ರಾಯಚೂರು | ಜಿಲ್ಲೆಯನ್ನು ಬರಪೀಡತವೆಂದು ಘೋಷಿಸಲು ಆಗ್ರಹ

Date:

ರಾಯಚೂರು ಜಿಲ್ಲೆಯಲ್ಲಿ ಮಳೆಯಾಗದೇ ಬರದ ಪರಿಸ್ಥಿತಿ ಎದುರಾಗಿದೆ. ರೈತರು ಬೆಳೆ ಕಳೆದುಕೊಂಡಿದ್ದಾರೆ. ರಾಯಚೂರು ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆಯೆಂದು ಘೋಷಿಸಬೇಕು ಎಂದು ಕರ್ನಾಟಕ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಅಮರೇಶ ಚಾಗಭಾವಿ ಆಗ್ರಹಿಸಿದ್ದಾರೆ.

ರಾಯಚೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ಬೆಳೆದ ಭತ್ತ, ಹತ್ತಿ, ತೊಗರಿ ಸೇರಿದಂತೆ ಹಲವು ಬೆಳೆಗಳು ಮಳೆಯಿಲ್ಲದೇ ಬೆಳೆ ಇಲ್ಲದಂತಾಗಿದೆ. ಬಿತ್ತನೆ ಮಾಡಲಾಗಿದ್ದ ಬೆಳೆ ಒಣಗುತ್ತಿವೆ. ಬಿತ್ತನೆ ಮಾಡದೇ ಇರುವವರು ಆತಂಕದಲ್ಲಿದ್ದಾರೆ. ಕೃಷಿ ಇಲಾಖೆ ನೀಡಿರುವ ಮಾಹಿತಿಯಂತೆ 1.7 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಹತ್ತಿ, 1.5 ಲಕ್ಷ ಹೆಕ್ಟೇರ್‌ನಲ್ಲಿ ಭತ್ತ, 87 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆಯಾಗಿದೆ. ಆದರೆ, ಮಳೆಯಿಲ್ಲದೆ ನಿರೀಕ್ಷಿತ ಬೆಳೆ ಇಳುವರಿಯಾಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಅನಿತಾ ಬಸವರಾಜ ಮಾತನಾಡಿ, “ತುಂಗಭದ್ರ ಎಡದಂಡೆ ಹಾಗೂ ನಾರಾಯಣಪುರ ಬಲದಂಡೆ ಕಾಲುವೆಗಳ ಕೊನೆಭಾಗಕ್ಕೆ ನೀರು ತಲುಪದೇ ರೈತರು ಬೆಳೆ ನಷ್ಟ ಎದುರಿಸುತ್ತಿದ್ದಾರೆ. ಸರ್ಕಾರಗಳು ಮಳೆ ಪ್ರಮಾಣದ ಮೇಲೆ ಬರಗಾಲ ಘೊಷಿಸುವುದಾಗಿ ಹೇಳುತ್ತಿವೆ. ಮಳೆಯಾದರೂ ಸಕಾಲಕ್ಕೆ ಮಳೆ ಬಿಳದೇ ಬೆಳೆ ಒಣಗುವ ಸ್ಥಿತಿಯಿದೆ. ಜಂಟಿ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ಒದಗಿಸಬೇಕು” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪತ್ರಿಕಾಗೋಷ್ಠಿಯಲ್ಲಿ ನಿರುಪಾದಿ ಗೋಮರ್ಸಿ, ಶರಣಬಸವ ಅಲಬನೂರು, ಚನ್ನಬಸವ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ʼಜೈಶ್ರೀರಾಮ್‌ʼ ಹಾಡು ಹಾಕಿದಕ್ಕೆ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳ ನಡುವೆ ಗಲಾಟೆ

ಧರ್ಮವೊಂದಕ್ಕೆ ಸಂಬಂಧಿಸಿದ ಗೀತೆಗೆ ನೃತ್ಯ ಮಾಡುತ್ತಿರುವಾಗ ಎರಡು ಸಮುದಾಯದ ವಿದ್ಯಾರ್ಥಿಗಳು ಪರಸ್ಪರ...

ಪ್ರಜ್ವಲ್‌ ರೇವಣ್ಣ ಪ್ರಕರಣ ಯಾವುದೇ ಡಿಟರ್ಜೆಂಟ್‌ನಿಂದ ಹೋಗುವ ಕಲೆಯಲ್ಲ: ಮಾಜಿ ರಾಜ್ಯಸಭಾ ಸದಸ್ಯ ಜವರೇಗೌಡ

ದೇವೇಗೌಡ ಅವರ ಕುಟುಂಬದಿಂದ ಸಮಾಜದ ಮೇಲಾಗಿರುವ ಅತ್ಯಾಚಾರ, ದುರ್ನಡತೆಯನ್ನು ಯಾವುದೇ ನಾಗರಿಕರೂ...

ಎಂ.ಉಷಾ ಅವರ‌ ‘ಬಾಳ‌ ಬಟ್ಟೆ’ ಕಾದಂಬರಿಗೆ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ

ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು 2024ನೇ ಸಾಲಿನ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಡಾ.ಎಂ.ಉಷಾ...

ತುಮಕೂರು | ಬಿಯರ್‌ ಬಾಟಲಿ ಹಿಡಿದು ಹೊಡೆದಾಡಿದ ಕೆಪಿಟಿಸಿಎಲ್‌ ಎಂಜಿನಿಯರ್‌ಗಳು

ತುಮಕೂರು ಜಿಲ್ಲೆಯ ಪಾವಗಡದ ಕೆಪಿಟಿಸಿಎಲ್‌ನ ಇಬ್ಬರು ಜೂನಿಯರ್‌ ಎಂಜಿನಿಯರ್‌ಗಳು ಹಾಗೂ ಇಬ್ಬರು...