ಅಕಾಲಿಕ ಮಳೆಯಿಂದ ಹಾನಿಯಾದ ಬೆಳೆಗೆ ಪರಿಹಾರ ಹಾಗೂ ಜೋಳ ಕಣ ಮಾಡಿ ನಾಲ್ಕು ತಿಂಗಳು ಕಳೆದರೂ ಇದುವರೆಗೂ ಹಿಂಗಾರು ನೋಂದಣಿ ಪ್ರಕ್ರಿಯೆ ಆರಂಭವಾಗಿಲ್ಲ ತಕ್ಷಣ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಸೇರಿ ನಾನಾ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರೈತರು ಪ್ರತಿಭಟಿಸಿದರು.
ಜಿಲ್ಲೆ ಮಾನ್ವಿ ತಾಲ್ಲೂಕಿನ ಪೋತ್ನಾಳ ಗ್ರಾಮದ ಹತ್ತಿರ ಬಳಗಾನೂರ ಕ್ರಾಸ್ ಬಳಿ ನೂರಾರು ರೈತರು ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟಿಸಿ ಸಿಂಧನೂರು ತಹಶೀಲ್ದಾರ ಅರುಣಾ ದೇಸಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಒಂದು ವಾರದ ಹಿಂದೆ ಸುರಿದ ಅಕಾಲಿಕ ಮಳೆಗೆ ಭತ್ತದ ಬೆಳೆ ಹಾನಿಯಾಗಿದ್ದು ನಷ್ಟ ಅನುಭವಿಸಿದ ರೈತರಿಗೆ ವೈಜ್ಞಾನಿಕವಾಗಿ ಪರಿಹಾರ ಒದಗಿಸಬೇಕು.ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ಸರ್ಕಾರವು ಕರಾಳ ಕೃಷಿ ಕಾಯ್ದೆಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ
ಕೃಷಿ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಬಾರದು.ಇದರಿಂದ ರೈತರಿಗೆ ಸಮಸ್ಯೆ ಎದುರಾಗಿದ್ದು ಕೂಡಲೇ ರದ್ದುಪಡಿಸಬೇಕು.ವಿದ್ಯುತ್ ಖಾಸಗೀಕರಣವನ್ನು ನಿಲ್ಲಿಸಬೇಕು ಮತ್ತು ಗ್ರಾಮೀಣ ಭಾಗದಲ್ಲಿ ಮರಳು ಮಾಫಿಯಾದಿಂದ ರೈತರು ಬೇಸತ್ತು ಹೋಗಿದ್ದಾರೆ ಕೂಡಲೇ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹಕ್ಕೊತ್ತಾಯ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಜೇನೂರು ,ತಡಕಲ್ ,ಧೋತರಬಂಡಿ , ಊಟಕನೂರು , ಬನ್ನಿಗನೂರು , ರಾಮತ್ನಾಳ, ದಿದ್ದಿಗಿ , ಮುದ್ದಮಗುಡ್ಡಿ, ಕರಾಬ್ ,ದಿನ್ನಿ ,ಸೇರಿ ಸುತ್ತಮುತ್ತಲಿನ ಇನ್ನಿತರ ಗ್ರಾಮಗಳ ರೈತರು ಭಾಗವಹಿಸಿದ್ದರು.
