ರಾಯಚೂರು | ರೈತನಿಗೆ ಪರಿಹಾರ ನೀಡುವಲ್ಲಿ ವಿಳಂಬ: ನ್ಯಾಯಾಲಯದ ಆದೇಶದಂತೆ ನೀರಾವರಿ ಇಲಾಖೆಯ ಕಚೇರಿ ಪೀಠೋಪಕರಣ ಜಪ್ತಿ

Date:

ಸಿರವಾರ ತಾಲ್ಲೂಕಿನ ಹಿರೇದಿನ್ನಿ ಗ್ರಾಮದ ರೈತ ಕರಿಯಪ್ಪ ಅವರ ಕುಟುಂಬಕ್ಕೆ ಭೂಸ್ವಾಧೀನ ಪರಿಹಾರವಾಗಿ ನಿಗದಿಯಾದ ರೂ.16.30 ಲಕ್ಷ ಹಣ ವಿತರಿಸಲು ನೀರಾವರಿ ಇಲಾಖೆಯ ಅಧಿಕಾರಿಗಳು ವಿಳಂಬ ಮಾಡಿದ ಹಿನ್ನೆಲೆ, ನ್ಯಾಯಾಲಯದ ಆದೇಶದಂತೆ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರರ ಕಚೇರಿ (ವಿಭಾಗ-4), ಸಿರವಾರ ಪಟ್ಟಣದಲ್ಲಿ ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ.

ಮಾನ್ವಿಯ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಆದೇಶದನ್ವಯ ನ್ಯಾಯಮೂರ್ತಿ ನೇತೃತ್ವದಲ್ಲಿ ಅಧಿಕಾರಿಗಳು ಕಚೇರಿಗೆ ಭೇಟಿ ನೀಡಿದ್ದು, ಕೆಲಸಕ್ಕಾಗಿ ಬಳಸುತ್ತಿದ್ದ ಕಂಪ್ಯೂಟರ್‌ಗಳು, ಮೇಜು, ಕುರ್ಚಿ ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಿದರು.

- Advertisement -
1000156548

ಘಟನೆ ವಿವರ; ಸಿರವಾರ ತಾಲ್ಲೂಕಿನ ಹಿರೇಬಾದರದಿನ್ನಿ ಗ್ರಾಮದ ಸರ್ವೇ ನಂ.113 ರಲ್ಲಿನ 15 ಗುಂಟೆ ಜಮೀನನ್ನು, 1976 ರಲ್ಲಿ ಬಾಗಲವಾಡ ಗ್ರಾಮದಿಂದ ಗೊಲ್ಲದಿನ್ನಿ ಗ್ರಾಮವರೆಗೆ ಆಯಾಕಟ್ಟು ರಸ್ತೆ ನಿರ್ಮಾಣಕ್ಕಾಗಿ ಭೂಸ್ವಾಧೀನ ಮಾಡಲಾಗಿತ್ತು. ಭೂಮಿ ಕಳೆದುಕೊಂಡ ಹಲವಾರು ರೈತರಿಗೆ ಪರಿಹಾರ ಹಣವನ್ನು ಸರಕಾರ ನೀಡಿದರೂ, ತಾಂತ್ರಿಕ ದೋಷದಿಂದಾಗಿ ಹದಿನೈದು ಗುಂಟೆ ಭೂಮಿ ಕಳೆದುಕೊಂಡ ರೈತ ಕರಿಯಪ್ಪ ಅವರ ಕುಟುಂಬವು ಇದುವರೆಗೂ ಪರಿಹಾರದಿಂದ ವಂಚಿತರಾಗಿದ್ದಾರೆ.

ನಿನ್ನೆ ನ್ಯಾಯಾಲಯದ ಆದೇಶದಂತೆ ಸಿರವಾರ ಪಟ್ಟಣದ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರರ ಕಚೇರಿ (ವಿಭಾಗ-4)ಯಲ್ಲಿ ಪೀಠೋಪಕರಣಗಳನ್ನು ಜಪ್ತಿ ಮಾಡಲಾಯಿತು. ಕಂಪ್ಯೂಟರ್‌ಗಳು, ಸೇರಿದಂತೆ ಕಚೇರಿಯ ವಿವಿಧ ವಸ್ತುಗಳನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಮರ ಬಿದ್ದು ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ ಗಾಯ

ನ್ಯಾಯಾಲಯವು ಈ ಹಿಂದೆಯೇ 3-4 ಬಾರಿ ಜಪ್ತಿಗೆ ಆದೇಶ ನೀಡಿದರೂ ಇಲಾಖೆಯ ಅಧಿಕಾರಿಗಳು ರೈತನಿಗೆ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ. ಒಟ್ಟು ರೂ.16,30,323 ಪರಿಹಾರ ಮೊತ್ತವನ್ನು ರೈತ ಕರಿಯಪ್ಪ ಅವರ ಕುಟುಂಬಕ್ಕೆ ನೀಡಬೇಕೆಂದು ಆದೇಶಿಸಲಾಗಿದೆ. ಪರಿಹಾರ ನೀಡದೇ ಕಾರಣಕ್ಕೆ ಜಪ್ತಿ ಕ್ರಮ ಕೈಗೊಳ್ಳಲಾಯಿತು,” ಎಂದು ರೈತ ಪರ ವಕೀಲ ಶಿವರಾಜ ಪಾಟೀಲ ತಿಳಿಸಿದರು.

1000156545















WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...