ರಾಯಚೂರು | ಕುಡಿಯುವ ನೀರಿಗೆ ಹಾಹಾಕಾರ; ಪಂಪ್ ಹೌಸ್‌ಗೆ ಸ್ಥಳೀಯರ ಮುತ್ತಿಗೆ

Date:

ಐಪಿ ಪಂಪ್‌ಸೆಟ್‌ಗಳು ಹಾಳಾಗಿವೆ ಎಂದು ನೆಪವೊಡ್ಡಿ ಏಳೆಂಟು ದಿನಗಳಿಂದ ಕುಡಿಯುವ ನೀರು ಸರಬರಾಜು ಮಾಡದೆ ನಗರಸಭೆ ಅಧಿಕಾರಿಗಳು ಬೇಜವಬ್ದಾರಿ ವರ್ತನೆ ಮಾಡುತಿದ್ದಾರೆ. ಸಮಸ್ಯೆಯನ್ನು ಪರಿಹರಿಸಿ, ಕೂಡಲೇ ನೀರು ಪೂರೈಕೆ ಮಾಡಬೇಕೆಂದು ಆಗ್ರಹಿಸಿ ಸ್ಥಳೀಯ ನಿವಾಸಿಗಳು ರಾಯಚೂರಿನ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

“ನಗರದ ಎಲ್‌ಬಿಎಸ್‌ ನಗರ, ಗಂಜ್ ಏರಿಯಾ, ಮಡ್ಡಿಪೇಟೆ, ಸಿಯಾತಲಾಬ್, ಅಂದ್ರೂನ್ ಕಿಲ್ಲಾ, ಬೇರೂನ್ ಕಿಲ್ಲಾ, ಮಕ್ತಲ್ ಪೇಟೆ, ಬೆಸ್ತವಾರಪೇಟೆ, ಲೋಹರ ವಾಡಿಗಳಲ್ಲಿ ನೀರು ಬಾರದೆ ಜನರು ಪರದಾಡುತ್ತಿದ್ದಾರೆ. ಐಪಿ ಪಂಪ್‌ಸೆಟ್‌ಅನ್ನು ನಿರ್ವಹಿಸುವ ಮೇಸ್ತ್ರಿ ಹುಸೇನಪ್ಪ, ಮೋಟಾರುಗಳನ್ನು ಬಂದ್ ಮಾಡಿ ನೀರು ಬರದಂತೆ ಮಾಡಿದ್ದಾರೆ. ಸ್ಥಳೀಯರಿಗೆ ಕುಡಿಯುವ ನೀರು ಪೂರೈಕೆ ಮಾಡುತ್ತಿಲ್ಲ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ನೌಕರರ ಪ್ರತಿಭಟನೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರತಿಭಟನಾ ಸ್ಥಳಕ್ಕೆ ಬಂದ ನಗರಸಭೆಯ ಕಿರಿಯ ಅಭಿಯಂತರ ನವೀನ್, ಜನರ ಸಮಸ್ಯೆ ಆಲಿಸಿದ್ದು, ಮೋಟಾರುಗಳಿಗೆ ಕೇಬಲ್‌ಗಳನ್ನು ಅಳವಡಿಸಿ, ನೀರು ಪೂರೈಕೆ ಮಾಡುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌...

ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ...