ರಾಯಚೂರು | ಪರಿಶಿಷ್ಟ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌, ಶಿಷ್ಯ ವೇತನ ನೀಡಲು ಆಗ್ರಹ

Date:

  • ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಕೆ
  • ದಲಿತ ವಿದ್ಯಾರ್ಥಿ ಪರಿಷತ್‌ ನಿಯೋಗದಿಂದ ಅಧಿಕಾರಿಗಳ ಭೇಟಿ

ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಮತ್ತು ಪ್ರಸಕ್ತ ಸಾಲಿನ ಶಿಷ್ಯವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದ್ದಾರೆ.

- Advertisement -

ರಾಯಚೂರು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಇಲ್ಲಿಯವರೆಗೂ ಲ್ಯಾಪ್ ಟಾಪ್ ಯೋಜನೆ ಅಡಿಯಲ್ಲಿ ಲ್ಯಾಪ್‌ಟಾಪ್‌ಗಳನ್ನು ವಿತರಿಸಿಲ್ಲ. ಆದ್ದರಿಂದ ಬಡ ದಲಿತ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದ್ದು, ಯೋಜನೆಯಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಕೂಡಲೇ ಸಂಬಂಧಪಟ್ಟ ಇಲಾಖೆ ಈ ಯೋಜನೆ ಅಡಿಯಲ್ಲಿ ಅರ್ಜಿಗಳನ್ನು ಕರೆದು ಅರ್ಹ ಫಲಾನುಭವಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಬೇಕು. 2022-23ನೇ ಸಾಲಿನ ಸ್ನಾತಕೋತ್ತರ ವಿದ್ಯಾರ್ಥಿಗಳ ಶಿಷ್ಯವೇತನ ಕೂಡ ಸಂಪೂರ್ಣ ಬಿಡುಗಡೆಯಾಗಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗುತ್ತಿದೆ ಎಂದು ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ಯೋಗದಿಂದ ರೋಗ ಮುಕ್ತ ಜೀವನ ಸಾಧ್ಯ: ಎಂಎಲ್‌ಸಿ ಸಂಕನೂರ

ಆದ್ದರಿಂದ ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ವಿದ್ಯಾರ್ಥಿ ಯುವ ಜನರ ಈ ಬೇಡಿಕೆ ಈಡೇರಿಸಿ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ತು ರಾಯಚೂರು ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ತು ಜಿಲ್ಲಾ ಸಂಚಾಲಕ ಮೌನೇಶ್ ಜಾಲವಾಡಗಿ, ರಾಯಚೂರು ಸಾಮಾಜಿಕ ಮುಖಂಡರಾದ ವಿಶ್ವನಾಥ ಪಟ್ಟಿ, ಈರಣ್ಣ ಡಿಎಸ್ಎಸ್, ಶರಣಬಸವ ಹಾಗೂ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...