗದಲ್ಲಿ...

ವಿಜಯಪುರ | ‘ಜಲಜೀವನ್ ಮಿಷನ್’ ಕಾಮಗಾರಿ ಪೂರ್ಣಗೊಳಿಸಲು ಡಿಸೆಂಬರ್‌ ಗಡುವು

ಗ್ರಾಮೀಣ ಭಾಗದಲ್ಲಿ ಬೇಸಿಗೆ ಸೇರಿದಂತೆ ಯಾವುದೇ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ...

ಕೋಲಾರ | ಸ್ಮಶಾನಗಳ ದಾರಿ ಒತ್ತುವರಿ ತೆರವುಗೊಳಿಸಿ ಮೂಲಸೌಕರ್ಯ ಒದಗಿಸಿ: ರೈತ ಸಂಘ ಒತ್ತಾಯ

ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸ್ಮಶಾನದ ದಾರಿಗಳನ್ನು ಗುರುತಿಸಿ ತೆರವುಗೊಳಿಸುವುದರ ಜತೆಗೆ, ಸ್ಮಶಾನಗಳಲ್ಲಿ ಮೂಲಸೌಕರ್ಯಗಳನ್ನು...