ರಾಯಚೂರು | ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರಕ್ಕೆ ಚಾಲನೆ

Date:

ರಾಯಚೂರಿನ ಮಾನ್ವಿ ನಗರದ ಟಿಎಪಿಸಿಎಂಎಸ್ ಆವರಣದಲ್ಲಿ ಆಹಾರ ಮತ್ತು ನಾಗರಿಕ ಸರಬಾರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ವತಿಯಿಂದ 2024-25ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರು ಬೆಳೆದ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿ ಮಾಡುವ ಕೇಂದ್ರಕ್ಕೆ ರಾಜು ಪಿರಂಗಿ ಚಾಲನೆ ನೀಡಿದರು.

ಮಾನ್ವಿ ನಗರ, ಹಿರೇಕೋಟ್ನೆಕಲ್, ನಕ್ಕುಂದಿ, ಬ್ಯಾಗವಾಟ, ಪೋತ್ನಾಳ್ ಸೇರಿ 5 ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿರುವುದರಿಂದ ರೈತರು ಬೆಳೆದ ಜೋಳಕ್ಕೆ ಉತ್ತಮ ಬೆಲೆ ದೊರೆಯಲಿದೆ. ರೈತರು ತಮ್ಮ ಜಮೀನಿನ ಸೂಕ್ತ ದಾಖಲೆಗಳನ್ನು ನೀಡಿ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಹೈಬ್ರೀಡ್ ಜೋಳವನ್ನು ಪ್ರತಿ ಕ್ವಿಂಟಾಲ್‌ಗೆ 3,371 ರೂ ಹಾಗೂ ಮಾಲ್ದಂಡಿ ಜೋಳವನ್ನು 3,421 ರೂ ನಂತೆ ಪ್ರತಿ ರೈತರು ಎಕರೆಗೆ 20 ಕ್ವಿಂಟಲ್ ನಂತೆ ಗರಿಷ್ಟ 150 ಕ್ವಿಂಟಲ್ ಜೋಳವನ್ನು ಮಾರಾಟ ಮಾಡುವುದಕ್ಕೆ ಅನುಕೂಲ ಕಲ್ಪಿಸಲಾಗಿದ್ದು ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತ ಕೋರಿದರು.

ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಜಿಲ್ಲಾ ವ್ಯವಸ್ಥಾಪಕರಾದ ಆಶೀತ್ ಅಲಿ ಮಾತನಾಡಿ, “ಜಿಲ್ಲೆಯಲ್ಲಿ 35 ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದ್ದು, ಮಾನ್ವಿಯಲ್ಲಿನ ಟಿಎಪಿಸಿಎಂಎಸ್‌ನಲ್ಲಿ 1462 ರೈತರು ನೊಂದಾಯಿಸಿಕೊಂಡಿದ್ದಾರೆ. ಪ್ರತಿ ಎಕರೆಗೆ 20 ಕ್ವಿಂಟಾಲ್ ನಂತೆ 1 ಲಕ್ಷ 20 ಸಾವಿರ ಕ್ವಿಂಟಲ್ ವರೆಗೂ ರೈತರಿಂದ ಜೋಳವನ್ನು ಖರೀದಿಸುವ ಗುರಿ ಹೊಂದಲಾಗಿದೆ. ಬಳಿಕ ಖರೀದಿಸಿದ ಜೋಳವನ್ನು ಪುನಃ ಸಾರ್ವಜನಿಕ ವಿತರಣಾ ಪದ್ದತಿ ಮೂಲಕ ಮರಳಿ ಜನರಿಗೆ ಕೊಡುವುದರಿಂದ ಉತ್ತಮ ಗುಣಮಟ್ಟದ ಜೋಳವನ್ನು ಮಾತ್ರ ಖರೀದಿ ಕೇಂದ್ರಗಳಿಗೆ ತರಬೇಕು. ಖರೀದಿಸಲಾಗುವ ಜೋಳದ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ. ಮೂಲಕ ಜಮಾ ಮಾಡಲಾಗುವುದು” ಎಂದು ತಿಳಿಸಿದರು.

- Advertisement -

ಇದನ್ನೂ ಓದಿ: ರಾಯಚೂರು | ಮಾ.16ರಂದು ರಾಜ್ಯಮಟ್ಟದ ಚಿತ್ರ ಸಂತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಇಲಾಖೆಯ ಉಪನಿಬಂಧಕ ಎಂ.ಆರ್.ಮನೋಹರ್, ಜೋಳ ಗುಣಮಟ್ಟ ಪರೀಕ್ಷಕ ಕೃಷಿ ಅಧಿಕಾರಿ ಅಮರೇಶ, ತಾ. ಆಹಾರ ನಿರೀಕ್ಷಕ ದೇವರಾಜ ಟಿಎಪಿಸಿಎಂಎಸ್ ವ್ಯವಸ್ಥಾಪಕ ಸಿದ್ದರಾಮೇಶ ಬೆಟ್ಟದೂರು, ಮುಖಂಡರಾದ ರಾಮಣ್ಣ ನಾಯಕ, ರೈತ ಎಂ.ರವೀಂದ್ರಗೌಡ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿಗಳು, ರೈತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ಕೊಡಗು | ಫಾರಂ-7 ದುರುಪಯೋಗ: ಬಿಜೆಪಿ ಬೂತ್ ಅಧ್ಯಕ್ಷ ಸೇರಿ ಐವರ ವಿರುದ್ಧ ಎಫ್‌ಐಆರ್!

ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು...

ಬಾಗೇಪಲ್ಲಿ | ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ:- ಚೇತನ್ ನಾಯ್ಡು ಫೌಂಡೇಷನ್ ಅಧ್ಯಕ್ಷ ಬಿ.ಆರ್.ನರಸಿಂಹ ನಾಯ್ಡು

ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ ಪ್ರಕೃತಿಯಿಂದ ಹಲವು ರೀತಿಯ ಪ್ರಯೋಜನಗಳನ್ನು...