ಕೇಂದ್ರದ ಗೃಹಮಂತ್ರಿ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿ ಜನವರಿ 7ರಂದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ ಎಂದು ದಲಿತ ಪರ ಸಂಘಟನೆಗಳ ಒಕ್ಕೂಟ ವತಿಯಿಂದ ಕರೆ ನೀಡಿದರು.
ನಗರದ ಜಹೀರುದ್ದೀನ್ ಪಾಶಾ ಸರ್ಕಲ್‌ನಿಂದ ಮೆರವಣಿಗೆ ಪ್ರಾರಂಭಗೊಂಡು ಅಂಬೇಡ್ಕರ್ ವೃತ್ತದವರೆಗೆ ಅಮಿತ್ ಷಾ ಅಣಕು ಶವಯಾತ್ರೆ ಮತ್ತು ಪ್ರತಿಕೃತಿ ದಹನ ಮಾಡುವ ಮೂಲಕ ಪ್ರತಿಭಟಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ದೇವದುರ್ಗ ತಾಲೂಕಿನ ಆಸ್ಪತ್ರೆ ಮೆಡಿಕಲ್ ಹೊರತುಪಡಿಸಿ ನಗರದ ಅಂಗಡಿ ಮುಂಗ್ಗಟ್ಟುಗಳ ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಿದ್ದಾರೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಂದ್ ಮಾಡುವ ಮೂಲಕ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಲಾಗುವುದು ಎಂದರು.
ಇದನ್ನು ಓದಿದ್ದೀರಾ? ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
ತಾಲೂಕಿನ ಪ್ರಮುಖ ಹೋಬಳಿಗಳು ಕೂಡ ಅರಕೇರ, ಗಬ್ಬೂರು, ಜಾಲಹಳ್ಳಿ ಮತ್ತು ಇತರೆ ಹಳ್ಳಿಗಳಿಂದ ಎಲ್ಲ ಆತ್ಮೀಯ ಸಂಘಟನಾಕಾರರು ಬೆಂಬಲ ಘೋಷಿಸಿದ್ದಾರೆ. ಪೊಲೀಸ್ ಇಲಾಖೆಯವರು ಈ ಹೋರಾಟಕ್ಕೆ ತಮ್ಮ ಸೂಕ್ತ ಪೋಲಿಸ್ ಬಂದೋಬಸ್ತ್ ನೀಡಿ ಸಹಕರಿಸಬೇಕು ಹಾಗೂ ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಬೇಕು ಎಂದು ದಲಿತ ಪರ ಸಂಘಟನೆಗಳ ಒಕ್ಕೂಟ ಮನವಿ ಮಾಡಿದೆ.
