ರಾಯಚೂರು | ಆರಗ ಜ್ಞಾನೇಂದ್ರ ಶಾಸಕತ್ವ ಅನರ್ಹತೆಗೆ ಆಗ್ರಹ

Date:

Advertisements

ಕಲ್ಯಾಣ ಕರ್ನಾಟಕ ಭಾಗದ ಜನರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಅವಮಾನಿಸಿರುವ ಆರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಡಾ.ರಜಾಕ್ ಉಸ್ತಾದ್ ಆಗ್ರಹಿಸಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಪಶ್ಚಿಮ ಘಟ್ಟಗಳಲ್ಲಿ ಡಾ. ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಆರಗ ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಬಣ್ಣ ಮತ್ತು ಖಂಡ್ರೆ ಅವರ ಕೂದಲಿನ ಬಗ್ಗೆ ಅವಹೇಳನಕಾರಿಯಾಗಿ ಮಾತಡಿದ್ದು, ತಮ್ಮ ಕುಚೋಧ್ಯತನ ಪ್ರದರ್ಶಿಸಿದ್ದಾರೆ. ಅವರ ಹೇಳಿಕೆ ಇಡಿ ಸಮಾಜವೇ ನಾಚಿಕೆಪಡುವಂತಾಗಿದೆ” ಎಂದು ಕಿಡಿಕಾರಿದ್ದಾರೆ.

“ಕಸ್ತೂರಿ ರಂಗನ್‌ ವರದಿ ಜಾರಿಗೊಳಿಸುವ ಕುರಿತು ಪರ ವಿರೋಧ ನಿಲುವುಗಳಿವೆ. ವರದಿ ಅನುಷ್ಟಾನ ಕುರಿತು ಕೇಂದ್ರ ಸರ್ಕಾರವೇ ನಿರ್ಧರಿಸಬೇಕಿದೆ. ಅವರದ್ದೇ ಪಕ್ಷ ಕೇಂದ್ರದಲ್ಲಿದೆ. ಅವರ ಮೇಲೆ ಒತ್ತಡ ಹಾಕುವದನ್ನು ಬಿಟ್ಟು, ಕಲ್ಯಾಣ ಕರ್ನಾಟಕ ಭಾಗದ ಜನರನ್ನು ನಿಂಧಿಸಿರುವದು ಖಂಡನೀಯ” ಎಂದರು.

Advertisements

“ಬಿಜೆಪಿಗರು ಸೋಲು ಅರಗಿಸಿಕೊಳ್ಳಲಾಗದ ಸ್ಥಿತಿಯಲ್ಲಿದ್ದಾರೆ. ಮನಬಂದಂತೆ ಮಾತನಾಡುತ್ತಿದ್ದಾರೆ. ಸಂವಿಧಾನ ಹೆಸರಿನಲ್ಲಿ ಪ್ರಮಾಣ ಪತ್ರ ಸ್ವೀಕಾರ ಮಾಡಿದ ಅವರು, ಸಂವಿಧಾನ ವಿರೋಧಿಯಾಗಿ ವರ್ತಿಸುತ್ತಿದ್ದಾರೆ. ಕೂಡಲೇ ರಾಜ್ಯಪಾಲರು ಅವರ ಶಾಸಕತ್ವ ಅನರ್ಹಗೊಳಿಸಬೇಕು. ಬಿಜೆಪಿ ನಾಯಕರು ಜ್ಞಾನೇಂದ್ರ ಅವರನ್ನು ಉಚ್ಛಾಟಿಸಬೇಕು” ಎಂದು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅಮರೇಗೌಡ ಹಂಚಿನಾಳ, ಸುಧೀಂಧ್ರ ಜಹಗೀರದಾರ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

Download Eedina App Android / iOS

X