ರಾಯಚೂರು | ಅಂಬೇಡ್ಕರ್‌ಗೆ ಅವಮಾನ: ಅಮಿತ್ ಶಾ ಹೇಳಿಕೆ ಖಂಡಿಸಿ ಜ.7ರಂದು ‘ದೇವದುರ್ಗ ಬಂದ್‌’

Date:

ಕೇಂದ್ರದ ಗೃಹಮಂತ್ರಿ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿ ಜನವರಿ 7ರಂದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ ಎಂದು ದಲಿತ ಪರ ಸಂಘಟನೆಗಳ ಒಕ್ಕೂಟ ವತಿಯಿಂದ ಕರೆ ನೀಡಿದರು.

- Advertisement -

ನಗರದ ಜಹೀರುದ್ದೀನ್ ಪಾಶಾ ಸರ್ಕಲ್‌ನಿಂದ ಮೆರವಣಿಗೆ ಪ್ರಾರಂಭಗೊಂಡು ಅಂಬೇಡ್ಕರ್ ವೃತ್ತದವರೆಗೆ ಅಮಿತ್ ಷಾ ಅಣಕು ಶವಯಾತ್ರೆ ಮತ್ತು ಪ್ರತಿಕೃತಿ ದಹನ ಮಾಡುವ ಮೂಲಕ ಪ್ರತಿಭಟಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ದೇವದುರ್ಗ ತಾಲೂಕಿನ ಆಸ್ಪತ್ರೆ ಮೆಡಿಕಲ್ ಹೊರತುಪಡಿಸಿ ನಗರದ ಅಂಗಡಿ ಮುಂಗ್ಗಟ್ಟುಗಳ ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಿದ್ದಾರೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಂದ್ ಮಾಡುವ ಮೂಲಕ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಲಾಗುವುದು ಎಂದರು.

ಇದನ್ನು ಓದಿದ್ದೀರಾ? ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ತಾಲೂಕಿನ ಪ್ರಮುಖ ಹೋಬಳಿಗಳು ಕೂಡ ಅರಕೇರ, ಗಬ್ಬೂರು, ಜಾಲಹಳ್ಳಿ ಮತ್ತು ಇತರೆ ಹಳ್ಳಿಗಳಿಂದ ಎಲ್ಲ ಆತ್ಮೀಯ ಸಂಘಟನಾಕಾರರು ಬೆಂಬಲ ಘೋಷಿಸಿದ್ದಾರೆ. ಪೊಲೀಸ್ ಇಲಾಖೆಯವರು ಈ ಹೋರಾಟಕ್ಕೆ ತಮ್ಮ ಸೂಕ್ತ ಪೋಲಿಸ್ ಬಂದೋಬಸ್ತ್ ನೀಡಿ ಸಹಕರಿಸಬೇಕು ಹಾಗೂ ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಬೇಕು ಎಂದು ದಲಿತ ಪರ ಸಂಘಟನೆಗಳ ಒಕ್ಕೂಟ ಮನವಿ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...