ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆಂಬ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ನಡೆದಿದೆ.
ಸಿಂಧನೂರಿನ ಆರ್.ಹೆಚ್ ಕಾಲೋನಿಯಲ್ಲಿ ಭಾನುವಾರಿ ರಾತ್ರಿ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿದ್ದು, ನಾಲ್ವರು ಯುವಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಕೋಮಿನ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿ, ಸಿಂಧನೂರಿನ ಕೆಲವು ಯುವಕರು ಬಂಗಾಳಿ ಕ್ಯಾಂಪ್‌ಗೆ ಹೋಗಿ ಗಲಾಟೆ ಮಾಡಿದ್ದಾರೆ. ಅಲ್ಲಿನ ಸ್ಥಳೀಯರು ಮತ್ತು ಯುವಕರು ಕೈ-ಕೈ ಮಿಲಾಯಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪವಿತ್ರೋ ಬಿಸ್ವಾಸ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.
ದೂರು ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಸ್ತಿತಿ ನಿಯಂತ್ರಿಸಿದ್ದಾರೆ. ಜಿಲ್ಆ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರು ತಡರಾತ್ರಿವರೆಗೂ ಸ್ಥಳದಲ್ಲಿದ್ದು, ಮಾಹಿತಿ ಪಡೆದಿದ್ದಾರೆ. ಬಿಸ್ವಾಸ್ ಅವರ ದೂರಿನ ಆಧಾರದ ಮೇಲೆ ಅಕ್ಬರ್, ಶಾಮೀದ್, ತಾಜುದ್ದೀನ್, ಸಮೀರ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಿಂದ ಕ್ಯಾಂಪ್‌ನಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸೋಮವಾರ ಬೆಳಿಗ್ಗೆ ಬಂಗಾಲಿ ಕ್ಯಾಂಪಿನ ನೂರಾರು ಯುವಕರು ನಗರದ ಮಿನಿ ವಿಧಾನಸೌಧದ ಎದುರು ಜಮಾಯಿಸಿ, ಪ್ರತಿಭಟನೆ ನಡೆಸಿದ್ದಾರೆ.