ಉತ್ತರ ಪ್ರದೇಶದ ಲಖೀಂಪುರ ಖೇರಿ ರೈತರ ಹತ್ಯಾಕಾಂಡದ ಸಂಚುಕೋರ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕೆಂದು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಕಾರ್ಯಕರ್ತರು ಕಪ್ಪುಪಟ್ಟಿ ಕಟ್ಟಿಕೊಂಡು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದರು.
“ವಿದ್ಯುತ್ ತಿದ್ದುಪಡಿ ಮಸೂದೆ 2022ನ್ನು ರದ್ದುಪಡಿಸಬೇಕು, ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು, ಐತಿಹಾಸಿಕ ದೆಹಲಿ ಹೋರಾಟದ ಸಂದರ್ಭದಲ್ಲಿ ಹಾಕಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು, ಪ್ರವಾಹ ಹಾಗೂ ಬರಗಾಲದ ಪ್ರಕೃತಿ ವಿಕೋಪಗಳಿಗೆ ಪರಿಹಾರ ಒದಗಿಸಬೇಕು, ಕೃಷಿ ಉತ್ಪನ್ನಗಳ ಕನಿಷ್ಟ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಮಾಡಬೇಕು” ಎಂದು ಒತ್ತಾಯಿಸಿದರು.
“ಪ್ರತಿಯೊಂದು ದುಡಿಮೆಗೂ ಜೀವನಾವಶ್ಯಕ ಕನಿಷ್ಟ ವೇತನವಾಗಿ ಮಾಸಿಕ ₹26 ಸಾವಿರ ನಿಗದಿಪಡಿಸಬೇಕು. ರೈತರ ಹಾಗೂ ಎಲ್ಲ ಗ್ರಾಮೀಣ ಜನರ ಸಾಲಗಳನ್ನು ಮನ್ನಾ ಮಾಡಬೇಕು. ಪ್ರತಿಯೊಬ್ಬರಿಗೂ ಕನಿಷ್ಟ ₹10,000 ನಿವೃತ್ತಿ ವೇತನ ಹಾಗೂ ಸಾಮಾಜಿಕ ಭದ್ರತೆ ಒದಗಿಸಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ 200 ದಿನಗಳ ಉದ್ಯೋಗ ಹಾಗೂ ಕನಿಷ್ಟ ₹600 ಕೂಲಿ ನೀಡಬೇಕು” ಎಂದು ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಭಿಕ್ಷೆ ಬೇಡದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಕಿರುಕುಳ; ಲೈಂಗಿಕ ಅಲ್ಪಸಂಖ್ಯಾತರ ಆರೋಪ
ಪ್ರತಿಭಟನೆಯಲ್ಲಿ ಹಲವು ಸಂಘಟನೆಗಳ ಮುಖಂಡರುಗಳಾದ ಪ್ರಭಾಕರ್ ಪಾಟೀಲ್, ಕೆ ಜಿ ವೀರೇಶ, ಡಿ ಎಸ್ ಶರಣ ಬಸವ, ಎಚ್ ಪದ್ಮಾ, ಬೂದಯ್ಯ ಸ್ವಾಮಿ ಗಬ್ಬೂರು, ಮಲ್ಲಣ್ಣ ದಿನ್ನಿ, ಎಸ್ ಮಾರೆಪ್ಪ, ಖಾಜಾ ಅಸ್ಲಂ ಅಹಮದ್, ಶ್ರೀನಿವಾಸ ಕೊಪ್ಪರ ಸೇರಿದಂತೆ ಇತರರು ಇದ್ದರು.
ವರದಿ : ಹಫೀಜುಲ್ಲ