ರಾಯಚೂರು | ಡಿಸಿ ಹೆಸರಲ್ಲಿ ನಕಲಿ ಎಫ್‌ಬಿ ಖಾತೆ ಸೃಷ್ಠಿ; ಆರೋಪಿ ಬಂಧನ

Date:

ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ಅವರ ಭಾವಚಿತ್ರ ಹಾಗೂ ಹೆಸರನ್ನು ಬಳಸಿಕೊಂಡು ನಕಲಿ ಫೇಸ್‌ಬುಕ್ ಐಡಿ ಸೃಷ್ಟಿಸಿ ಸಾರ್ವಜನಿಕರಿಗೆ ವಂಚನೆ ನಡೆಸಿದ ಆರೋಪಿಯನ್ನು ರಾಯಚೂರು ಸೈಬರ್ ಅಪರಾಧ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

- Advertisement -

ನಗರದ ಸೈಬರ್ ಠಾಣೆಗೆ ಜೂ.30ರಂದು ಹೇಮನೂರು ಗ್ರಾಮದ ನಿವಾಸಿ ರಮೇಶ ಎನ್ನುವವರು ದೂರು ಸಲ್ಲಿಸಿದ್ದರು. ಜಿಲ್ಲಾಧಿಕಾರಿಗಳ ಹೆಸರಿನ ನಕಲಿ ಫೇಸ್‌ಬುಕ್ ಐಡಿಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿದ್ದು, ಅದರ ಮೂಲಕ ಜಿಲ್ಲಾಧಿಕಾರಿಗಳ ಸ್ನೇಹಿತನಾಗಿ ಪರಿಚಯಿಸಿಕೊಂಡ ಅಜಿತ್ ಸಿಂಗ್ ಎಂಬ ವ್ಯಕ್ತಿ ಗುಲ್ಬರ್ಗಾ ಏರ್‌ಪೋರ್ಟ್ನಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿದ್ದು ವರ್ಗಾವಣೆಯ ಹಿನ್ನೆಲೆ ಮನೆ ಬಳಕೆಯ ಸಾಮಾನುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾನೆ ಎಂದು ನಂಬಿಸಿ ಹಣ ಪಡೆದುಕೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜೂ.27ರಿಂದ ಜೂ.29ರ ಅವಧಿಯಲ್ಲಿ ಹಂತ ಹಂತವಾಗಿ ಒಟ್ಟು 85,೦೦೦ ರೂ.ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಿಸಿಕೊಂಡು ಆರೋಪಿತನು ವಂಚನೆ ಎಸಗಿರುವುದು ತನಿಖೆಯಲ್ಲಿ ದೃಢಪಟ್ಟಿತ್ತು.

ಇದನ್ನೂ ಓದಿ: ರಾಯಚೂರು | ಅರಕೇರಾ ತಾಲ್ಲೂಕಿಗೆ ಎನ್ ಗಣೇಕಲ್ ಗ್ರಾಮ ಸೇರ್ಪಡೆ ಹಿಂಪಡೆಯಬೇಕು; ಗ್ರಾಮಸ್ಥರ ಒತ್ತಾಯ

ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಮಾರ್ಗದರ್ಶನದಲ್ಲಿ, ಸೈಬರ್ ಅಪರಾಧ ಠಾಣೆಯ ಡಿವೈಎಸ್‌ಪಿ ವೆಂಕಟೇಶ ಹೊಗಿಬಂಡಿ ಅವರು ತನಿಖೆ ನಡೆಸಿ, ರಾಜಸ್ಥಾನ ರಾಜ್ಯದ ಆಳ್ವಾರ್ ಜಿಲ್ಲೆಯ ನಿವಾಸಿ ಶಕೀಲ್ ಎಂಬ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...