ರಾಯಚೂರು | ನಗರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಮರೀಚಿಕೆ

Date:

ರಾಯಚೂರು ನಗರಸಭೆ ವ್ಯಾಪ್ತಿಯಲ್ಲಿ ಅಭಿವೃದ್ದಿ ಮರೀಚಿಕೆಯಾಗಿದ್ದು, ಬಹುತೇಕ ಕಾಮಗಾರಿಗಳು ಸ್ಥಗಿತಗೊಂಡಿವೆ. ಇದರಿಂದ ಸಾರ್ವಜನಿಕರಿಗೆ ಆಗುವ ತೊಂದರೆ ಬಗೆಹರಿಸಿ ಮೂಲಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಡಾ.ರಝಾಕ್ ಉಸ್ತಾದ್ ನೇತೃತ್ವದ ನಿಯೋಗ ಪೌರಾಡಳಿತ ಸಚಿವ ರಹೀಮ್‌ ಖಾನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

“ಹಿಂದುಳಿದ ಜಿಲ್ಲೆಯ ರಾಯಚೂರು ನಗರಸಭೆಗೆ ವಿಶೇಷ ಅನುದಾನ ಮಂಜೂರು ಮಾಡುವುದರ ಮೂಲಕ ನಗರದ ಅಭಿವೃದ್ಧಿಗೆ ಸಹಕರಿಸಬೇಕು. ರಾಯಚೂರು ನಗರಸಭೆಯು ಕಳೆದ ಹಲವು ವರ್ಷಗಳಿಂದ ಎಸ್‌ಎಫ್‌ಸಿ 15ನೇ ಹಣಕಾಸು ಯೋಜನೆಯಲ್ಲಿ ಕೈಗೆತ್ತಿಕೊಂಡ ಕಾಮಗಾರಿಗಳು ಟೆಂಡರ್ ಕರೆದು ವರ್ಕ್‌ ಆರ್ಡರ್ ನೀಡಿದ್ದರೂ, ಕೆಲಸ ಪೂರ್ಣಗೊಳಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಅವುಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚಿಸಬೇಕು” ಎಂದು ಒತ್ತಾಯಿಸಿದರು.

“ರಾಯಚೂರು ನಗರವು ಬೆಳೆಯುತ್ತಿರುವ ನಗರವಾದ್ದರಿಂದ, ಸದರಿ ನಗರಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪೌರಕಾರ್ಮಿಕರ ಅವಶ್ಯಕತೆಯಿದ್ದು, ಸದರಿ ಹುದ್ದೆಗಳನ್ನು ಮಂಜೂರು ಮಾಡುವುದು ಹಾಗೂ ನಗರಸಭೆಯು ಕಳೆದ ಹಲವು ವರ್ಷಗಳಿಂದ ಎಸ್‌ಎಫ್‌ಸಿ 15ನೇ ಹಣಕಾಸು ಯೋಜನೆಯಲ್ಲಿ ವೈಯಕ್ತಿಕ ಫಲಾನುಭವಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲಗೊಂಡಿದ್ದು, ಸರ್ಕಾರದ ಉದ್ದೇಶ ವಿಫಲವಾಗಿದೆ”‌ ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಯಚೂರು ನಗರಸಭೆಗೆ ನಗರೋತ್ಥಾನ ಯೋಜನೆ-4ರಲ್ಲಿ ಲಭ್ಯವಿರುವ ಅನುದಾನವನ್ನು ಬಳಸಿಕೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿದ್ದು, ಸದರಿ ಕ್ರಿಯಾ ಯೋಜನೆಯ ಅನುದಾನದ ಹಂಚಿಕೆಯಲ್ಲಿ ತಾರತಮ್ಯವಾಗಿದೆ. ಅದನ್ನು ಪುನಃ ಕ್ರೀಯಾ ಯೋಜನೆ ರೂಪಿಸಿ, ನಗರದ ಎಲ್ಲ ವಾರ್ಡ್‌ಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಕ್ತ ನಿರ್ದೇಶನ ನೀಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಶೀಘ್ರದಲ್ಲಿಯೇ ಮಹಾನಗರ ಪಾಲಿಕೆಯಾಗಿ ರಾಯಚೂರು ನಗರಸಭೆ ಮೇಲ್ದರ್ಜೆಗೆ: ಸಚಿವ ರಹೀಮ್‌ಖಾನ್

“ರಾಯಚೂರು ನಗರವು 75 ವರ್ಷಗಳಿಂದ ಹಂತ ಹಂತವಾಗಿ ಬೆಳೆಯುತ್ತ ಬಂದಿರುವದರಿಂದ ನಗರಸಭೆ ವ್ಯಾಪ್ತಿಗೆ ಹಲವು ಹಳ್ಳಿಗಳನ್ನು ಸೇರಿಸಲಾಗಿದ್ದು, ಸದರಿ ಹಳ್ಳಿಗಳ ವ್ಯಾಪ್ತಿಯಲ್ಲಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಲೇಔಟ್‌ಗಳು ಅನುಮೋದನೆ ಹೊಂದಿರುವುದಿಲ್ಲ. ಅವುಗಳೆಲ್ಲ ಪಂಚಾಯಿತಿ ವ್ಯಾಪ್ತಿಗೆ ಅನುಮೋದನೆ ಪಡೆದಿದ್ದು, ಅಂತಹ ಲೇಔಟ್‌ಗಳಲ್ಲಿ ಖರೀದಿಸಲಾದ ನಿವೇಶನಗಳಿಗೆ, ಮನೆಗಳಿಗೆ ಹಾಗೂ ಹಳೆ ನಗರ ಪ್ರದೇಶದಲ್ಲಿರುವ ನಿವೇಶಗಳು, ಮನೆಗಳಿಗೆ ಮ್ಯುಟೇಶನ್, ಇ-ಖಾತಾ ನೀಡಲು ನಗರಾಭಿವೃದ್ದಿ ಪ್ರಾಧಿಕಾರ ಅನುಮೋದನೆ ನೀಡಬೇಕೆಂದು ನಗರಸಭೆ ಒತ್ತಾಯಿಸುತ್ತಿರುವುದರಿಂದ ಸಾರ್ವಜನಿಕರು ತೊಂದರೆಗೊಳಪಟ್ಟಿರುತ್ತಾರೆ. ಕಾರಣ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಮೋದನೆಗೊಂಡ ಲೇಔಟ್‌ಗಳ ಪಟ್ಟಿಯು ನಗರಸಭೆಯಲ್ಲಿದ್ದು, ಅಂತಹ ಲೇಔಟ್‌ಗಳ ನಿವೇಶನಗಳನ್ನು ಹಾಗೂ ಹಳೆ ನಗರ ಪ್ರದೇಶದಲ್ಲಿರುವ ನಿವೇಶಗಳು, ಮನೆಗಳಿಗೆ ಕೇವಲ ಎನ್ ಎ ಆದೇಶದಂತೆ ಮ್ಯುಟೇಶನ್ ಹಾಗೂ ಇ-ಖಾತಾ ನೀಡುವಂತೆ ನಗರಸಭೆಗೆ ಸೂಕ್ತ ನಿರ್ದೇಶನ ನೀಡಬೇಕು” ಎಂದು ಒತ್ತಾಯಿಸಿದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಬಿಸಿಲಿನ ತಾಪ ಹೆಚ್ಚಳ; ಮೃಗಾಲಯ ತಂಪಾಗಿಡಲು ವಿಶೇಷ ವ್ಯವಸ್ಥೆ

ಪ್ರಸ್ತುತ ವರ್ಷ ಮೈಸೂರು ನಗರದಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿರುವುದರಿಂದ ಮೃಗಾಲಯದ ಪ್ರಾಣಿಗಳು...

ತುಮಕೂರು | ಹಾಲಪ್ಪ ಯಾರು? ಮುದ್ದಹನುಮೇಗೌಡರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ: ಸಚಿವ ರಾಜಣ್ಣ

ಮಾಜಿ ಸಂಸದ ಮುದ್ದಹನುಮೇಗೌಡ ಅವರು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದು,...

ಬೆಂಗಳೂರು | ಕನ್ನಡ ನಾಮಫಲಕ ಕಡ್ಡಾಯ; ತಪ್ಪಿದಲ್ಲಿ ‘ಕರ್ನಾಟಕ ಬಂದ್’: ವಾಟಾಳ್ ನಾಗರಾಜ್ ಎಚ್ಚರಿಕೆ

ಕನ್ನಡ ನಾಮಫಲಕ ಕಡ್ಡಾಯಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಗಡುವು ಮುಗಿಯುವುದರೊಳಗಾಗಿ...

ತುಮಕೂರು | ಲೋಕಸಭಾ ಚುನಾವಣೆಗೆ ಜೆಡಿಎಸ್‌ ಟಿಕೆಟ್‌ ಬೇಡಿಕೆಯಿಟ್ಟ ಕೆ.ಟಿ ಶಾಂತಕುಮಾರ್

ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್...