ಪ್ರತಿ ಗ್ರಾಹಕರಿಗೂ ಕಾನೂನಿನ ಅರಿವು ಅವಶ್ಯ. ಪ್ರತಿಯೊಬ್ಬ ಗ್ರಾಹಕನಿಗೂ ಕಾನೂನಿನ ಅರಿವು ಇರಬೇಕು ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಜೀವಿಸಬೇಕು ಎಂದು ರಾಯಚೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಕೆ ವಿ ಸುರೇಂದ್ರ ಕುಮಾರ್ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
“ಕಾನೂನಿನ ಕಾಯಿದೆಗಳು, ಗ್ರಾಹಕರ ಹಕ್ಕುಗಳ ಬಗ್ಗೆ ಗ್ರಾಹಕರು ತಿಳಿದುಕೊಳ್ಳಬೇಕು. ಗ್ರಾಹಕರಿಗೆ ಸಂಬಂಧಿಸಿದ ಕಾನೂನುಗಳು ಜಾರಿಯಾದ ಮೇಲೆ ವಂಚನೆಗಳಿಗೆ ಕಡಿವಾಣ ಹಾಕಲು ಸಾಧ್ಯವಾಯಿತು” ಎಂದು ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಬಾಣಂತಿಯರ ಸಾವಿನ ಪ್ರಕರಣ ತಡೆಯುವಲ್ಲಿ ಸಚಿವ ದಿನೇಶ್, ಶರಣಪ್ರಕಾಶ್ ವಿಫಲ; ರಾಜೀನಾಮೆಗೆ ಕೆಆರ್‌ಎಸ್ ಆಗ್ರಹ
ಅಪರ ಜಿಲ್ಲಾಧಿಕಾರಿ ಶಿವಾನಂದ ಮಾತನಾಡಿ, “ಗ್ರಾಹಕರು ಮಾಡುವಂಥ ಅನೇಕ ವ್ಯವಹಾರಗಳ ಪೈಕಿ ಕೆಲವೊಂದು ವ್ಯವಹಾರಗಳಲ್ಲಾಗುವ ಅನ್ಯಾಯದಿಂದ ಪಾರಾಗಲು ಕಾನೂನು ಜಾಗೃತ ಅಗತ್ಯ” ಎಂದು ಹೇಳಿದರು.
ಸಮಾರಂಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.
