ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ನೀಡಿರುವ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದಿಂದ ಜೂನ್ 3ರಂದು ಕಲಬುರಗಿ ಶಿಕ್ಷಣ ಆಯುಕ್ತ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುತ್ತದೆ ಎಂದು ಸಂಘದ ಜಿಲ್ಲಾಧ್ಯಕೆ ಎಚ್ ಪದ್ಮಾ ಹೇಳಿದ್ದಾರೆ.
ರಾಯಚೂರು ನಗರದಲ್ಲಿ ಆಯೋಜಿಸಿದ್ದ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಸರ್ಕಾರದಿಂದ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಿರುವದರಿಂದ ಅಂಗನವಾಡಿ ಶಾಲೆಗಳು ಮುಚ್ಚಿ ಹೋಗಲಿವೆ. ಹಾಗಾಗಿ ಅಂಗನವಾಡಿ ಕೇಂದ್ರಗಳನ್ನೇ ಎಲ್‌ಕೆಜಿ, ಯುಕೆಜಿ ಕೇಂದ್ರಗಳನ್ನಾಗಿ ಪರಿವರ್ತಿಸಬೇಕು” ಎಂದು ಆಗ್ರಹಿಸಿದರು.
“ಈಗಾಗಲೇ ಅನೇಕ ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿ ವಿರೋಧಿಸಿದ್ದರೂ ಸರ್ಕಾರ ಈ ವರ್ಷದಿಂದಲೇ ಎಲ್‌ಕೆಜಿ, ಯುಕೇಜಿ ಶಾಲೆಗಳನ್ನು ಪ್ರಾರಂಭಿಸಲು ಆದೇಶ ನೀಡಿ ಪ್ರಕ್ರಿಯೆ ಪ್ರಾರಂಭಿಸಿದೆ. ಮಕ್ಕಳ ಕಲಿಕೆ ಹಾಗೂ ಆರೋಗ್ಯಕ್ಕೆ ಒತ್ತು ನೀಡಿ ಅಂಗನವಾಡಿ ಕಾರ್ಯಕರ್ತೆಯರು ಕಳೆದ ಹತ್ತಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿವೆ” ಎಂದರು.
ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳು ಹಾಗೂ ಗರ್ಭಿಣಿಯರ ಆರೋಗ್ಯ ಕಾರ್ಯಕ್ರಮಗಳೊಂದಿಗೆ ಸರ್ಕಾರ ನಡೆಸುವ ಸಮೀಕ್ಷೆಗಳು, ಕಾರ್ಯಕ್ರಮಗಳನ್ನು ನಿರ್ವಹಿಸಲಾಗುತ್ತಿದೆ. ಸರ್ಕಾರದ ನಿರ್ಧಾರದಿಂದ ಅಂಗನವಾಡಿ ಕೇಂದ್ರಗಳು ಮುಚ್ಚಿಹೋಗಿ ಉದ್ಯೋಗ ಕಳೆದುಕೊಳ್ಳುವ ಭೀತಿ ಸಾಧ್ಯತೆಗಳಿವೆ. ಕಾರಣ ಕೂಡಲೇ ಸರ್ಕಾರದಿಂದ ಹೊಸದಾಗಿ ಪ್ರಾರಂಭಿಸಲಾಗುವ ಎಲ್‌ಕೆಜಿ, ಯುಕೆಜಿ ಶಾಲೆಗಳೆಂದು ಅಂಗನವಾಡಿ ಕೇಂದ್ರಗಳನ್ನೇ ಮೇಲ್ದರ್ಜೆಗೇರಿಸಬೇಕೆಂದು ಹೋರಾಟ ನಡೆಯಲಿದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಕರ್ನಾಟಕಕ್ಕೆ ಹರಿದುಬರುತ್ತಿದ್ದ ನೀರು ತಡೆದ ಮಹಾರಾಷ್ಟ್ರ; ಬ್ಯಾರೇಜ್ ಸುತ್ತ ಪೊಲೀಸ್ ನಿಯೋಜನೆ
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಹೋರಾಟದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವರಲಕ್ಷ್ಮಿ, ರಂಗಮ್ಮ, ಡಿ ಎಸ್ ಶರಣಬಸವ ಇದ್ದರು.
ವರದಿ : ಹಫೀಜುಲ್ಲ
