ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಶೇಖರ್ ಎಲ್ ನಾಯಕ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ನಿತೀಶ್ ಕೆ ಅವರು 2015 ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದರು. ಇವರು ಬೆಂಗಳೂರು ಹಣಕಾಸು ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.
2021ರಲ್ಲಿ ರಾಯಚೂರು ಜಿಲ್ಲಾಧಿಕಾರಿಯಾಗಿ ಆಗಮಿಸಿದ್ದ ಚಂದ್ರಶೇಖರ್ ಎಲ್ ನಾಯಕ ಸಮರ್ಥ ಆಡಳಿತದ ಮೂಲಕ ಜಿಲ್ಲೆಯಲ್ಲಿ ಅಲ್ಪ ಅವಧಿಯಲ್ಲಿ ಜನಮನ್ನಣೆ ಪಡೆದಿದ್ದರು. ಚಂದ್ರಶೇಖರ್ ಎಲ್ ನಾಯಕ ಅವರನ್ನು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿ ನೇಮಕ ಮಾಡಿದೆ.
ಇದನ್ನು ಓದಿದ್ದೀರಾ? ಲಿಂಗಸುಗೂರು | ಭಕ್ತರ ವೇಷದಲ್ಲಿ ಬಂದು ಮಠದಿಂದ ₹40 ಲಕ್ಷ ಮೌಲ್ಯದ ಸೊತ್ತು ದರೋಡೆಗೈದ ಕಳ್ಳರು!
ಜಿಲ್ಲೆಯ ತಾಲೂಕುಗಳು ತೀವ್ರ ಬರಪೀಡಿತ ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ನೂತನ ಜಿಲ್ಲಾಧಿಕಾರಿ ನಿತೀಶ್ ಕೆ ಪ್ರಮುಖ ಪಾತ್ರರಾಗುತ್ತಾರೆಯೇ ಎಂದು ಕಾದು ನೋಡಬೇಕಿದೆ.