ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂ ಸ್ವಾಧೀನದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಹೋರಾಟಗಾರರನ್ನು ಪೊಲೀಸರು ದೌರ್ಜನ್ಯದಿಂದ ಬಂಧಿಸಿರುವುದು ಖಂಡಿಸಿ ಭೂಮಿ ಮತ್ತು ವಸತಿ ರೈತರ ಹೋರಾಟ ಸಮಿತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯನಪಟ್ಟಣ ಹೋಬಳಿ ವ್ಯಾಪ್ತಿಯ 1700 ಎಕರೆಗೂ ಹೆಚ್ಚು ಖುಶುಭೂಮಿಯನ್ನು ಸ್ವಾಧೀನಕ್ಕೆ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಮುಂದಾಗಿದೆ. ಇದನ್ನು ವಿರೋಧಿಸಿ ರೈತರು ನಿರಂತರ ಶಾಂತಿಯಿಂದ ಹೋರಾಟ ನಡೆಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ಬಂಧಿಸಿರುವುದು ಖಂಡನೀಯ ಎಂದರು
ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಾನು ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭೂ ಸ್ವಾಧೀನ ಪ್ರಕಟಣೆ ರದ್ದುಪಡಿಸುತ್ತೇವೆ ಎಂದು ಭರವಸೆ ನೀಡಿದ್ದರು. ತಮ್ಮ ಮಾತಿನಂತೆ ಭೂಸ್ವಾಧೀನ ಪ್ರಕ್ರಿಯೆ ರದ್ದುಪಡಿಸಿ ಸಿದ್ದರಾಮಯ್ಯ ಸರಕಾರ ಬದ್ಧತೆ ಮೆರೆಯಬೇಕಿತ್ತು. ಆದರೆ ಇದೀಗ ಭೂ ಸ್ವಾಧೀನಕ್ಕೆ ತಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ ಇವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜೂನ್ 23 ರಂದು ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭೂಮಿ ಮತ್ತು ವಸತಿ ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಸಲ್ಲಿಸಲು ಹೋದಾಗ ಯರಗೇರ ಸಿಪಿಐ ಎಸ್.ಲಿಂಗಪ್ಪ ಅವರು ನಮಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಕೂಡಲೇ ಅವರನ್ನು ಅಮಾನತ್ತು ಮಾಡಬೇಕು ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಚರಂಡಿ ,ಬೋರವೆಲ್ ದುರಸ್ತಿಗೆ ಕೆ ಆರ್ ಎಸ್ ಆಗ್ರಹ
ಈ ಸಂದರ್ಭದಲ್ಲಿ ಮಾರೆಪ್ಪ ಹರವಿ , ಮಾರೆಮ್ಮ ನೀರಮಾನ್ವಿ, ಆಂಜನೇಯ ಕುರುಬದೊಡ್ಡಿ, ಲಾಲಪ್ಪ, ಶಿವರಾಜ, ನರಸಿಂಹಲು ಹನುಮಂತ ಸೇರಿದಂತೆ ಇತರರು ಉಪಸ್ಥಿತರಿದ್ದರು.