ರಾಯಚೂರು | ಜೋಳ ಖರೀದಿ ಕೇಂದ್ರ ಸ್ಥಾಪನೆ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ರೈತರ ಪ್ರತಿಭಟನೆ

Date:

ರಾಯಚೂರು ಜಿಲ್ಲೆಯ ಎಲ್ಲಾ ತಾಲೂಗಳಲ್ಲಿ ಜೋಳ ಖರೀದಿ ಕೇಂದ್ರ ಸ್ಥಾಪನೆ ವಿಳಂಭ ಮಾಡದೇ ಖರೀದಿ ನಡೆಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಮಾನ್ವಿ ಮತ್ತು ಸಿಂಧನೂರು ತಾಲೂಕಗಳಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಲಾಗಿದೆ. ಆದರೆ, ಸಮರ್ಪಕ ಖರೀದಿ ನಡೆಯುತ್ತಿಲ್ಲ. ಹಿಂಗಾರು ಜೋಳ ಖರೀದಿಗೆ ಯಾವುದೇ ನಿರ್ಧಾರ ಮಾಡದೇ ಇರುವದರಿಂದ ರೈತರು ಆತಂಕಕ್ಕೆ ಸಿಲುಕುವಂತಾಗಿದೆ. ಕೂಡಲೇ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಜೋಳ ಖರೀದಿಮಾಡಬೇಕೆಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಬರಗಾಲ ಆವರಿಸಿದ್ದರು ಬ್ಯಾಂಕ್ ಮತ್ತು ಸಹಕಾರಿ ಬ್ಯಾಂಕ್‌ಗಳು ಒತ್ತಾಯ ಸಾಲ ವಸೂಲಿಗೆಮುಂದಾಗಿವೆ. ವೃದ್ಧಾಪ್ಯ ವೇತನ, ವಿಧವಾ ವೇತನ, ಉದ್ಯೋಗ ಖಾತ್ರಿ ಕೂಲಿ ಹಣವನ್ನು ಸಾಲದ ಖಾತೆಗೆ ಜಮಾ ಮಾಡಲಾಗುತ್ತಿದೆ. ತಕ್ಷಣ ನಿಲ್ಲಿಸಲು ಆದೇಶ ನೀಡಬೇಕು. ಬರಗಾಲವೆಂದು ಘೋಷಣೆ ಮಾಡಿದ್ದರೂ ಬರ ಪರಿಹಾರ ಹಣ ಬಿಡುಗಡೆ ಮಾಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್ಯ ಸರ್ಕಾರ ನೀಡಿರುವ ಎರಡು ಸಾವಿರ ರೂ. ಹಣ ಎಲ್ಲ ರೈತರಿಗೆ ತಲುಪುತ್ತಿಲ್ಲ. ಕೂಡಲೇ ಬರಪರಿಹಾರ ಹಣ ಬಿಡುಗಡೆಗೊಳಿಸಬೇಕು. ರಾಷ್ಟ್ರೀಯ ಫಸಲ ಭೀಮಾ ಯೋಜನೆಯಡಿ ಮಾನ್ವಿ, ಸಿರವಾರ, ದೇವದುರ್ಗ ತಾಲೂಕಗಳಲ್ಲಿ ಭಾರೀ ಬ್ರಷ್ಟಾಚಾರ ನಡೆದಿದ್ದು, ಕೂಡಲೇ ತನಿಖೆ ನಡೆಸಿ ಅರ್ಹರಿಗೆ ವಿಮಾ ಪರಿಹಾರ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ರಿಮ್ಸ್ ಆಸ್ಪತ್ರೆ ಅವ್ಯವಸ್ಥೆ ಆಗರವಾಗಿದ್ದು ಜನರಿಗೆ ಚಿಕಿತ್ಸೆ ದೊರಯುತ್ತಿಲ್ಲ. ಆಸ್ಪತ್ರೆಯ ವ್ಯವಸ್ಥೆಯನ್ನು ಸರಿಪಡಿಸಬೇಕು. ಭೂ ದಾಖಲೆ ಇಲಾಖೆಯಿಂದ ರೈತರಿಗೆ ತೀವ್ರ ತೊಂದರೆಯಾಗುತ್ತಿದ್ದು, ಟಿಪ್ಪಣ, ಲೇವನ್ ಸ್ಕೇಚ್, ಮ್ಯಾಪ್ ಪಡೆಯುವಲ್ಲಿ ಆಗುತ್ತಿರುವ ತೊಂದರೆ ನಿವಾರಿಸಬೇಕು. ದೇವದುರ್ಗ ತಾಲೂಕಿನ ಬಿ.ಗಣೇಕಲ್ ರೈತರಿಗೆ ಬಗರ ಹುಕುಂಸಾಗುವಳಿದಾರರಿಗೆ ಪಟ್ಟಾ ನೀಡುವಂತೆ ಒತ್ತಾಯಿಸಿ ಈ ವೇಳೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಗೌರವಾಧ್ಯಕ್ಷ ಚಾಮರಸಮಾಲಿಪಾಟೀಲ್, ರಾಜ್ಯ ಕಾರ್ಯದರ್ಶಿ ಸೂಗೂರಯ್ಯ ಆರ್.ಎಸ್. ಮಠ, ಜಿಲ್ಲಾ ಉಪಾಧ್ಯಕ್ಷ ಬೂದೆಯ್ಯ ಸ್ವಾಮಿ, ಮಲ್ಲಣ್ಣ ದಿನ್ನಿ, ಯಂಕಪ್ಪ ಕಾರಬಾರಿ, ದೇವರಾಜ ನಾಯಕ, ಹಾಜಿ ಮಸ್ತಾನ್ ದೇವದುರ್ಗ, ಎಚ್.ಶಂಕ್ರಪ್ಪ ಸಿರವಾರ, ಮಲ್ಲಣ್ಣ ಗೌಡೂರು, ಶರಣಗೌಡ, ಬ್ರಮಯ್ಯ ಆಚಾರಿ, ಬಸವರಾಜ ನವಲಕಲ್, ದೇವೆಂದ್ರಪ್ಪ ನಾಯಕ, ಬಸವರಾಜ ತಡಕಲ್, ವಿರೇಶ ಗವಿಗಟ್ಟ, ಶೇಖರಪ್ಪ ಜಾನೇಕಲ್, ಬಸವರಾಜ ಜಾನೇಕಲ್, ಪುತ್ರಪ್ಪ ನಾರಬಂಡಿ, ಉಮಾಪತಿಗೌಡ, ಎ.ಗೋವಿಂದಪ್ಪ ಹಲವರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಇಂಧನ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನೆ...

ಹಾವೇರಿ | ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾರ್ಥಿನಿಯರಿಂದ ದಿಢೀರ್ ಪ್ರತಿಭಟನೆ

ಶ್ರೀಕಂಠಪ್ಪ ಬಡಾವಣೆಯ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆಗಾಗಿ ಆಗ್ರಹಿಸಿ ಹಾವೇರಿ ನಗರದ ಹೊರವಲಯದ...

ಧಾರವಾಡ | ಕಲ್ಲು ಕ್ವಾರಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಮೊಬೈಲ್‌ನಲ್ಲಿ ರೀಲ್ಸ್‌ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ...