ರಾಯಚೂರು | ಉದ್ಯೋಗ ಖಾತ್ರಿ ಅಕ್ರಮ, ನಾಲ್ವರು ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ಅಮಾನತು

Date:

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ನಡೆದಿರುವ ಉದ್ಯೋಗ ಖಾತ್ರಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತಿಹೆಚ್ಚು ಹಣ ದುರ್ಬಳಕೆ ಆರೋಪದ ಮೇಲೆ ಆರು ಗ್ರಾಮ ಪಂಚಾಯ್ತಿಯ ನಾಲ್ವರು ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕರಾಂ ಆದೇಶಿಸಿದ್ದಾರೆ.

- Advertisement -

ಕ್ಯಾದಿಗೇರಾ ಮತ್ತು ಕೊತ್ತದೊಡ್ಡಿ ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಸಿ.ಬಿ.ಪಾಟೀಲ್, ಗಾಣಧಾಳ ಮತ್ತು ಸೋಮನಮರಡಿ ಗ್ರಾಮ ಪಂಚಾಯ್ತಿಯ ಮಲ್ಲಪ್ಪ,  ಕೆ.ಇರಬಗೇರಾ, ದೊಂಡಬಳಿ, ಜಾಲಹಳ್ಳಿ  ಪಂಚಾಯ್ತಿ ಅಭಿವೃದ್ದಿ ಅಧಿಕಾರಿಯಾಗಿದ್ದ ಫತ್ತೆಪ್ಪ ರಾಠೋಢ ಮತ್ತು ಶಾವಂತಗೇರಾ ಪಂಚಾಯ್ತಿಯ ಗುರುಸ್ವಾಮಿ ಇವರನ್ನು ಅಮಾನತುಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ದೇವದುರ್ಗ ತಾಲೂಕಿನ 33 ಗ್ರಾಮ ಪಂಚಾಯ್ತಿಗಳಲ್ಲಿ ಉದ್ಯೋಗ ಖಾತ್ರಿ ಸಮಾಜಿಕ ಲೆಕ್ಕ ಪರಿಶೋಧನೆಯಲ್ಲಿ ಆರು ಗ್ರಾಮ ಪಂಚಾಯ್ತಿಗಳಲ್ಲಿ ಅತಿಹೆಚ್ಚು ಖರ್ಚು ತೋರಿಸಲಾಗಿದ್ದು ದಾಖಲೆ ನೀಡದೇ ಇರುವುದು, ಕಳಪೆ ಕಾಮಗಾರಿ ನಿರ್ವಹಿಸಿರುವುದು ಸೇರಿದಂತೆ ಅಕ್ರಮ ಹಣ ವರ್ಗಾವಣೆಗೊಂಡಿರುವ ಆರೋಪಗಳನ್ನು ಪಿಡಿಓಗಳು ಎದುರಿಸುತ್ತಿದ್ದಾರೆ.

2020-21ನೇ ಸಾಲಿನಲ್ಲಿ ನಡೆದಿರುವ ಅಕ್ರಮದ ಕುರಿತು ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಿ ನೀಡಲಾಗಿರುವ ಮಧ್ಯಂತರ ವರದಿ ಆಧಾರಿಸಿ ನಾಲ್ವರನ್ನು ಮೊದಲ ಹಂತದಲ್ಲಿ ಅಮಾನತುಗೊಳಿಸಿ ಆದೇಶಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...