ರಾಯಚೂರು | ದೇವದುರ್ಗದ ಶಾಸಕಿ ವಿರುದ್ಧ ಪೊಲೀಸ್‌ ಕ್ವಾಟ್ರಸ್ ಜಾಗ ಒತ್ತುವರಿ ಆರೋಪ: ಕ್ರಮಕ್ಕೆ ಮನವಿ

Date:

ರಾಯಚೂರು ಜಿಲ್ಲೆಯ ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮ ಜಿ ನಾಯಕ ನಿವಾಸ ಪಕ್ಕದಲ್ಲಿದ್ದ ಪೊಲೀಸ್ ಕ್ವಾಟ್ರಸ್ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಸುರೇಶ್ ನಾಯಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

- Advertisement -

ಶಾಸಕಿ ಕರೆಮ್ಮ ನಾಯಕ್ ಇವರು ಸ.ನಂ. 506 ರ ಕೃಷಿ ಭೂಮಿಯಲ್ಲಿ ಸುಮಾರು 10 ಗುಂಟೆಯಷ್ಟು ಜಾಗವನ್ನು ಮನೆ ಕಟ್ಟಿಸಲು ಕೊಂಡುಕೊಂಡಿರುತ್ತಾರೆ. ಮನೆ ಕಟ್ಟಿಸುವ ಸಮಯದಲ್ಲಿ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಸುಮಾರು 10 ಫೀಟ್ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಖಾಸಗಿ ಕಚೇರಿ ಮನೆ ಕಟ್ಟಿಸಿಕೊಂಡಿರುತ್ತಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಶಾಸಕಿ ಕರೆಮ್ಮ ಜಿ ನಾಯಕ ಅವರು ತಮ್ಮ ಮನೆಗೆ ರಸ್ತೆ ನಿರ್ಮಿಸಿಕೊಳ್ಳಲು ಪೊಲೀಸ್‌ ಇಲಾಖೆ ತಮ್ಮ ವ್ಯಾಪ್ತಿಗೆ ಅಳವಡಿಸಿದ ತಂತಿ ಬೇಲಿಯನ್ನು ಕಿತ್ತು ಬಿಸಾಕಿ, ತಮ್ಮ ಮನೆಗೆ ಹೋಗಲು ರಸ್ತೆ ಮಾರ್ಗ ನಿರ್ಮಾಣ ಮಾಡಿದ್ದಾರೆ ಎಂದು ದೂರಿರುವ ಅವರು, ಶಾಸಕರ ಮನೆಗೆ ಹೋಗಲು ಯಾವುದೇ ರಸ್ತೆ ಮಾರ್ಗವಿರುವುದಿಲ್ಲ. ಆದರೂ ಅಧಿಕಾರ ದುರ್ಬಳಕೆ ಮಾಡಿಕೊಂಡು ಅತಿಕ್ರಮಿಸಿದ್ದಾರೆ ಎಂದು ದೂರಿದ್ದಾರೆ.

ಸ. ನಂಬರ್. 509/1 ರ ಮೂಲಕ ರಸ್ತೆ ಮಾಡಿಕೊಂಡು ಹಾದು ಹೋಗುತ್ತಾರೆ. ಪೊಲೀಸ್ ಇಲಾಖೆಗೆ ಸೇರಿದ ಜಾಗ ಸುಮಾರು 5 ಕೋಟಿಗೂ ಅಧಿಕ ಮೌಲ್ಯದ್ದಾಗಿದ್ದು ಶಾಸಕರಾದ ತಮ್ಮ ಗಂಡ ಗೋಪಾಲಕೃಷ್ಣ, ಮಗ ಸಂತೋಷ್, ಸಹೋದರ ತಿಮ್ಮರೆಡ್ಡಿ ಇವರೊಂದಿಗೆ ಸೇರಿಕೊಂಡು ತಮ್ಮ ಮನೆಗೆ ಹೋಗಲು ರಸ್ತೆ ಮಾರ್ಗ ಮಾಡಿಕೊಳ್ಳುವ ಉದ್ದೇಶದಿಂದ ಸುಮಾರು 20 ಅಡಿಯಷ್ಟು ಅಗಲವಾಗಿ ಜೆಸಿಬಿ ಮುಖಾಂತರ ಅತಿಕ್ರಮ ಪ್ರವೇಶ ಮಾಡಿ ತಂತಿ ಬೇಲಿಯನ್ನು ತೆಗಿಸಿ ಹಾಕಿಸಿರುತ್ತಾರೆ ಮತ್ತು ಸರಕಾರಕ್ಕೆ 20 ಲಕ್ಷದಷ್ಟು ನಷ್ಟ ಉಂಟು ಮಾಡಿರುತ್ತಾರೆ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬಾರ್ಡರ್-ಗವಾಸ್ಕರ್ ಟ್ರೋಫಿ | ಟೀಮ್ ಇಂಡಿಯಾಕ್ಕೆ ಸೋಲು; ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಕನಸು ಭಗ್ನ

ಪೊಲೀಸ್ ಇಲಾಖೆಯ ಜಾಗವನ್ನು ವಾಪಸ್ ಪಡೆದು ಒತ್ತುವರಿ ಮಾಡಿಕೊಂಡ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಎಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...