ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದನ್ನು ಖಂಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಜಾತ್ಯತೀತ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಬ್ರಿಗೇಡ್ ಜಿಲ್ಲಾ ಘಟಕದ ವತಿಯಿಂದ ರಾಯಚೂರು ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.
ವಕ್ಫ್ ಬೋರ್ಡ್ ಆಸ್ತಿಯ ವಿಚಾರವಾಗಿ ಮಾತನಾಡುವಾಗ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮುಸ್ಲಿಂ ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಹಾಗೂ ಸಂವಿಧಾನ ವಿರೋಧಿ ಹೇಳಿಕೆ ನೀಡಿ ಜನರಲ್ಲಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಸರ್ವ ಜನಾಂಗದ ಶಾಂತಿಯ ತೋಟ ಎಂಬ ರಾಜ್ಯದಲ್ಲಿ ಎಲ್ಲರನ್ನೂ ಸಮಾನವಾಗಿ ಗೌರವದಿಂದ ಕಾಣುತ್ತೇವೆ ಎಂದು ಪ್ರಮಾಣ ವಚನ ಸ್ವೀಕರಿಸಿ ಈಗ ಒಂದು ಸಮುದಾಯದವ ವಿರುದ್ಧ ಬಹಿರಂಗವಾಗಿ ಕೆಂಡಕಾರುತ್ತ ಸಂವಿಧಾನಕ್ಕೆ ಅವಮಾನ ಮಾಡುತ್ತಿದ್ದಾರೆ ಎಂದು ದೂರಿದರು.
ಕೂಡಲೇ ಬಸನಗೌಡ ಪಾಟೀಲ ಯತ್ನಾಳ್ ಬಹಿರಂಗವಾಗಿ ಕ್ಷಮೆ ಕೇಳಬೇಕು. ಮತ್ತು ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಬೆಳೆ ಖರೀದಿ ಕೇಂದ್ರ ಸ್ಥಾಪಿಸಿ, ವೈಜ್ಞಾನಿಕ ಬೆಲೆ ನಿಗದಿಪಡಿಸಿ: ರೈತ ಸಂಘ ಆಗ್ರಹ
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಾಜೀದ್ ಹುಸೇನ್, ರಾಜ್ಯ ಕಾರ್ಯದರ್ಶಿ ತಿಮ್ಮಪ್ಪ ಸ್ವಾಮಿ, ಉಪಾಧ್ಯಕ್ಷ ವಿ.ಎಸ್ ಯಲ್ಲಪ್ಪ, ಸಿದ್ದಪ್ಪ ಮನ್ಸಲಾಪೂರು, ತಾಜುದ್ದೀನ್ ಖಾನ್, ಯಲ್ಲಪ್ಪ ಭಂಡಾರಿ ಉಪಸ್ಥಿತರಿದ್ದರು.
