ರಾಯಚೂರು | ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಪ್ರಾರಂಭಕ್ಕೆ ನೀಡಿರುವ ಆದೇಶ ಹಿಂಪಡೆಯಲು ಒತ್ತಾಯಿಸಿ; ಜೂ.3ರಂದು ಪ್ರತಿಭಟನೆ

Date:

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ನೀಡಿರುವ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದಿಂದ ಜೂನ್‌ 3ರಂದು ಕಲಬುರಗಿ ಶಿಕ್ಷಣ ಆಯುಕ್ತ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುತ್ತದೆ ಎಂದು ಸಂಘದ ಜಿಲ್ಲಾಧ್ಯಕೆ ಎಚ್ ಪದ್ಮಾ ಹೇಳಿದ್ದಾರೆ.

- Advertisement -

ರಾಯಚೂರು ನಗರದಲ್ಲಿ ಆಯೋಜಿಸಿದ್ದ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಸರ್ಕಾರದಿಂದ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಿರುವದರಿಂದ ಅಂಗನವಾಡಿ ಶಾಲೆಗಳು ಮುಚ್ಚಿ ಹೋಗಲಿವೆ. ಹಾಗಾಗಿ ಅಂಗನವಾಡಿ ಕೇಂದ್ರಗಳನ್ನೇ ಎಲ್‌ಕೆಜಿ, ಯುಕೆಜಿ ಕೇಂದ್ರಗಳನ್ನಾಗಿ ಪರಿವರ್ತಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಈಗಾಗಲೇ ಅನೇಕ ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿ ವಿರೋಧಿಸಿದ್ದರೂ ಸರ್ಕಾರ ಈ ವರ್ಷದಿಂದಲೇ ಎಲ್‌ಕೆಜಿ, ಯುಕೇಜಿ ಶಾಲೆಗಳನ್ನು ಪ್ರಾರಂಭಿಸಲು ಆದೇಶ ನೀಡಿ ಪ್ರಕ್ರಿಯೆ ಪ್ರಾರಂಭಿಸಿದೆ. ಮಕ್ಕಳ ಕಲಿಕೆ ಹಾಗೂ ಆರೋಗ್ಯಕ್ಕೆ ಒತ್ತು ನೀಡಿ ಅಂಗನವಾಡಿ ಕಾರ್ಯಕರ್ತೆಯರು ಕಳೆದ ಹತ್ತಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿವೆ” ಎಂದರು.

ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳು ಹಾಗೂ ಗರ್ಭಿಣಿಯರ ಆರೋಗ್ಯ ಕಾರ್ಯಕ್ರಮಗಳೊಂದಿಗೆ ಸರ್ಕಾರ ನಡೆಸುವ ಸಮೀಕ್ಷೆಗಳು, ಕಾರ್ಯಕ್ರಮಗಳನ್ನು ನಿರ್ವಹಿಸಲಾಗುತ್ತಿದೆ. ಸರ್ಕಾರದ ನಿರ್ಧಾರದಿಂದ ಅಂಗನವಾಡಿ ಕೇಂದ್ರಗಳು ಮುಚ್ಚಿಹೋಗಿ ಉದ್ಯೋಗ ಕಳೆದುಕೊಳ್ಳುವ ಭೀತಿ ಸಾಧ್ಯತೆಗಳಿವೆ. ಕಾರಣ ಕೂಡಲೇ ಸರ್ಕಾರದಿಂದ ಹೊಸದಾಗಿ ಪ್ರಾರಂಭಿಸಲಾಗುವ ಎಲ್‌ಕೆಜಿ, ಯುಕೆಜಿ ಶಾಲೆಗಳೆಂದು ಅಂಗನವಾಡಿ ಕೇಂದ್ರಗಳನ್ನೇ ಮೇಲ್ದರ್ಜೆಗೇರಿಸಬೇಕೆಂದು ಹೋರಾಟ ನಡೆಯಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಕರ್ನಾಟಕಕ್ಕೆ ಹರಿದುಬರುತ್ತಿದ್ದ ನೀರು ತಡೆದ ಮಹಾರಾಷ್ಟ್ರ; ಬ್ಯಾರೇಜ್‌ ಸುತ್ತ ಪೊಲೀಸ್‌ ನಿಯೋಜನೆ

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಹೋರಾಟದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವರಲಕ್ಷ್ಮಿ, ರಂಗಮ್ಮ, ಡಿ ಎಸ್ ಶರಣಬಸವ ಇದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...