ರಾಯಚೂರು | ರೈತರಿಗೆ ವಂಚನೆ ಆರೋಪ: ಜೆಸ್ಕಾಂ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಒತ್ತಾಯ

Date:

ರಾಯಚೂರು ಜಿಲ್ಲೆಯ ಚಿಕ್ಕಸೂಗೂರು ವ್ಯಾಪ್ತಿಯಲ್ಲಿ ಬರುವ ರೈತರ ಜಮೀನುಗಳಿಗೆ ಚಿಕ್ಕಸುಗೂರು ಶಾಖೆಯ ಜೆಸ್ಕಾಂ ಶಾಖಾಧಿಕಾರಿ ನಜೀರ್ ಸಾಬ್ ಸರಿಯಾದ ಸಮಯಕ್ಕೆ ವಿದ್ಯುತ್ ಸರಬರಾಜು ಮಾಡುತ್ತಿಲ್ಲ, ರೈತರಿಗೆ ವಂಚಿಸುತ್ತಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಪರಶುರಾಮ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಜೆಸ್ಕಾಂ ಅಧಿಕಾರಿ ನಜೀರಸಾಬ್ ಪರಿಶಿಷ್ಠ ಜಾತಿ ಎಸ್.ಸಿ.ಯ ರೈತರಿಗೆ , ಎಸ್ ಸಿ ಸಮುದಾಯವನ್ನು ಉದ್ದೇಶವಿಟ್ಟುಕೊಂಡು ಜಮೀನುಗಳಿಗೆ ಸರಿಯಾದ ಸಮಯಕ್ಕೆ ವಿದ್ಯುತ್ ಸರಬರಾಜು ಮಾಡದಿರುವುದರಿಂದ ಹೊಲಗಳಲ್ಲಿ ರೈತರು ತುಂಬಾ ನೋವು ಎದುರಿಸುತ್ತಿದ್ದಾರೆ. ವಿದ್ಯುತ್ ಸರಬರಾಜು ಮಾಡದೆ ರೈತರಿಗೆ ಮೋಸ ಮತ್ತು ವಂಚನೆ ಮಾಡುತ್ತಿದ್ದಾರೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪರಿಶಿಷ್ಟ ಜಾತಿಗೆ ಸೇರಿದ ಮಾರೆಪ್ಪ ಇವರಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಕೊಳವೆ ಬಾವಿ ಮತ್ತು ವಿದ್ಯುತ್ ಮೀಟರ್ ಅಳವಡಿಸಿದೆ. ಪರಿಶಿಷ್ಟ ಜಾತಿಯವರ ಹೊಲಗಳಿಗೆ ಉದ್ದೇಶಪೂರ್ವಕವಾಗಿ ಲೋಡ್ ಶೆಡ್ಡಿಂಗ್ ಮಾಡದೇ ಪ್ರಭಾವಿ ಮತ್ತು ದೊಡ್ಡ ರೈತರುಗಳಿಗೆ ಲೋಡ್ ಶೇಡ್ಡಿಂಗ್ ಇಲ್ಲದ ಸಂಪೂರ್ಣ ವಿದ್ಯುತ್ ಸರಬರಾಜು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬಡ ರೈತರು ಜೆ.ಇ.ರವರಿಗೆ ಪೋನ್ ಮಾಡಿದರೆ ಪೋನ್ ತೆಗೆಯುತ್ತಿಲ್ಲ. ಒಂದು ವೇಳೆ ಕರೆ ಸ್ವೀಕರಿಸಿದರೂ ಕೂಡ ಹಾರಿಕೆಯ ಉತ್ತರ ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಸೂಗೂರು ಶಾಖಾಧಿಕಾರಿ ನಜೀರ್‌ಸಾಬ್ ಈ ಹಿಂದೆ ಸಿರವಾರ, ಅರಕೇರಾ, ಯರಗೇರಾ ಶಾಖೆಗಳಲ್ಲಿ ಇವರು ಕಾರ್ಯನಿರ್ವಹಿಸಿದ್ದರು. ಅಲ್ಲಿಯೂ ಕೂಡ ಇವರ ವಿರುದ್ಧ ಅನೇಕ ಸಾರಿ ಕೆಲ ಸಂಘಟನೆಗಳು ಮತ್ತು ರೈತರು ದೂರು ನೀಡಿದ್ದಾರೆ. ಅಧಿಕಾರಿ ವಿರುದ್ಧ ಅಕ್ರಮ ಟಿ.ಸಿ.ಗಳು, ವಿದ್ಯುತ್ ಕಂಬಗಳು ಮಾರಾಟ ಮಾಡುತ್ತಾರೆಂದು ಅನೇಕರು ದೂರು ನೀಡಿದ್ದಾರೆ. ಅದನ್ನೇ ಇಲ್ಲಿಯೂ ಮುಂದುವರಿಸಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ವಿಶೇಷ | ಹರಿಯಾಣ ಫಲಿತಾಂಶದಿಂದ ರಾಜ್ಯ ಕಾಂಗ್ರೆಸ್ ಪಾಠ ಕಲಿಯುತ್ತದೆಯೇ?

ತಕ್ಷಣ ಅಧಿಕಾರಿ ಮೇಲೆ ಕಾನೂನು ಕ್ರಮ ಕೈಗೊಂಡು ಕೆಳ ಭಾಗದ ರೈತರಿಗೆ ವಿದ್ಯುತ್ ವ್ಯತ್ಯಯವಾಗದಂತೆ ಹಾಗೂ ಸರಿಯಾದ ಸಮಯಕ್ಕೆ ವಿದ್ಯುತ್ ಸರಬರಾಜು ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಾರೆಪ್ಪ ಅರಷಿಕಣಿಗಿ, ಶರಣಪ್ಪ ನೀಲಗಲ್, ರಾಜು ಬೊಮ್ಮನಾಳ, ಹನುಮೇಶ, ಮೈಬೂಬು, ಮಲ್ಲೇಶ ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...