ರಾಯಚೂರು | ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಗೆ ಹಣ ವಸೂಲಿ ಆರೋಪ; 3 ಸೈಬರ್‌ ಕೇಂದ್ರಗಳ ವಿರುದ್ಧ ಎಫ್‌ಐಆರ್

Date:

ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆ ಜಾರಿಯಾಗಿದೆ. ಮನೆ ಯಜಮಾನಿಗೆ ಮಾಸಿಕ ₹2,000 ನೀಡುವ ಈ ಯೋಜನೆಗೆ ಆನ್​ಲೈನ್​ ಮೂಲಕ ಈಗಾಗಲೇ ನೋಂದಣಿ ಪ್ರತಿಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಕೆಗೆ ಯಾವುದೇ ಹಣ ಪಡೆಯುವಂತಿಲ್ಲ ಎಂದು ಸರ್ಕಾರವೇ ಹೇಳಿದೆ. ಆದರೂ ಖಾಸಗಿ ಸೈಬರ್ ಸೆಂಟರ್​ಗಳು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿವೆ. ಅದರಂತೆ ರಾಯಚೂರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಮೂರು ಸೈಬರ್ ಕೇಂದ್ರಗಳ ವಿರುದ್ಧ ದೂರು ದಾಖಲಾಗಿದೆ.

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಗ್ರಾಹಕರಿಂದ ₹100-₹200 ವಸೂಲಿ ಮಾಡುತ್ತಿದ್ದ ರಾಯಚೂರು ಜಿಲ್ಲೆ ಮಾನ್ವಿಯ 3 ಸೈಬರ್ ಕೇಂದ್ರಗಳ ವಿರುದ್ಧ ದೂರು ದಾಖಲಾಗಿದೆ. ಹಣ ವಸೂಲಿ ಮಾಡುತ್ತಿದ್ದ ಮಾಹಿತಿ ಮೇರೆಗೆ ಮಾನ್ವಿ ತಹಶೀಲ್ದಾರ್ ಚಂದ್ರಕಾಂತ್ ಅವರು ಸೈಬರ್​ ಸೆಂಟರ್​ಗಳ ಮೇಲೆ ದಾಳಿ ಮಾಡಿದ್ದು, ಈ ವೇಳೆ ಅಧಿಕೃತ ಸರ್ಕಾರಿ ಐಡಿಯನ್ನು ಅಕ್ರಮವಾಗಿ ಪಡೆದು ಸಾರ್ವಜನಿಕರಿಂದ ಹಣ ವಸೂಲಿ ಮಾಡಿ ಅರ್ಜಿ ಸಲ್ಲಿಕೆ ಮಾಡುತ್ತಿರುವುದು ಪತ್ತೆಯಾಗಿದೆ.

ಲಕ್ಷ್ಮಿ ಕಂಪ್ಯೂಟರ್, ಸೂರ್ಯ ಕಂಪ್ಯೂಟರ್, ಎಕ್ಸೆಲ್ ಕಂಪ್ಯೂಟರ್​ ಸೆಂಟರ್​ನಲ್ಲಿ ಫಲಾನುಭವಿಗಳಿಂದ ಹಣ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಚಂದ್ರಕಾಂತ್ ಅವರು ನಗರದ ಮೂರು ಸೈಬರ್ ಸೆಂಟರ್‌ಗಳ​ ವಿರುದ್ಧ ಮಾನ್ವಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಪೊಲೀಸರು, ಐಟಿ ಆಕ್ಟ್ ಹಾಗೂ ಐಪಿಸಿ ಸೆಕ್ಷನ್ 420 ವಂಚನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಗೃಹ ಲಕ್ಷ್ಮಿ | ಸೇವಾ ಕೇಂದ್ರಗಳಲ್ಲಿ ದುಡ್ಡು ಪಡೆದರೆ ಕ್ರಿಮಿನಲ್ ಕೇಸ್:‌ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗಂಭೀರವಾಗಿ ಪರಿಗಣಿಸಿದ್ದು, “ಅರ್ಹ ಫಲಾನುಭವಿಗಳಿಂದ ಹಣ ಪಡೆದುಕೊಂಡರೆ ಕ್ರಿಮಿನಲ್ ಪ್ರಕರಣ ದಾಖಲಿಸುವುದರ ಜೊತೆಗೆ ಐಡಿ ಕ್ಯಾನ್ಸಲ್ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಎಚ್ಚರಿಕೆಯ ನಡುವೆಯೂ ಖಾಸಗಿ ಸೈಬರ್ ಸೆಂಟರ್​ಗಳು ಅಕ್ರಮವಾಗಿ ಐಡಿ ಪಡೆದು ಸಾರ್ವಜನಿಕರಿಂದ ಹಣ ವಸೂಲಿಗೆ ಇಳಿದಿರುವುದು ಕಂಡುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಬಸ್‌ಗಳಿಲ್ಲದೇ ಪರದಾಟ; ವಿದ್ಯಾರ್ಥಿಗಳ ಪ್ರತಿಭಟನೆ

ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ....

ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ...

ವಿಪಕ್ಷ ನಾಯಕನ ಹುದ್ದೆಗೆ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

ವಿಧಾನಸಭೆ ವಿಪಕ್ಷ ನಾಯಕನ ಹುದ್ದೆಗೆ ಆರ್ ಅಶೋಕ್ ನಾಲಾಯಕ್. ಬೆಂಗಳೂರಿನ ಚಾಮರಾಜಪೇಟೆಯಲ್ಲಿ...

ಶಿವಮೊಗ್ಗ | ಫೆ.24ರಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ...