ಅಂಬೇಡ್ಕರ್ ಅಪಮಾನ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನ ಪರಿಷತ್ ಸದನದಲ್ಲಿ ಪ್ರತಿಭಟಿಸುವಾಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿ ಟಿ ರವಿ ಅವಾಚ್ಯ ಶಬ್ದದಿಂದ ನಿಂದಿಸಿರುವುದರಿಂದ ಕೂಡಲೇ ಆತನನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಕಾಂಗ್ರೆಸ್ ನಾಯಕಿ ಶ್ರೀದೇವಿ ನಾಯಕ ಆಗ್ರಹಿಸಿದರು.
“ಗೃಹಮಂತ್ರಿ ಅಮಿತ್ ಶಾ ಸಂಸತ್ತಿನಲ್ಲಿ ಮಾತನಾಡುವಾಗ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ ಅಂಬೇಡ್ಕರ್ ಅವರನ್ನು ಅಪಮಾನ ಮಾಡಿದ್ದಾರೆಂದು ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನ ಪರಿಷತ್ ಸದನದಲ್ಲಿ ಪ್ರತಿಭಟಿಸುವಾಗ ಸಿಟಿ ರವಿ ತಾಳ್ಮೆ ಕಳೆದುಕೊಂಡು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ” ಎಂದು ಕಿಡಿಕಾರಿದರು.
“ಬಿಜೆಪಿಗರ ಬೇಟಿ ಪಡಾವ್, ಬೇಟಿ ಬಚಾವ್ ಎಂದು ಚುನಾವಣೆ ಗಿಮಿಕ್ ಮಾಡುತ್ತಿದ್ದಾರೆಯೇ ಹೊರತು ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ಕಡಿಮೆ ಮಾಡಲು ಸಾಧ್ಯವಾಗಿಲ್ಲ. ಈಗ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಂದಿಸಿರುವುದು ಅವರ ಕೀಳು ಮಟ್ಟದ ಮನಸ್ಥಿತಿಯನ್ನು ಸ್ಪಷ್ಟವಾಗಿ ತೋರಿಸುತ್ತಿದೆ” ಎಂದು ಕಿಡಿಕಾರಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಅಂಬೇಡ್ಕರ್ ಕುರಿತ ಹೇಳಿಕೆ : ಗೃಹ ಸಚಿವ ಅಮಿತ್ ಶಾ ವಜಾಕ್ಕೆ ಬಿಎಸ್‌ಪಿ ಆಗ್ರಹ
“ಬಿಜೆಪಿಯವರ ಮಹಿಳೆ ಹಾಗೂ ದಲಿತರ ಪರವಾದ ಸರ್ಕಾರ ನಮ್ಮದು ಎಂಬ ಬಿಜೆಪಿಗರ ಭಾಷಣ ಕೇವಲ ವೇದಿಕೆಗಳಿಗೆ ಸೀಮಿತವಾಗಿದೆ. ಬಿಜೆಪಿ ಸರ್ಕಾರಕ್ಕೆ ಮಹಿಳೆಯರ ಮೇಲೆ ಗೌರವ ಇರುವುದೇ ಆದರೆ ಸಿ ಟಿ ರವಿ ಅವರನ್ನು ಕೂಡಲೇ ಪಕ್ಷದಿಂದ ಉಚ್ಚಾಟಿಸಬೇಕು” ಎಂದು ಆಗ್ರಹಿಸಿದರು.
