ರಾಯಚೂರು ನಗರದ ವಿವಿಧ ಬಡಾವಣೆಗಳಿಗೆ ಜಿಲ್ಲಾಧಿಕಾರಿ ಕೆ.ನಿತೀಶ ಅವರು ಭೇಟಿ ನೀಡಿ ಸಾರ್ವಜನಿಕರ ಮೂಲ ಸೌಲಭ್ಯಗಳ ಕುಡಿಯುವ ನೀರು, ಚರಂಡಿ, ವಿದ್ಯುತ್ ಸೇರಿದಂತೆ ಇತರೆ ವಿಷಯಗಳ ಕುರಿತು ಚರ್ಚೆ ಮಾಡಿದರು.
ನಗರದ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಉಪಹಾರ ಸೇವಿಸಿ ಸಾರ್ವಜನಿಕರಿಗೆ ಗುಣಮಟ್ಟದ ಬೆಳಗಿನ ಉಪಹಾರ ಮತ್ತು ಊಟದ ವ್ಯವಸ್ಥೆ ಕುರಿತು ಪರಿಶೀಲಿಸಿದರು. ನಗರದ ನಿಜಲಿಂಗಪ್ಪ ಕಾಲೋನಿ ಹಾಗೂ ಹರಿಜನವಾಡ ಕಾಲೋನಿಗೆ ಸಂಚರಿಸಿ ರಸ್ತೆ, ಕುಡಿಯುವ ನೀರು ಸರಬರಾಜು, ಬಡಾವಣೆಯಲ್ಲಿ ರಸ್ತೆಯಲ್ಲಿ ಹರಿಯುತ್ತಿರುವ ಚರಂಡಿ ನೀರು ತಡೆಯಲು ವ್ಯವಸ್ಥೆ ಮಾಡುವಂತೆ ಸೂಚಿಸಿದರು.
ಬಡಾವಣೆಯಲ್ಲಿ ಘನತ್ಯಾಜ್ಯ ವಿಲೇವಾರಿ ವಾಹನ ಸಂಚರಿಸುವ ಕುರಿತು, ವಾರ್ಡ್‌ನಲ್ಲಿ ಮನೆ ಮನೆಯಿಂದ ಸಂಗ್ರಹಿಸಿ ತ್ಯಾಜ್ಯ ಕಸ ವಿಲೇವಾರಿ ಮಾಡುವ ಕುರಿತು ವಾಹನ ಚಾಲಕರಿಗೆ ಮಾಹಿತಿ ನೀಡಿದರು ಬಡಾವಣೆಯಲ್ಲಿ ಕುಡಿಯುವ ನೀರು ಸರಬ ರಾಜು ಕುರಿತು ಬಡಾವಣೆಯ ನಿವಾಸಿಗಳಿಂದ ಮಾಹಿತಿ ಪಡೆದರು.

ಕುಡಿಯುವ ನೀರಿಗಾಗಿ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದು ಪರಿಶೀಲನೆ ನಡೆಸಿದರು. ಚರಂಡಿ ಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯಲು ಹೂಳೆತೆಗೆಯುವ ಕೆಲಸ ನಡೆಸಲು ನಗರಸಭೆ ಆಯುಕ್ತರಿಗೆ ಸೂಚಿಸಿದರು. ಕಾಲುವೆಯಲ್ಲಿ ಮನೆ ಕಸ ಎಸೆಯದಂತೆ, ಹಾಗೂ ಸಂಗ್ರಹ ಮಾಡಿ ನಗರಸಭೆ ಬಂಡಿಗಳಿಗೆ ನೀಡಲು ಜಾಗೃತಿ ಮೂಡಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ ನಗರಾಭಿವೃದ್ಧಿ ಕೊಶ ನಿರ್ದೇಶಕ ಜಗದೀಶ ಗಂಗಣ್ಣನವರ, ನಗರಸಭೆ ಸೇರಿದಂತೆ ಅಧಿಕಾರಿಗಳು, ಮತ್ತು ನಗರಸಭೆ ಸದಸ್ಯರು ಇದ್ದರು.
ವರದಿ : ಸಿಟಿಜನ್ ಜರ್ನಲಿಸ್ಟ್, ಹಫೀಜುಲ್ಲಾ
