ರಾಯಚೂರು | ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಮಾರಾಟ : ಐವರ ಬಂಧನ

Date:

ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೇರೆಯವರ ಆಸ್ತಿಯನ್ನು ಮಾರಾಟ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮುಹಮ್ಮದ್ ಜಾವೀದ್, ಅಕ್ಷಯ ಕುಮಾರ ಭಂಡಾರಿ, ನೀಲಕಂಠ ಮೇಟಿ, ಅಂಜಿನೆಯ ಹಾಗೂ ಉಪೇಂದ್ರ ಕುಮಾರ ಬಂಧಿತ ಆರೋಪಿಗಳು.

ಈ ಬಗ್ಗೆ ಸುದ್ದಿಗೋಷ್ಠಿ ಉದ್ದೇಶಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರು ಮಾತನಾಡಿ, ‘ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು ದಿನಗಳಿಂದ ಖಾಲಿ ಇರುವ ಖಾಲಿ ನಿವೇಶನ ಮತ್ತು ಕೃಷಿಯೇತರ ಪಾಳು ಜಮೀನುಗಳನ್ನು ಗುರುತಿಸಿ ಅಂತಹ ಜಮೀನು ಮತ್ತು ಆಸ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಅವುಗಳಿಗೆ ಸಂಬಂಧಿಸಿದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಹೆಸರಿಗೆ ನೋಂದಾಯಿಸಿಕೊಂಡು ಮಾರಾಟ ಮಾಡುತ್ತಿದ್ದರು’ ಎಂದು ಮಾಹಿತಿ ನೀಡಿದರು.

- Advertisement -

‘ಇಂತಹ ಒಟ್ಟು ಆರು ಪ್ರಕರಣಗಳಲ್ಲಿ ಐವರು ಆರೋಪಿಗಳನ್ನು ಬಂಧಿಸಿ 20 ಲಕ್ಷ ರೂಪಾಯಿ ಹಾಗೂ ಒಂದು ಕಾರು ಜಪ್ತಿ ಮಾಡಲಾಗಿದೆ. ಜಮೀನು ಮತ್ತು ನಿವೇಶನಗಳ ಸಂಬಂಧಿಸಿದ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ‌ಗಳನ್ನು ನಕಲಿಯಾಗಿ ಸೃಷ್ಟಿಸಿ ಬೇರೊಬ್ಬ ವ್ಯಕ್ತಿಯನ್ನು ಆಸ್ತಿಯ ಮಾಲೀಕ ಎಂದು ವಂಚಿಸಿ ನಂತರ ಆಸ್ತಿಗಳನ್ನು ಬೇರೆಯವರ ಹೆಸರಿಗೆ ನೊಂದಾಯಿಸಿಕೊಂಡು ನಂತರ ಬೇರೆ ಜನರಿಗೆ ಮಾರಾಟ ಮಾಡಿ ನಂತರ ಅವರಿಂದ ಭಾರಿ ಮೊತ್ತದ ಹಣ ಪಡೆದುಕೊಂಡು ವಂಚಿಸುತ್ತಿದ್ದರು’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

‘ಈ ಬಗ್ಗೆ ಆಸ್ತಿಗಳ ಮೂಲ ಮಾಲಿಕರು ನೀಡಿದ ದೂರಿನ ಮೇರೆಗೆ ಪತ್ತೆ ಹಚ್ಚಿ ಬಂಧಿಸಲಾಗಿದೆ. ರಾಯಚೂರು ನಗರದ ಪಶ್ಚಿಮ ಪೊಲೀಸ್ ಠಾಣೆ ಹಾಗೂ ಸಿರವಾರ ಪೊಲೀಸ್ ಠಾಣೆಯಲ್ಲಿ ಒಟ್ಟು 6 ಪ್ರಕರಣಗಳು ದಾಖಲಾಗಿವೆ’ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅತ್ಯಾಚಾರ ಪ್ರಕರಣ : ಅಪರಾಧಿಗೆ ಜೀವಾವಧಿ ಶಿಕ್ಷೆ

ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇನ್ನುಳಿದ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿದೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...