ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ನಾಯಿ ಶವ ಪತ್ತೆಯಾಗಿದ್ದು, ಮೂರು ದಿನ ಕಳೆದರೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಪರಿಶೀಲಿಸಿದೆ ಕುಡಿಯುವ ನೀರು ಪೂರೈಕೆ ಮಾಡಿರುವುದು ಬೆಳಕಿಗೆ ಬಂದಿದೆ.
ಬಿಚ್ಚಾಲಿ ಗ್ರಾಮ ಸೇರಿದಂತೆ 17 ಗ್ರಾಮಗಳಿಗೆ ನೀರು ಪೂರೈಸುವ ಟ್ಯಾಂಕ್‌ನಲ್ಲಿ ನಾಯಿಯ ಮೃತದೇಹವಿರುವ ಮಾಹಿತಿ ಹರಡುತ್ತಿದ್ದಂತೆ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಸುದ್ದಿ ಹರಡುತ್ತಿದ್ದಂತೆ ಹಲವು ಗ್ರಾಮಗಳ ಜನರು ಆರೋಗ್ಯ ಪರೀಕ್ಷೆಗೆ ಮುಂದಾಗುತ್ತಿದ್ದಾರೆ.
ಕೆಲವರಲ್ಲಿ ವಾಂತಿ ಭೇದಿ ಕಂಡುಬಂದಿದೆಯಾದರೂ ಸಾಮೂಹಿಕವಾಗಿ ಪ್ರಕರಣ ವರದಿಯಾಗಿಲ್ಲ. ಘಟನೆಯ ಸುದ್ದಿ ಹರಡುತ್ತಿದ್ದಂತೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ತಾಂತ್ರಿಕ ಅಧಿಕಾರಿ ಮಹೇಂದ್ರ ರೆಡ್ಡಿ ಸೇರಿದಂತೆ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಪ್ರಾರಂಭಿಸಿದ್ದಾರೆ. ಕುಡಿಯುವ ನೀರು ಪೂರೈಸುವ ಯೋಜನೆಯಡಿ ನೀರು ಪೂರೈಕೆಯಾಗಿರುವುದು ಹಾಗೂ ನೀರಿನ ಪರೀಕ್ಷೆ ನಡೆಸಲಾಗುತ್ತಿದೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸರ್ಕಾರಿ ಶಾಲೆಗೆ ತಡೆಗೋಡೆ ನಿರ್ಮಿಸುವಲ್ಲಿ ಶಾಸಕ ಶರಣಪ್ರಕಾಶ ಪಾಟೀಲ್ ವಿಫಲ; ಆರೋಪ
ಗ್ರಾಮಸ್ಥರು ಯಾವುದೇ ರೀತಿಯ ಭೀತಿಗೆ ಒಳಗಾಗದೆ ಎಚ್ಚರದಿಂದ ಇರಲು ಆರೋಗ್ಯ ಇಲಾಖೆ ಮನವಿ ಮಾಡಿದೆ. ದೇಹದಲ್ಲಿ ವ್ಯತ್ಯಾಸವಾದಲ್ಲಿ ಕೂಡಲೇ ವೈದ್ಯರ ಬಳಿ ಪರೀಕ್ಷೆ ಮಾಡಿಸಿಕೊಳ್ಳಲು ಸಲಹೆ ನೀಡಿದ್ದಾರೆ.
