ರಾಯಚೂರು | ವಿವಿ ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕೆ ಡಿವಿಪಿ ಒತ್ತಾಯ

Date:

Advertisements

ರಾಯಚೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿತಿ ದಲಿತ ವಿಧ್ಯಾರ್ಥಿ ಪರಿಷತ್ (ಡಿವಿಪಿ) ಪ್ರತಿಭಟನೆ ನಡೆಸಿದೆ.

ವಿಶ್ವವಿದ್ಯಾಲಯದ ಮುಖ್ಯ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕುಲಪತಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಈ ವೇಳೆ ಮಾತನಾಡಿದ ಸಂಘಟನೆಯ ಜಿಲ್ಲಾ ಮುಖಂಡ ಮೌನೇಶ ಜಾಲವಾಡಗಿ, “ರಾಯಚೂರು ವಿಶ್ವವಿದ್ಯಾಲಯ ಆರಂಭವಾಗಿ 2-3 ವರ್ಷಗಳು ಕಳೆದಿವೆ. ಇನ್ನೇನು ಮೊದಲನೇ ಬ್ಯಾಚ್ ಹೊರ ಹೋಗುವ ಸಮಯ ಬಂದಿದೆ. ಆದರೂ, ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಲವಾರು ಶೈಕ್ಷಣಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

Advertisements

“ರಾಯಚೂರು ವಿಶ್ವವಿದ್ಯಾಲಯಕ್ಕೆ ಖಾಯಂ ಉಪನ್ಯಾಸಕರನ್ನು ನೇಮಿಸಲು ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆಯಬೇಕು. ಬಾಕಿ ಉಳಿದಿರುವ ಎಲ್ಲ ಸೆಮಿಸ್ಟರ್‌ಗಳ ಫಲಿತಾಂಶ ಬಿಡುಗಡೆ ಮಾಡಿ ಅಂಕಪಟ್ಟಿ ವಿತರಿಸಬೇಕು. ಗ್ರಂಥಾಲಯದ ಅವಧಿಯನ್ನು ಹೆಚ್ಚಿಸಿ ಎಲ್ಲ ವಿಭಾಗದ ಪುಸ್ತಕಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ವಿಶ್ವವಿದ್ಯಾಲಯದ ಬಳಿ ಎಲ್ಲ ಸರ್ಕಾರಿ ಬಸ್ಸುಗಳು ನಿಲುಗಡೆಯಾಗಬೇಕು. ವಿಶ್ವವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಮತ್ತು ಪರೀಕ್ಷಾ ಶುಲ್ಕ ಕಡಿಮೆ ಮಾಡಬೇಕು. ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರ ಇಲಾಖೆಗಳು ವಸತಿ ನಿಲಯಗಳನ್ನು ಮಂಜೂರು ಮಾಡುವಂತೆ ಸರ್ಕಾರ ಪತ್ರ ಬರೆಯಬೇಕು” ಎಂದು ಒತ್ತಾಯಿಸಿದ್ದಾರೆ.

“ವಸತಿ ನಿಲಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಭದ್ರತೆ ನೀಡಲು ಮುಖ್ಯದ್ವಾರಕ್ಕೆ ಸಿಸಿ ಕ್ಯಾಮೆರಾ ಅಳವಡಿಸಬೇಇಉ ಮತ್ತು ಖಾಯಂ ಕಾವಲುಗಾರರನ್ನು ನೇಮಕ ಮಾಡಬೇಕು” ಎಂದು ಮನವಿ ಮಾಡಿದ್ದಾರೆ.

ಹಕ್ಕೊತ್ತಾಯ ಸ್ವೀಕರಿಸಿ ಮಾತನಾಡಿದ ಕುಲಪತಿ ಹರೀಶ್ ರಾಮಸ್ವಾಮಿ, “ವಿದ್ಯಾರ್ಥಿಗಳ ಕಮಿಟಿ ರಚನೆ ಮಾಡಿ, ಸಭೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು” ಎಂದು ಭರವಸೆಯನ್ನು ನೀಡಿದರು.

ಪ್ರತಿಭಟನೆಯಲ್ಲಿ ಮೌನೇಶ ತುಗ್ಗಲದಿನ್ನಿ, ಮಧುಸೂದನ, ಸಂತೋಷ್ ಪಾಟೀಲ್, ಅಂಬರೀಶ, ಚೆನ್ನಯ್ಯಸ್ವಾಮಿ, ಟೈಮದ್ ಪಾಷಾ, ಸುರೇಶ, ಮಾರ್ತಾಂಡ,ಮೌನೇಶ್,ನಿತಿನ್,ಚಂದ್ರು,ಉಮೇಶ್,
ಶರಣು,ಪ್ರಶಾಂತ್ ಮುಂತಾದ ವಿದ್ಯಾರ್ಥಿ ಯುವಜನರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X