ರಾಯಚೂರು | ʼಹಟ್ಟಿ ಕಾರ್ಮಿಕ ಸಂಘʼದ ಚುನಾವಣೆ ನಡೆಸಲು ಒತ್ತಾಯ

Date:

Advertisements

ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಚುನಾವಣೆ ನಡೆಸಬೇಕು ಎಂದು ಸೆಂಟರ್ ಅಫ್ ಇಂಡಿಯನ್ ಟ್ರೇಡ್ ಯೂನಿಯನ್ ಸಂಘದ ವತಿಯಿಂದ ಕಂಪನಿ ಆಡಳಿತಕ್ಕೆ ಮನವಿ ಸಲ್ಲಿಸಿದರು.

ಹಟ್ಟಿ ಚಿನ್ನದ ಗಣಿ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಮೂರು ವರ್ಷದ ಅವಧಿ ಪೂರ್ಣಗೊಂಡು ಸುಮಾರು ದಿನಗಳು ಕಳೆದಿವೆ.ಅಭಿವೃದ್ಧಿ ಕುಂಠಿತಗೊಂಡಿದೆ ಚುನಾವಣೆ ನಡೆಸಿ ಮುಂದಿನ ಕಾರ್ಯ ಚಟುವಟಿಕೆಗಳು ನಡೆಯಬೇಕು ಎಂದು ಒತ್ತಾಯಿಸಿದರು

ಈ ಬಗ್ಗೆ ಕಾರ್ಮಿಕ ಮುಖಂಡ ಅನೀಫ್ ಮಾತನಾಡಿ ಚುನಾವಣೆಗಳನ್ನು ಸಮಯಕ್ಕೆ ತಕ್ಕಂತೆ ನಡೆಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯಾಗಿದೆ.ಚುನಾವಣೆಗಳು ಉದ್ಯೋಗಿಗಳ ಪ್ರಾತಿನಿಧ್ಯವನ್ನು ಸದೃಢಗೊಳಿಸಿ, ನಿರ್ವಹಣಾ ಮತ್ತು ಕಾರ್ಮಿಕರ ನಡುವಿನ ಸಂಬಂಧವನ್ನು ಮತ್ತಷ್ಟು ಉತ್ತಮಗೊಳಿಸುತ್ತದೆ. ಉದ್ಯೋಗಿಗಳ ನ್ಯಾಯಯುತ ಪ್ರತಿನಿಧಿಯನ್ನು ಖಚಿತಪಡಿಸಿಕೊಳ್ಳಲು ಹಾಗೂ ಸಂಸ್ಥೆಯೊಳಗಿನ ಪ್ರಜಾಪ್ರಭುತ್ವಾತ್ಮಕ ವ್ಯವಸ್ಥೆ ಸಕ್ರಿಯವಾಗಿರಿಸಲು ಇದು ಬಹಳ ಅಗತ್ಯವಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಓರ್ವ ಗಂಭೀರ ಗಾಯ

ಕಂಪನಿಯಲ್ಲಿ ಅಭಿವೃದ್ಧಿ,ಹಾಗೂ ಇನ್ನಿತರ ಕಾರ್ಯ ಚಟುವಟಿಕೆಗಳು ನಡೆಯಬೇಕಾದರೆ ಮತ್ತು ಕಾರ್ಮಿಕರ ಬೇಡಿಕೆಗಳನ್ನು ಸಮಸ್ಯೆಗಳನ್ನು ಈಡೇರಿಸಲು ಚುನಾವಣೆ ಮುಖಾಂತರ ಆಯ್ಕೆಯಾಗಿ ಸೇವೆ ಸಲ್ಲಿಸಬೇಕಾಗಿದೆ.ಚುನಾವಣೆ ನಡೆಯದಿದ್ದರೆ ಖಾಸಗೀಕರಣ ವ್ಯವಸ್ಥೆ ಉಂಟಾಗಬಹುದು ಹಾಗಾಗಿ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಚುನಾವಣೆಗಳನ್ನು ಶೀಘ್ರದಲ್ಲಿ ನಡೆಸಬೇಕು ಎಂದು ಹೇಳಿದರು.

ಈ ವೇಳೆ ಕಾರ್ಮಿಕ ಮುಖಂಡ ನಿಂಗಪ್ಪ ಎಂ ವೀರಾಪುರ , ಅಲ್ಲಾಬಕ್ಷ,ಫಕ್ರುದ್ದೀನ್ ಮುಲ್ಲಾ , ವೆಂಕಟೇಶ್ ಗೋರ್ಕಲ್, ನರಸಣ್ಣ ನಾಯಕ ,ಶಬ್ಬಿರ ಜಾಲಹಳ್ಳಿ ಇನ್ನಿತರರು ಹಾಜರಿದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X