ಕಸದ ವಾಹನ ಉದ್ಘಾಟಿಸಲು ಆಗಮಿಸಿದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ ಅವರಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ತರಾಟೆ ತೆಗೆದುಕೊಂಡ ಘಟನೆ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಪುರಸಭೆಯ ವ್ಯಾಪ್ತಿಯಲ್ಲಿ ನಡೆದಿದೆ.
ಪುರಸಭೆಯ ವ್ಯಾಪ್ತಿಯ ಕಸದ ವಾಹನಗಳನ್ನು ಬಿಜೆಪಿ ಶಾಸಕ ಮಾನಪ್ಪ ವಜ್ಜಲ ಉದ್ಘಾಟನೆಗೆ ಆಗಮಿಸಿದರು. ಈ ವೇಳೆ ಜಮಾಯಿಸಿದ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ ಕಾರ್ಯಕ್ರಮ ಉದ್ಘಾಟನೆ ಮಾಡಲು ಬಿಡುವುದಿಲ್ಲ ಎಂದು ಘೇರಾವ್ ಹಾಕಿದರು.
ಸುಮಾರು ದಿನಗಳಿಂದ ನೀರಿನ ಸಮಸ್ಯೆ ಎದುರಾಗಿದ್ದು, ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಆದರೆ ತಮಗೆ ಸಂಬಂಧವೇ ಇಲ್ಲದಂತೆ ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾಲ ಕಳೆಯುತ್ತಿದ್ದಾರೆ. ಇತ್ತೀಚೆಗೆ ಬಾವಿ, ಕೊಳವೆ ಬಾವಿಗಳು ಬತ್ತಿ ಹೋಗಿವೆ. ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಪ್ರತಿ ದಿನ ನೀರು ತರಲು ಒಂದು ಕಿ.ಮೀ. ಹೋಗಬೇಕು. ಈ ಸಮಸ್ಯೆ ತಕ್ಷಣವೇ ಬಗೆಹರಿಸಬೇಕೆಂದು ನಿವಾಸಿಗಳು ಪಟ್ಟು ಹಿಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಯುದ್ಧ ಪರಿಸ್ಥಿತಿಯಲ್ಲಿ ರಕ್ಷಣೆ ಸಿದ್ದತಾ ಅಣಕು ಕಾರ್ಯಾಚರಣೆ
ʼನೀರಿನ ಸಮಸ್ಯೆ ಪರಿಹಾರಕ್ಕೆ ತಕ್ಷಣವೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಿಳಿಸುವೆ. ಗ್ರಾಮಸ್ಥರ ಎಲ್ಲ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ ಎಂದು ಎಂದು ಶಾಸಕ ಮಾನಪ್ಪ ವಜ್ಜಲ್ ಭರವಸೆ ನೀಡಿದರು.
