ಕಾಂಗ್ರೆಸ್ ಪಕ್ಷದಿಂದ ಸತತವಾಗಿ 4 ಬಾರಿ ಶಾಸಕರಾಗಿ ಆಯ್ಕೆಯಾದ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ಸಂಘದ ಪ್ರಧಾನ ಕಾರ್ಯದರ್ಶಿ ಆದೋನಿ ಆದಿರಾಜ ಆಗ್ರಹಿಸಿದರು.
ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ʼಚಾಮರಾಜನಗರ ಜಿಲ್ಲೆಯಲ್ಲಿ ಜನಪ್ರಿಯ ಶಾಸಕರಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿರುವ ಪುಟ್ಟರಂಗಶೆಟ್ಟಿ ಅವರು ರಾಜ್ಯದಲ್ಲಿ ಉಪ್ಪಾರ ಸಮಾಜದ ಏಕೈಕ ಶಾಸಕರಾಗಿದ್ದಾರೆ. ಉಪ್ಪಾರ ಸಮಾಜದ ರಾಜ್ಯಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆʼ ಎಂದರು.
ಹಿಂದುಳಿದ ಸಮಾಜದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಷ್ಟ್ರೀಯ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ವಕ್ಫ್ ವಿರುದ್ಧ ಹೋರಾಟ : ಯತ್ನಾಳ ನೇತ್ರತ್ವದ ತಂಡಕ್ಕೆ ಬಿಜೆಪಿಗರಿಂದಲೇ ವಿರೋಧ!
ಪತ್ರಿಕಾಗೋಷ್ಠಿಯಲ್ಲಿ ಉಪ್ಪಾರ ಸಮಾಜ ಸಂಘದ ಅಧ್ಯಕ್ಷ ಎನ್. ಬಗ್ಗಾರೆಡ್ಡಿ, ಅಮರೇಶ ಆದೋನಿ, ಈರೇಶ, ಪಾಂಡುರಂಗ, ಸಿದ್ಧಲಿಂಗಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
