ಐಪಿ ಪಂಪ್‌ಸೆಟ್‌ಗಳು ಹಾಳಾಗಿವೆ ಎಂದು ನೆಪವೊಡ್ಡಿ ಏಳೆಂಟು ದಿನಗಳಿಂದ ಕುಡಿಯುವ ನೀರು ಸರಬರಾಜು ಮಾಡದೆ ನಗರಸಭೆ ಅಧಿಕಾರಿಗಳು ಬೇಜವಬ್ದಾರಿ ವರ್ತನೆ ಮಾಡುತಿದ್ದಾರೆ. ಸಮಸ್ಯೆಯನ್ನು ಪರಿಹರಿಸಿ, ಕೂಡಲೇ ನೀರು ಪೂರೈಕೆ ಮಾಡಬೇಕೆಂದು ಆಗ್ರಹಿಸಿ ಸ್ಥಳೀಯ ನಿವಾಸಿಗಳು ರಾಯಚೂರಿನ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
“ನಗರದ ಎಲ್‌ಬಿಎಸ್ ನಗರ, ಗಂಜ್ ಏರಿಯಾ, ಮಡ್ಡಿಪೇಟೆ, ಸಿಯಾತಲಾಬ್, ಅಂದ್ರೂನ್ ಕಿಲ್ಲಾ, ಬೇರೂನ್ ಕಿಲ್ಲಾ, ಮಕ್ತಲ್ ಪೇಟೆ, ಬೆಸ್ತವಾರಪೇಟೆ, ಲೋಹರ ವಾಡಿಗಳಲ್ಲಿ ನೀರು ಬಾರದೆ ಜನರು ಪರದಾಡುತ್ತಿದ್ದಾರೆ. ಐಪಿ ಪಂಪ್‌ಸೆಟ್‌ಅನ್ನು ನಿರ್ವಹಿಸುವ ಮೇಸ್ತ್ರಿ ಹುಸೇನಪ್ಪ, ಮೋಟಾರುಗಳನ್ನು ಬಂದ್ ಮಾಡಿ ನೀರು ಬರದಂತೆ ಮಾಡಿದ್ದಾರೆ. ಸ್ಥಳೀಯರಿಗೆ ಕುಡಿಯುವ ನೀರು ಪೂರೈಕೆ ಮಾಡುತ್ತಿಲ್ಲ” ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ನೌಕರರ ಪ್ರತಿಭಟನೆ
ಪ್ರತಿಭಟನಾ ಸ್ಥಳಕ್ಕೆ ಬಂದ ನಗರಸಭೆಯ ಕಿರಿಯ ಅಭಿಯಂತರ ನವೀನ್, ಜನರ ಸಮಸ್ಯೆ ಆಲಿಸಿದ್ದು, ಮೋಟಾರುಗಳಿಗೆ ಕೇಬಲ್‌ಗಳನ್ನು ಅಳವಡಿಸಿ, ನೀರು ಪೂರೈಕೆ ಮಾಡುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.