ರಾಯಚೂರು | ದೇವರ ಹೆಸರಲ್ಲಿ ಶಾಲೆ ಜಾಗ ಒತ್ತುವರಿ; ತೆರವಿಗೆ ಎಸ್ಎಫ್ಐ ಆಗ್ರಹ

Date:

Advertisements

ನಾಗರಿಕ ಸೌಲಭ್ಯ ಕೋಟಾದಡಿ ಶೈಕ್ಷಣಿಕ ಉದ್ದೇಶಕ್ಕಾಗಿ ಸರ್ಕಾರಿ ಪ್ರೌಢ ಶಾಲೆಗೆ ಮೀಸಲಿಟ್ಟ 1,017 ಚದರ ಅಡಿಯ ನಿವೇಶನವನ್ನು ಬಡಾವಣೆಯ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕುತಂತ್ರ ಮಾಡಿ ದೇವರು ಮತ್ತು ದೇವಸ್ಥಾನದ ಹೆಸರಿನಲ್ಲಿ ನಿವೇಶನವನ್ನು ಕಬಳಿಸುವ ಹುನ್ನಾರ ನಡೆಸಿದ್ದಾರೆ ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು ಆರೋಪಿಸಿದರು.

ರಾಯಚೂರು ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಗರದ ಚಂದ್ರಬಂಡಾ ರಸ್ತೆಯ ಎಲ್‌ಬಿಎಸ್ ನಗರದಲ್ಲಿರುವ 384/1ನೇ ಸರ್ವೆ ನಂಬರ್‌ನಲ್ಲಿರುವ ವಸತಿ ಬಡಾವಣೆಯಲ್ಲಿ ಸರ್ಕಾರಿ ಪ್ರೌಢ ಶಾಲೆಗೆ ಮೀಸಲಿಟ್ಟ ಜಾಗದ ಕಬಳಿಕೆ ಕುರಿತು ಈಗಾಗಲೇ ಸಂಬಂಧಿಸಿದ ನರಸಭೆ, ನಗರಾಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾಡಳಿತ, ಜಿಲ್ಲಾಧಿಕಾರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಮಂತ್ರಿಗಳ ಗಮನಕ್ಕೂ ಇದೆ. ಈ ಕುರಿತು ಪತ್ರಿಕೆಯಲ್ಲಿ ಹಲವು ಬಾರಿ ಪ್ರಕಟ ಆಗಿವೆ. ಎಲ್ಲ ಪ್ರಬಲ ಶಾಸಕ, ಸಚಿವರು ಇದರಲ್ಲಿ ಶಾಮೀಲಾಗಿದ್ದಾರೆ. ಅದಕ್ಕಾಗಿ ತೆರವುಗೊಳಿಸುವ ಕಾರ್ಯ ಆಗುತ್ತಿಲ್ಲ” ಎಂದು ಹೇಳಿದರು.

ಉಪಾಧ್ಯಕ್ಷ ಶಿವಕುಮಾರ್ ಮ್ಯಾಗಳಮನಿ ಮಾತನಾಡಿ, “ಈವರೆಗೂ ಯಾರೂ ಇದರ ತೆರವು ಕಾರ್ಯಾಚರಣೆಗೆ ಮುಂದಾಗುತ್ತಿಲ್ಲ. ತಮ್ಮ ಮನೆಯ ನಿರ್ಮಾಣಕ್ಕೆ ಸಿಮೆಂಟ್ ಮತ್ತು ಇತರೆ ಸಾಮಾಗ್ರಿಗಳನ್ನು ಇಡಲು ನಿರ್ಮಿಸಿದ ತಾತ್ಕಾಲಿಕ ಶೆಡ್‌ಗೆ ಅಲ್ಲಿನ ನಿವಾಸಿ ವೆಂಕಟೇಶ್ ಅಯ್ಯ ಮತ್ತು ರಾಜು ಎಂಬುವವರು ಇತರರ ಜೊತೆಗೂಡಿ ಮತ್ತು ಕೆಲವು ಪ್ರಭಾವಿಗಳ ಸಹಕಾರದೊಂದಿಗೆ ಒಗ್ಗೂಡಿ ಆ ಜಾಗವನ್ನು ಈಗ ದೇವಸ್ಥಾನವಾಗಿ ಮಾರ್ಪಾಡು ಮಾಡುವ ಮೂಲಕ, ದೇವರ ಹೆಸರಿನಲ್ಲಿ ಸರ್ಕಾರಿ ಜಾಗವನ್ನು ಕಬಳಿಸಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡಲು ಹೊರಟಿದ್ದಾರೆ” ಎಂದರು.

Advertisements

“ಅದೇ ಬಡಾವಣೆಯಲ್ಲಿ ಈಗಾಗಲೇ ಧಾರ್ಮಿಕ ಉದ್ದೇಶಕ್ಕಾಗಿ ಬೇರೆ ಜಾಗ ಮೀಸಲಿದ್ದು, ಅಲ್ಲಿ ದೇವಸ್ಥಾನ ಇದ್ದರೂ ಉದ್ದೇಶಪೂರ್ವಕವಾಗಿ ತಮ್ಮ ಮನೆಯ ಪಕ್ಕದ ಈ ಜಾಗವನ್ನೇ ಗುರಿಯಾಗಿಸಿ ಬಡ ಮತ್ತು ಮಧ್ಯಮ ವರ್ಗದ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಅಡ್ಡಿಯಾಗುತ್ತಿದ್ದಾರೆ. ಈ ಪ್ರೌಢಶಾಲೆಯಲ್ಲಿ ಕಲಿಯಬೇಕಾದ ನೂರಾರು ಮಕ್ಕಳು ಶಾಲಾ ಕೊಠಡಿಗಳ ಕೊರತೆಯಿಂದ ಅನ್ಯ ಇಲಾಖೆಯ ಶಾಲಾ ಕೊಠಡಿಯಲ್ಲಿ ಪಾಠ ಕಲಿಯುವಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಈಗಾಗಲೇ ಅವರಿಗೆ ಈ ಕುರಿತು ತಿಳುವಳಿಕೆ ನೊಟೀಸ್ ನೀಡಿದ್ದು, ರಾಜಿ ಪಂಚಾಯತಿ ಮಾಡಿದರೂ ತಮ್ಮ ಕೆಲಸವನ್ನು ನಿಲ್ಲಿಸದೆ ದಿನಕ್ಕೊಂದು ಹೊಸ ಬೆಳವಣಿಗೆಯನ್ನು ಶುರು ಮಾಡಿದ್ದಾರೆ. ಅದಕ್ಕೆ ಕೂಡಲೇ ಜಿಲ್ಲಾಡಳಿ ಮತ್ತು ಸಂಬಂಧಿಸಿದ ಎಲ್ಲ ಅಧಿಕಾರಿಗಳು ಮಧ್ಯ ಪ್ರವೇಶ ಮಾಡಿ ಆಕ್ರಮ ಶೆಡ್ ತೆರವು ಮಾಡಿ ಸದರಿ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಸಮರ್ಪಕ ವಿದ್ಯುತ್‌ ಪೂರೈಕೆ; ವಿದ್ಯುತ್ ವಿತರಣಾ ಘಟಕಕ್ಕೆ ಮೊಸಳೆ ಬಿಟ್ಟು ರೈತರ ಆಕ್ರೋಶ

“ಆ ನಿವೇಶನದಲ್ಲಿ ಮಂಜೂರಾಗಿರುವ ಪ್ರೌಢಶಾಲೆಯ ಆರು ಕೊಠಡಿಗಳನ್ನು ಶೀಘ್ರವೇ ನಿರ್ಮಾಣ ಮಾಡಿ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಅನುಕೂಲ ಮಾಡಿಕೊಡಬೇಕು. ಹತ್ತು ದಿನಗಳ ಒಳಗೆ ಈ ಕಾರ್ಯಕ್ಕೆ ಮುಂದಾಗದ್ದಿದರೆ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು, ಪಾಲಕ, ಪೋಷಕರು, ಶಿಕ್ಷಣ ಪ್ರೇಮಿಗಳು ಮತ್ತು ಪ್ರಗತಿಪರ ಸಂಘಟನೆಗಳ ಬೆಂಬಲದೊಂದಿಗೆ ಅದೇ ನಿವೇಶನದಲ್ಲಿ ಸಂಬಂಧಿಸಿದ ಇಲಾಖೆಯ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ. ಆಗ ಆಗುವ ಎಲ್ಲ ಬದಲಾವಣೆ ಮತ್ತು ಆಗುಹೋಗುಗಳಿಗೆ ಸಂಬಂಧಿಸಿದ ಜಿಲ್ಲಾಡಳಿತವೇ ಹೊಣೆ ಆಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ರೈತ ಮುಖಂಡ ರಂಗನಾಥ್, ಹೋರಾಟಗಾರ ಎಸ್ ನರಸಿಂಹಲು, ಬಸವರಾಜ ಡಿ, ಸಾದಿಕ್ ಪಾಶ,
ಯುವ ಮುಖಂಡರುಗಳಾದ ಲಕ್ಷ್ಮಣ ಮಂಡಲಗೇರಾ, ಹನುಮೇಶ ಆರೋಲಿ, ಜಲಾಲ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X