ರಾಯಚೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ ; ವಕೀಲರ ಪ್ರತಿಭಟನೆ

Date:

Advertisements

ವಕೀಲರ ವಿವಿಧ ಪ್ರಮುಖ 13 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲೆಯಾದ್ಯಂತ ವಕೀಲರು ಪ್ರತಿಭಟನೆ ನಡೆಸಿ ವಕೀಲರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಮತ್ತು ಕಾನೂನು ಸಚಿವರಿಗೆ ಮನವಿ ಸಲ್ಲಿಸಿದರು.

ಪೊಲೀಸರ ಏಕಪಕ್ಷೀಯ ವರ್ತನೆಗಳಿಂದ ವಕೀಲರಿಗೆ ರಕ್ಷಣೆ ನೀಡಬೇಕು ಮತ್ತು ವಕೀಲರ ಸಂರಕ್ಷಣೆ ಕಾಯ್ದೆ-2024ಕ್ಕೆ ಸೂಕ್ತ ತಿದ್ದುಪಡಿಯಾಗಬೇಕು. ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯದ ಮಾರ್ಗಸೂಚಿಯನ್ನು ಪಾಲಿಸಬೇಕು. ಕಾನೂನು ವಿದ್ಯಾರ್ಥಿಗಳನ್ನು ಗೊಂದಲಕ್ಕೆ ತಳ್ಳುವ ಮತ್ತು ಅವರ ಭವಿಷ್ಯವನ್ನು ಅಭದ್ರತೆಯಲ್ಲಿಡುವ ಅವೈಜ್ಞಾನಿಕ ಅಖಿಲ ಭಾರತ ಬಾರ್ ಪರೀಕ್ಷೆ (AIBE) ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.

ಕಿರಿಯ ವಕೀಲರ ವೃತ್ತಿ ಆರಂಭದ ಬದುಕಿಗೆ ಪೂರಕವಾಗುವಂತೆ, BCI ನಿರ್ದೇಶನದಂತೆ 3 ವರ್ಷಗಳ ಕಾಲ ಮಾಸಿಕ ರೂ.20,000/- ಸಹಾಯಧನ ನೀಡಬೇಕು. ರಾಜ್ಯದ ಎಲ್ಲಾ ತಾಲ್ಲೂಕು ವಕೀಲರ ಸಂಘಗಳಿಗೆ ವರ್ಷಕ್ಕೆ ರೂ. 5 ಲಕ್ಷ ಅನುದಾನ ಮಂಜೂರು ಮಾಡಬೇಕು ಮತ್ತು ಜಿಲ್ಲಾ ವಕೀಲರ ಸಂಘಗಳಿಗೆ ರೂ. 10 ಲಕ್ಷ ರೂಪಾಯಿಗಳ ಅನುದಾನ ಮಂಜೂರು ಮಾಡಬೇಕು ಹಾಗೂ ವಕೀಲರಿಗೆ ಅವರ ಕಲ್ಯಾಣ ನಿಧಿಯಿಂದ 25 ಲಕ್ಷ ಹಣವನ್ನು ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರವು ವಕೀಲರಿಗೆ ಕಡ್ಡಾಯವಾಗಿ ವೈದ್ಯಕೀಯ ಮತ್ತು ಜೀವ ವಿಮಾ ಸೌಲಭ್ಯವನ್ನು ಒದಗಿಸಬೇಕು. ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣಗಳಲ್ಲಿ ವಕೀಲರ ಅಕಾಡೆಮಿಗಳನ್ನು ಸ್ಥಾಪಿಸಬೇಕು. ಕರ್ನಾಟಕ ರಾಜ್ಯದಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಸ್ಥಾಪಿಸಲು ಮುಂದಾಗಬೇಕು. ಹಾಗೆಯೇ ಈಗಿರುವ ನ್ಯಾಯಾಲಯಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ರಾಜ್ಯದಲ್ಲಿನ ಎಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರಿಗೆ ಚೇಂಬರ್‌ಗಳನ್ನು ಸ್ಥಾಪಿಸಬೇಕು. ವ್ಯಾಪಕ ಭ್ರಷ್ಟಾಚಾರವನ್ನು ತಡೆದು ಕಂದಾಯದ ವಿಚಾರಗಳನ್ನು ಕಾನೂನು ಪಾಲನೆಗೆ ಒಗ್ಗಿಸಿಕೊಳ್ಳುವ ನಿಟ್ಟಿನಲ್ಲಿ ರೆವೆನ್ಯೂ ಎಸಿ, ಡಿಸಿ ನ್ಯಾಯಾಲಯಗಳಲ್ಲಿ ನಡೆಯುವ ಕಂದಾಯ ಪ್ರಕರಣಗಳಲ್ಲಿ ಬೇರೆ ಬೇರೆ ರೀತಿಯ ಒತ್ತಡಗಳು ಮತ್ತು ವಿಳಂಬದ ಕಾರಣ ಸರಿಯಾದ ರೀತಿಯಲಿ ವಿಚಾರಣೆ ನಡೆಯದೆ ಸಕ್ರಮವಾದ ತೀರ್ಪುಗಳು ಆಗದೆ ಇರುವದರಿಂದ ಕಂದಾಯ ಪ್ರಕಣಗಳನ್ನು ಸಿವಿಲ್ ನ್ಯಾಯಾಲಯಗಳಿಗೆ ವರ್ಗಾಯಿಸಲು ಕ್ರಮ ತೆಗೆದುಕೊಳ್ಳಬೇಕು. ವಕೀಲರಿಗೆ ಟೋಲ್ ಶುಲ್ಕ ರಹಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಣ ದುರ್ಬಳಕೆ ಪಿಡಿಒ ಅಮಾನತು

ರಾಜ್ಯದ ಪ್ರತಿ ಜಿಲ್ಲೆಗೆ ಒಂದರಂತೆ ಸರ್ಕಾರಿ ಕಾನೂನು ಕಾಲೇಜುಗಳನ್ನು ಸ್ಥಾಪಿಸಬೇಕು ಹಾಗೂ ಈಗಿರುವ ಅನುದಾನಿತ & ಖಾಸಗಿ ಕಾನೂನು ಕಾಲೇಜುಗಳ ಶುಲ್ಕವನ್ನು ಸರ್ಕಾರ ನಿಯಂತ್ರಣ ಮಾಡಬೇಕು. ಹಾಲಿ ಇರುವ ಸರ್ಕಾರಿ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಕಛೇರಿಯನ್ನು ವಿಭಾಗೀಯ ಮಟ್ಟದಲ್ಲಿ ಸ್ಥಾಪಿಸಬೇಕು.

ವಕೀಲರ ಸಂಘದ ಪರಿಷತ್ತಿನ ಚುನಾವಣೆಯಲ್ಲಿ ಮಹಿಳಾ ವಕೀಲರಿಗೆ ಶೇ.33 ರಷ್ಟು ಮೀಸಲಾತಿ ನೀಡಬೇಕು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರಿಗೆ ಮೀಸಲಾತಿ ಅನುಸಾರ ಪ್ರಾತಿನಿತ್ಯ ನೀಡಬೇಕು ಎಂದು ವಕೀಲರಿಂದ ಸಹಿ ಸಂಗ್ರಹಿಸಿದ ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಮತ್ತು ರಾಜ್ಯ ವಕೀಲರ ಪರಿಷತ್ತು ಈ ಬೇಡಿಕೆಗಳನ್ನು ಒಂದು ತಿಂಗಳೊಳಗಾಗಿ ಈಡೇರಿಸದೆ ಇದ್ದಲ್ಲಿ ವಕೀಲರಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿ ತಮ್ಮ ನಡೆಯನ್ನು ವಿಧಾನಸೌಧ ಮತ್ತು ವಕೀಲರ ಪರಿಷತ್‌ಗಳ ಕಡೆ ನಡೆಸಬೇಕಾಗುತ್ತದೆ ಎಂದು ಅಖಿಲ ಭಾರತ ವಕೀಲರ ಒಕ್ಕೂಟದ ಎಚ್ಚರಿಕೆ ನೀಡಿದರು.

ಈ ವೇಳೆ AILU ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಶಶಿಧರಗೌಡ ಕೆಲ್ಲೂರು, ಕಾರ್ಯದರ್ಶಿ ಜಿ.ಎಸ್. ವೀರಭದ್ರಪ್ಪ, ಮುಖಂಡರಾದ ಶಿವಕುಮಾರ ಮ್ಯಾಗಳಮನಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಯಚೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಲಕ್ಷ್ಮಪ್ಪ ಭಂಡಾರಿ, ಖಜಾಂಚಿ ಸೈಯದ್ ನವಾಜ್ ಪಾಷ, ವಕೀಲರಾದ ಈರಮ್ಮ, ರೇಣುಕಾ, ಶಾಂತಿಕುಮಾರಿ, ಶಾಂತಾ ನಾಯಕ, ಗಾಯಿತ್ರಿ, ಸೌಮ್ಯ, ಶಶಿಕಲಾ,ತೇಜಸ್ವಿನಿ, ಆಶಾ ಜ್ಯೋತಿ, ದೀಪಿಕಾ ಪಾಟೀಲ್, ಉಮಾ, ಸುಷ್ಮಾ ಪಾಟೀಲ್, ಬನಶಂಕರಿ, ರೋಹಿಣಿ, ಜೈ ನೀಲಕಂಠ ರಾವ್, ಎಚ್. ದೊಡ್ಡಪ್ಪ, ಲಕ್ಷ್ಮೀಕಾಂತ್, ಹನುಮಂತಪ್ಪ, ತಾಯಪ್ಪ ಭಂಡಾರಿ, ಕೆ, ಪ್ರಹ್ಲಾದ್ ರಾವ್, ಗೌರೀಶ್ ಸ್ವಾಮಿ, ಮಹಾದೇವ, ಮಲ್ಲಪ್ಪ ಚೆನ್ನಪ್ಪ, ಹನುಮಂತರೆಡ್ಡಿ, ಮರಿಯಪ್ಪ, ರವೀಂದ್ರ, ಮಲ್ಲೇಶಪ್ಪ, ಗೋಪಾಲ ಕೃಷ್ಣ, ಚಂದ್ರ ಮಗಳಿ, ಶ್ರೀಕಾಂತ್, ಶೊಯಬ್, ಪಣಿಶ್ರೀ, ಬಸವನಗೌಡ, ಆಂಜನೇಯ, ಸುನೀಲ್, ಚೇತನ್, ಸಾಗರ್, ಜಯಪಾಲ್, ರಾಮಪ್ಪ, ಜಕ್ಕಯ್ಯ, ನರಸಪ್ಪ,ನೀಲಕಂಠ, ಸುರೇಶ್ ಬಾಬು, ಮೌನೇಶ್, ಓಂಕಾರ್ ಯಾದವ್, ಸಂತಾನ‌್ ಸೇರಿದಂತೆ ಅನೇಕರಿದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X