ರಾಯಚೂರು | ವಸತಿ ನಿಲಯ ಕಾರ್ಮಿಕರ ಬಾಕಿ ವೇತನ ಪಾವತಿಸುವಂತೆ ಆಗ್ರಹ

Date:

ವಿವಿಧ ಇಲಾಖೆಯ ವಸತಿ ನಿಲಯಗಳಲ್ಲಿ ಕೆಲಸ ಮಾಡುವ ವಸತಿ ನಿಲಯ ಕಾರ್ಮಿಕರು ಬಾಕಿ ವೇತನ ಪಾವತಿ ಮತ್ತು ಶಾಸನ ಬದ್ಧ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ ಡಿಸಿ ಕಚೇರಿ ಮುಂದೆ ಇಂದು (ಫೆ.8) ಪ್ರತಿಭಟನಾ ಧರಣಿ ನಡೆಸಿದೆ.

- Advertisement -

ವಸತಿ ನಿಲಯದ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಈ ಹಿಂದೆ ಹಲವಾರು ಬಾರಿ ಗಮನ ಸೆಳೆದರೂ ಅಧಿಕಾರಿಗಳು ಸ್ಪಂದಿಸದ ನಿರ್ಲಕ್ಷ್ಯ ಧೋರಣೆಯನ್ನು ಪ್ರತಿಭಟನಾಕಾರರು ಖಂಡಿಸಿದರು. ಸಮಾಜ ಕಲ್ಯಾಣ ಇಲಾಖೆಯಡಿ ಮಾನ್ವಿ ತಾಲೂಕಿನ ಮೆಟ್ರಿಕ್ ಪೂರ್ವ ಹಾಸ್ಟೇಲ್ ಕಾರ್ಮಿಕರಿಗೆ ಐದು ತಿಂಗಳು, ಮೆಟ್ರಿಕ್ ನಂತರದ ಹಾಸ್ಟೆಲ್ ಕಾರ್ಮಿಕರಿಗೆ ಆರು ತಿಂಗಳ ವೇತನ ಬಾಕಿ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಲಿಂಗಸೂಗೂರಿನಲ್ಲಿ ಮೆಟ್ರಿಕ್ ಪೂರ್ವ ಹಾಸ್ಟೇಲ್ ಕಾರ್ಮಿಕರಿಗೆ ಏಳು ತಿಂಗಳು, ಬಿಸಿಎಂ ಹಾಸ್ಟೇಲ್ ಕಾರ್ಮಿಕರಿಗೆ ಮೂರು ತಿಂಗಳೂರು, ಲಿಂಗಸೂಗೂರು, ಮಾನ್ವಿ, ರಾಯಚೂರು ತಾಲೂಕಿನ ಎಸ್ಟಿ ಹಾಸ್ಟೇಲ್ ಕಾರ್ಮಿಕರಿಗೆ ನಾಲ್ಕು ತಿಂಗಳ ವೇತನ ಬಾಕಿ ಇದ್ದು, ಈ ಕೂಡಲೇ ಹಣ ಬಿಡುಗಡೆ ಮಾಡಬೇಕೆಂದು ಧರಣಿ ನಿರತರು ಒತ್ತಾಯಿಸಿದರು.

ಕಾರ್ಮಿಕರಿಗೆ ವೇತನ ಚೀಟಿ, ರಜೆ ಸೌಲಭ್ಯ, ಗುರುತಿನ ಚೀಟಿ, ಪಿಎಫ್ ಮತ್ತು ಇಎಸ್‌ಐ ಬಗ್ಗೆ ನೀಡುತ್ತಿಲ್ಲ. ವಾರದೊಳಗೆ ಬೇಡಿಕೆ ಇತ್ಯರ್ಥಪಡಿಸದೆ ಇದ್ದಲ್ಲಿ, ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಈ ವೇಳೆ ಸಂಘಟನೆ ಅಧ್ಯಕ್ಷ ಮಹೇಶ ಚೀಕಲಪರ್ವಿ, ಜಿಲ್ಲಾ ಉಪಾಧ್ಯಕ್ಷ ಅಣ್ಣಪ್ಪ ಶಿರಶ್ಯಾಡ್, ಮುಖಂಡರಾದ ಹುಲಿಗೆಪ್ಪ, ಹುಚ್ಚಣ್ಣ, ಶಶಿಕುಮಾರ, ಬಸವರಾಜ್, ಮುಸ್ತಾಫ್, ಮಹೇಶ, ಈರಮ್ಮ, ಹನುಮಶೆಟ್ಟಿ ಸೇರಿದಂತೆ ಕಾರ್ಮಿಕರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...