ರಾಯಚೂರು | ಎರಡು ವರ್ಷ ಕಳೆದರೂ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಭಾಗ್ಯ ಇಲ್ಲ

Date:

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್‌ ಪಟ್ಟಣದ ಇಂದಿರಾ ಕ್ಯಾಂಟಿನ್ ಕಾಮಗಾರಿ ಕುಂಟುತ್ತ ಸಾಗಿದ್ದು, ಅಂತೂ ಪೂರ್ಣಗೊಂಡಿತು. ಇದೀಗ ಕಾಮಗಾರಿ ಪೂರ್ಣಗೊಂಡು ಎರಡು ವರ್ಷ ಕಳೆದರೂ ಕೂಡಾ ಈವರೆಗೆ ಉದ್ಘಾಟನೆ ಭಾಗ್ಯ ಕಾರಣದಿರುವುದು, ಕುಡುಕರ ಅಡ್ಡವಾಗಿ ಮಾರ್ಪಟ್ಟಿದೆ.

- Advertisement -

ಕ್ಯಾಂಟಿನ್ ಅಡುಗೆ ಕೊಠಡಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಅಗತ್ಯ ಉಪಕರಣಗಳನ್ನು ಅಳವಡಿಸಿ 2 ವರ್ಷಗಳು ಕಳೆದಿದೆ. ಬಳಕೆ ಮಾಡದ್ದರಿಂದ ಉಪಕರಣಗಳು ಧೂಳಿನಿಂದ ಆವೃತವಾಗಿವೆ. ಅಲ್ಲದೆ ತುಕ್ಕು ಹಿಡಿದು ಉಪಯೋಗಕ್ಕೆ ಬಾರದಂತಾಗಬಹುದು. ಸಾರ್ವಜನಿಕರಿಗೆ ಅನುಕೂಲವಾಗಲೆಂದು ಜನಸಾಮಾನ್ಯರ ಟ್ಯಾಕ್ಸ್‌ ಹಣದಿಂದ ಸರ್ಕಾರ ಯೋಜನೆಗಳನ್ನು ನೀಡುತ್ತದೆ. ಆದರೆ ಸಂಬಂಧಪಟ್ಟವರು, ಗುತ್ತಿಗೆದಾರರು ನಿಗಾ ವಹಿಸದ ಕಾರಣ ಎಲ್ಲವೂ ವ್ಯರ್ಥವಾಗುವ ಹಂತಕ್ಕೆ ತಲುಪಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ಅತ್ಯಂತ ಕಡಿಮೆ ದರದಲ್ಲಿ ಊಟ, ಉಪಹಾರ ದೊರೆಯಲೆಂದು ಇಂದಿರಾ ಕ್ಯಾಂಟಿನ್ ಆರಂಭಿಸುವ ಯೋಜನೆ ಘೋಷಿಸಿತು. ಆದರೆ ಸುಸಜ್ಜಿತ ಕಟ್ಟದವಿದ್ದರೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ಯಾವಾಗ ಕಾರ್ಯಾರಂಭವಾಗುವುದೋ, ಜನಸಾಮಾನ್ಯರಿಗೆ ಊಟ ತಿಂಡಿ ಸಿಗುವುದೋ ಕಾದು ನೋಡಬೇಕಿದೆ” ಎಂದು ಸಾರ್ವಜನಿಕರು ಕಾತರಿಸುತ್ತಿದ್ದಾರೆ.

1000075052

ಪಟ್ಟಣದ ಸಮಾಜಸೇವಕ ಸಾದೀಕ್ ಬೇಗ್ ಮತಮಾಡಿ, “ಪುರಸಭೆ ಮತ್ತು ಕ್ಷೇತ್ರದ ಕಾಂಗ್ರೆಸ್ ಶಾಸಕರು ಆದಷ್ಟು ಬೇಗ ಇಂದಿರಾ ಕ್ಯಾಂಟಿನ್ ಪ್ರಾರಂಭಿಸಲು ಇಚ್ಚಾಶಕ್ತಿ ತೋರಿಸಬೇಕು. ಇದರಿಂದ ನಿತ್ಯ ಪಟ್ಟಣಕ್ಕೆ ಬರುವ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಗ್ರಾಮೀಣ ಭಾಗದ ಬಡ ಕೂಲಿಕಾರ್ಮಿಕರಿಗೆ ಕಡಿಮೆ ದರದಲ್ಲಿ ಉಪಾಹಾರ ಮತ್ತು ಊಟ ದೊರೆಯುವುದು. ಆಸ್ಪತ್ರೆ ಮುಂಭಾಗ ಇಂದಿರಾ ಕ್ಯಾಂಟಿನ್‌ನ ಸುಸಜ್ಜಿತವಾದ ಕಟ್ಟಡ ನಿರ್ಮಾಣವಾಗಿದೆ. ಆದಷ್ಟು ಬೇಗ ನಿರ್ವಹಣೆಯಾದರೆ ಬಡ ಜನರಿಗೆ ಅನುಕೂಲವಾಗುತ್ತದೆ” ಎಂದರು.

ಕೂಲಿಕಾರರ ಸಂಘದ ಮುಖಂಡ ಖಾಜಾ ಸಾಬ್ ಮಾತನಾಡಿ, “ಇಂದಿರಾ ಕ್ಯಾಂಟಿನ್ ನಿರ್ಮಾಣವಾಗಬೇಕೆಮದು ಆಗ್ರಹಿಸಿದ್ದೆವು. ಆ ಬೇಡಿಕೆ ಈಡೇರಿದೆ. ಈಗ ಉದ್ಘಾಟನೆಗೂ ಕೂಡ ಆಗ್ರಹ ಮಾಡುವಂತಾಗಿದೆ. ಸುಮಾರು 2 ವರ್ಷಗಳಿಂದ ಇಂದಿರಾ ಕ್ಯಾಂಟಿನ್ ಕೆಲಸ ನಿಂತುಹೋಗಿದೆ. ಅದರ ಬಗ್ಗೆ ಯಾರೂ ಕೇಳುವವರಿಲ್ಲ, ಗಮನಿಸುವವರಿಲ್ಲ. ಸಾವಿರಾರು ಹಣ ಖರ್ಚು ಮಾಡಿ ಸುಂದರವಾದ ಕಟ್ಟಡಕ್ಕೆ ಉದ್ಘಾಟನೆ ಭಾಗ್ಯವೇ ಕಾಣುವಂತಿಲ್ಲ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ” ಎಂದು ಹೇಳಿದರು.

1000075049

ಮಾಜಿ ಕಾಂಗ್ರೆಸ್ ಶಾಸಕ ಡಿ ಎಸ್ ಹುಲಗೇರಿ ಮಾತನಾಡಿ, “ಟೆಂಡರ್ ಕರೆದು ಮತ್ತೆ ಬಾಕಿ ಕೆಲಸ ಮಾಡಲಾಗುವುದು. ಸರ್ಕಾರ ಗುತ್ತಿಗೆ ನಿರ್ಣಯ ತೆಗೆದುಕೊಳ್ಳಬೇಕು. ಮುಖ್ಯಮಂತ್ರಿ ಅವರ ಜತೆಗೆ ಮಾತನಾಡಿ, ಆದಷ್ಟು ಬೇಗ ಪ್ರಾರಂಭಿಸುವೆ. ಜನರಿಗೆ ಅನುಕೂಲವಾಗುವಂತೆ ಮಾಡಲು ಪ್ರಯತ್ನಿಸುವೆ” ಎಂದು ಹೇಳಿದರು.

1000075064
Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...