ರಾಯಚೂರು | ಸರ್ಕಾರಿ ಶಾಲೆ ಜಾಗ ಒತ್ತುವರಿ ತೆರವುಗೊಳಿಸಲು ಒತ್ತಾಯ

Date:

ರಾಯಚೂರಿನ ವಾರ್ಡ್ ನಂ.28ರ ಸಂತೋಷ ನಗರ ಬಡಾವಣೆಯಲ್ಲಿ ಸರ್ಕಾರಿ ಶಾಲಾ ನಿರ್ಮಾಣಕ್ಕೆ 384/1/(ಎ)ನಲ್ಲಿ ಭೂಮಿಯನ್ನು ಮೀಸಲಿಡಲಾಗಿದೆ. ಆ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ ಒತ್ತುವರಿ ತೆರವುಗೊಳಿಸಿ, ಶೈಕ್ಷಣಿಕ ಉದ್ದೇಶಕ್ಕೆ ಆ ಜಾಗವನ್ನು ಬಳಕೆ ಮಾಡಬೇಕು ಎಂದು ಒತ್ತಾಯಿಸಿ ನಾಗರಿಕ ಹಕ್ಕುಗಳ ಸಂರಕ್ಷಣೆಗಾಗಿ ಸಂಘಟನೆಯು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

- Advertisement -

“ನಾಗರಿಕ ಸೌಲಭ್ಯದ ನಿವೇಶನವನ್ನು ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ಕೊಠಡಿ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ. ಆದರೆ‌, ನಗರ ಶಾಸಕ ಶಿವರಾಜ ಪಾಟೀಲ್ ಅವರು ಪತ್ರ ಬರೆದಿದ್ದು, ದಿಗ್ಭ್ರಮೆ ಹಾಗೂ ಆಶ್ಚರ್ಯವನ್ನುಂಟು ಮಾಡುವುದಾಗಿದೆ. ಸಿಎ ಸೈಟ್ ಜಾಗದಲ್ಲಿ ಸರ್ಕಾರಿ ಕನ್ನಡ ಮಾದ್ಯಮ ಪ್ರೌಢಶಾಲೆಗೆ ಮೀಸಲಿಟ್ಟ ಸ್ಥಳವನ್ನು ನನ್ನ ಗಮನಕ್ಕೆ ಇಲ್ಲದೇ ಮಂಜೂರು ಮಾಡಲಾಗಿರುತ್ತದೆ ಎಂದು ತಿಳಿದಿದ್ದು, ಈ ಸ್ಥಳ ಮಂಜೂರಿ ಕುರಿತು ಹಲವು ಸಮಸ್ಯೆಗಳಿರುವುದರಿಂದ ಶಾಲೆ ಜಾಗವನ್ನು ಬೇರೆ ಬಡಾವಣೆಯಲ್ಲಿ ಆಯ್ಕೆ ಮಾಡುವ ಬಗ್ಗೆ ತಮ್ಮಲ್ಲಿ ಚರ್ಚೆ ಮಾಡಿ ಮುಂದಿನ ನಿರ್ಣಯ ತೆಗೆದುಕೊಳ್ಳುವವರೆಗೆ ಶಾಲೆಗೆ ಸ್ಥಳ ಮಂಜೂರು ಆಗಿರುವ ಆದೇಶವನ್ನು ಹಿಂಪಡೆಯಲು ತಿಳಿಸಿದ್ದು, ಇದು ಸರಿಯಾದ ನಡೆಯಲ್ಲ” ಎಂದು ಸಂಘಟನೆಯ ಮುಖಂಡರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಆಡಳಿತಾತ್ಮಕ ಪ್ರಕ್ರಿಯೆಯಲ್ಲಿ ಶಾಸಕರೊಬ್ಬರ ಸ್ಪಷ್ಟ ಹಸ್ತಕ್ಷೇಪ ಇದಾಗಿದ್ದು, ಸಂವಿಧಾನದ ಅಧಿಕಾರ ವಿಭಜನೆಯ ತತ್ವಗಳಿಗೆ ವ್ಯತಿರಿಕ್ತ ಹಾಗೂ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಮಂಜೂರು ಮಾಡಿರುವ ಈ ನಾಗರಿಕ ಸೌಲಭ್ಯ ನಿವೇಶನದ ಆದೇಶವನ್ನು ಹಿಂಪಡೆಯಲು ಕೋರಿರುವುದು ಸಮಂಜಸ ಹಾಗೂ ಸಾರ್ವಜನಿಕ ಹಿತದೃಷ್ಟಿ ಎನಿಸದು. ನಗರ ಹಾಗೂ ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರಸ್ತುತ ವಿದ್ಯಾಮಾನಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ ಶತ ಶತಮಾನಗಳಿಂದ ಶಾಂತಿ ಹಾಗೂ ನೆಮ್ಮದಿಯ ಬಾಳ್ವೆಗೆ ಹೆಸರಾಗಿರುವ ಸೂಫಿ-ಶರಣ-ದಾಸ-ಸಂತ ಪರಂಪರೆಯ ಇಲ್ಲಿಯ ನಾಗರಿಕ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಸಾಮಾಜಿಕ ಹೊಣೆಗಾರಿಕೆಯಾಗಿಯಾಗಿದೆ” ಎಂದು ಹೇಳಿದರು.

“ಸರ್ವೋಚ್ಛ ನ್ಯಾಯಾಲಯ ಹಾಗೂ ಹಲವು ಉಚ್ಛನ್ಯಾಯಾಲಯಗಳು ಆಸ್ಪತ್ರೆ, ಶಾಲೆಗಳಂತಹ ನಾಗರಿಕ ಸೌಲಭ್ಯಗಳಿಗಾಗಿ ಮಂಜೂರು ಆಗಿರುವುದನ್ನು ಧಾರ್ಮಿಕ ಸಂಸ್ಥೆಗಳಿಗೆ ಮಾರ್ಪಡಿಸಿ ಆದೇಶಿರುವುದನ್ನು ರದ್ದುಪಡಿಸಿ ಸಂವಿಧಾನದ ಮೂಲ ತಳಹದಿ ತತ್ವ ಆಗಿರುವ ಜಾತ್ಯತೀತ ಸಮಾನತೆಯನ್ನು ಎತ್ತಿ ಹಿಡಿದಿದೆ. ಸರ್ಕಾರಿ ಶಾಲೆ ಉದ್ದೇಶದ ಹೊರತಾದ ಯಾವುದೋ ನಿರ್ದಿಷ್ಟ ಧಾರ್ಮಿಕ ಚಟುವಟಿಕೆಗಾಗಿ ನಿವೇಶನವನ್ನು ಮಾರ್ಪಡಿಸಿ ಸರ್ಕಾರಿ ಸಂಪನ್ಮೂಲವನ್ನು ಬಳಸಲು ಯತ್ನಿಸುವ ಪ್ರಯತ್ನ ಸಂವಿಧಾನ ಪರಿಚ್ಛೇದ 14 ಮತ್ತು 15ರ ಸ್ಪಷ್ಟ ಉಲ್ಲಂಘನೆ ಮತ್ತು ದುರುಪಯೋಗವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಗಾಂಧಿ ಪಾರ್ಕ್‌ನಲ್ಲಿ ಅನೈರ್ಮಲ್ಯ; ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ

“ಶೈಕ್ಷಣಿಕ ಉದ್ದೇಶಕ್ಕೆ ಮಂಜೂರು ಆಗಿರುವ ಶಾಲಾ ಕಟ್ಟಡ ನಿರ್ಮಾಣ ಮಾಡುವುದು ಅವಶ್ಯವಾಗಿದೆ. ಹಾಗಾಗಿ ಕೂಡಲೇ ಕ್ರಮ ವಹಿಸಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಇಕ್ಬಾಲ್ ಅಹ್ಮದ್, ಉಪಾಧ್ಯಕ್ಷ ಅನ್ವರ್ ವಹೀದ್, ಮಹಮದ್ ಸುಲ್ತಾನ್, ಪ್ರಧಾನ ಕಾರ್ಯದರ್ಶಿ ಮಹೆಬೂಬ್ ಬಾಷ ಮೂಲಿಮನಿ, ಸಿರಾಜ್ ಅಹ್ಮದ್ ಜಾಫ್ರಿ, ರಾಜ್ಯ ಸಮಿತಿ ಸದಸ್ಯ ಖಾಜಾ ವಹಿದುದ್ದೀನ್ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...