ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ರಾಯಚೂರು ಜಿಲ್ಲಾಡಳಿತದಿಂದ ಡಿಸೆಂಬರ್ 29ರಂದು ವಿಶ್ವಮಾನವ ದಿನಾಚರಣೆಯನ್ನು ಆಚರಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಾಯಚೂರು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕುವೆಂಪು ಅವರ ಹುಟ್ಟುಹಬ್ಬವನ್ನು ಆಚರಿಸಿದರು.
ದೇಶದ ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ ಸಿಂಗ್ ಅವರ ನಿಧನದಿಂದಾಗಿ ಏಳುದಿನ ಶೋಕಾಚರಣೆ ಜಾರಿಯಿರುವ ಹಿನ್ನೆಲೆಯಲ್ಲಿ, ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿ, ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲಾಯಿತು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಬೀಳುವಂತಿರುವ ಶಾಲಾ ಕೊಠಡಿಗಳು; ವಿದ್ಯಾರ್ಥಿಗಳಿಗೆ ಬಯಲೇ ಪಾಠಶಾಲೆ!
ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಹ ಕಾರ್ಯದರ್ಶಿ ಡಾ. ದಂಡಪ್ಪ ಬಿರಾದಾರ, ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೆಂಕಟೇಶ, ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳಾದ ರಾವತ್ ರಾವ್ ಬರೂರ, ರೇಖಾ ಬಡಿಗೇರ್, ರಾಮಣ್ಣ ಬೋಯರ್, ಎಸ್ ಎಸ್ ಮಾದರವರು, ಎಸ್ ಕೆ ಇ ಪ್ಯಾರಾಮೆಡಿಕಲ್ ಸಂಸ್ಥೆಯ ಸಂಯೋಜಕ ಶರಣಪ್ಪ ನಂದ್ಯಾಳ್ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಇದ್ದರು.
