ರಾಯಚೂರು | ಕತ್ತಲಾಗಿದ್ದ ಬುದ್ದಿನ್ನಿ ಸರ್ಕಾರಿ ಪ್ರೌಢಶಾಲೆ; ವಿದ್ಯುತ್‌ ಸಂಪರ್ಕ ಕಲ್ಪಿಸುತ್ತಿರುವ ಇಲಾಖೆ

Date:

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ಸುಮಾರು ಮೂರು ವರ್ಷಗಳಿಂದ ವಿದ್ಯುತ್ ವ್ಯವಸ್ಥೆಯಿಲ್ಲದ ಬುದ್ದಿನ್ನಿ ಸರ್ಕಾರಿ ಪ್ರೌಢಶಾಲೆಗೆ ಇದೀಗ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗುತ್ತಿದೆ.

- Advertisement -

ಬುದ್ದಿನ್ನಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಕೊಠಡಿಗಳು ಕತ್ತಲೆ ಕೋಣೆಗಳಾಗಿ ಮಾರ್ಪಟ್ಟಿದ್ದು, ವಿದ್ಯಾರ್ಥಿಗಳು ಡಿಜಿಟಲ್ ತರಗತಿಗಳಿಂದ ವಂಚಿತರಾಗಿದ್ದರು. ಈ ಹಿನ್ನೆಲೆಯಲ್ಲಿ ಈ ದಿನ.ಕಾಮ್ ರಾಯಚೂರು | ವಿದ್ಯುತ್ ವ್ಯವಸ್ಥೆಯಿಲ್ಲದೆ ಕತ್ತಲಾದ ಪ್ರೌಢಶಾಲೆ; ಮಕ್ಕಳು ಡಿಜಿಟಲ್ ತರಗತಿಗಳಿಂದ ವಂಚಿತ ಎಂಬ ಶೀರ್ಷಕೆಯಡಿ ವರದಿ ಪ್ರಕಟಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ದಿನ.ಕಾಮ್‌ ವರದಿಯ ಬೆನ್ನಲ್ಲೇ ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಂಡು ಕೆಲಸ ಪ್ರಾರಂಭಿಸಿ ಮಕ್ಕಳಿಗೆ ಅನುಕೂಲ ಮಾಡುವುದಕ್ಕೆ ಮುಂದಾಗಿದೆ. ಬುದ್ದಿನ್ನಿ ಗ್ರಾಮದಿಂದ ಸರ್ಕಾರಿ‌ ಪ್ರೌಢಶಾಲೆವರೆಗೆ ಸುಮಾರು 45 ವಿದ್ಯುತ್ ಕಂಬಗಳನ್ನು ಹಾಕುವ ಮೂಲಕ ಶಾಲೆಗೆ ಬೆಳಕು ನೀಡುವುದಕ್ಕೆ ಮುಂದಾಗಿದ್ದಾರೆ.

1000059103

ಈ ಬಗ್ಗೆ ಗ್ರಾಮದ ಮುಖಂಡ ನಾಗರೆಡ್ಡೆಪ್ಪ ದೇವರಮನಿ ಮಾತನಾಡಿ, “ಶಾಲೆಯ ಅಭಿವೃದ್ಧಿ ಕಾಮಗಾರಿಗಾಗಿ ₹20 ಲಕ್ಷ ಅನುದಾನ ಬಿಡುಗಡೆಯಾಗಿದೆಯೆಂದು ಹೇಳಲಾಗಿದೆ. ವಿದ್ಯುತ್ ಇಲ್ಲದೆ ಮಕ್ಕಳು ಡಿಜಿಟಲ್ ಕಲಿಕೆಯಿಂದ ಮಕ್ಕಳು ವಂಚಿತರಾಗಿದ್ದರು. ಇದೀಗ ಶಾಲೆಗೆ ನಿರಂತರ ವಿದ್ಯುತ್ ಜ್ಯೋತಿ ಕರೆಂಟ್ ನೀಡಲಾಗಿದೆ. ನಾವೂ ಡಿಜಿಟಲ್ ಶಿಕ್ಷಣ ಕಲಿತಿಲ್ಲ. ನಮ್ಮ ಮಕ್ಕಳಾದರೂ ಡಿಜಿಟಲ್‌ ಶಿಕ್ಷಣ ಕಲಿಯಬೇಕೆಂಬ ಗ್ರಾಮಸ್ಥರ ಬೇಡಿಕೆ ಈಡೇರಿದೆ” ಎಂದರು.

“ಜನವರಿ 10ರಂದು ಈ ಶಾಲೆಯ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉದ್ಘಾಟನೆಗೆ ಮಸ್ಕಿ ಶಾಸಕ ಬಸನಗೌಡ ತುರುವಿಹಾಳ, ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ ಆಗಮಿಸುತ್ತಿದ್ದಾರೆ” ಎಂದು ಹೇಳಿದರು.

1000059100
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...