ರಾಯಚೂರು | ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಒತ್ತಾಯಿಸಿ ರೈತ ಸಂಘ ಪ್ರತಿಭಟನೆ

Date:

ಬೆಳೆಗಳಿಗೆ ಬೆಂಬಲ ಬೆಲೆ ನೀಡಿ, ಎಂಎಸ್‌ಪಿ ಕಾಯ್ದೆಯನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪ್ರತಿಭಟನೆ ನಡೆಸಿದ್ದು, ರಾಯಚೂರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿವೆ.

- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದ್ದು, ರೈತರು ಬೆಳೆದ ಎಲ್ಲಾ ಬೆಳೆಗಳಿಗೆ ನೀಡಿರುವ ಬೆಂಬಲ ಬೆಲೆಯಲ್ಲಿ, ಕೇಂದ್ರ ಸರ್ಕಾರ ಮಾಡಿರುವ ಬೆಂಬಲ ಬೆಲೆಗೆ ಸುಗ್ರೀವಾಜ್ಞೆಯನ್ನು ಹೊರಡಿಸಿ ರಾಜ್ಯ ಮಟ್ಟದಲ್ಲಿ ಎಂಎಸ್‌ಪಿ ಕಾಯ್ದೆಯನ್ನು ಜಾರಿಗೆ ತರಬೇಕು ಮತ್ತು ವಿಶ್ವವ್ಯಾಪಾರ ಸಂಸ್ಥೆಯ ಡಬ್ಲ್ಯೂಟಿಒನ 13ನೇ ಮಂತ್ರಿ ಸಮ್ಮೇಳನವು ಅಬುದಬಿಯಲ್ಲಿ ನಡೆಯುತ್ತಿದ್ದು, ಸಂಯುಕ್ತ ಕಿಸಾನ್ ಮೋರ್ಚಾ ಭಾರತ ಡಬ್ಲ್ಯೂಟಿಒ ಸದಸ್ಯತ್ವದಿಂದ ಹೊರಬರಬೇಕೆಂದು ದೇಶಾದ್ಯಂತ ಹೋರಾಟಕ್ಕೆ ಕರೆಕೊಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬರ ಪರಿಹಾರ ಕೊಡಬೇಕು ಮತ್ತು ಫಸಲ್ ಭೀಮಾ ಯೋಜನೆಯಡಿ ಹಣ ಕಟ್ಟಿದ ರೈತರಿಗೆ ಹಣ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಜಿಲ್ಲೆಯ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಬೇಸಿಗೆಯಲ್ಲಿ ದಿನದ 24ತಾಸು ವಿದ್ಯುತ್ ಒದಗಿಸಬೇಕು, ದೆಹಲಿ ಪ್ರತಿಭಟನೆಗೆ ಹೊರಟಿದ್ದ ರೈತರನ್ನು ಬೇಲಿ ಹಾಕಿ ಹೋರಾಟಕ್ಕೆ ಹೋಗದಂತೆ ನಿಲ್ಲಿಸಿದ್ದು, ಗ್ರಾಮೀಣ ಭಾಗಕ್ಕೆ ಮತ ಕೇಳಲು ಬಂದರೆ ಹಳ್ಳಿಯ ಹೆಬ್ಬಾಗಿಲಿಗೆ ಬೇಲಿ ಹಾಕಿ ಊರ ಒಳಗೆ ಬಾರದಂತೆ ತಡೆಯಲಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಎಲ್ಲಾ ನದಿ ಜೋಡಣೆಗಳಿಗೆ ಆಶ್ವಾಸನೆ ನೀಡಿತ್ತು. ಕೊಟ್ಟ ಮಾತಿನಂತೆ ಎಲ್ಲಾ ನದಿ ಜೋಡಣೆಗಳನ್ನು ಮಾಡಿ ರೈತರಿಗೆ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡಬೇಕು. ದೆಹಲಿ ಚಲೋ ಪ್ರತಿಭಟನೆಗೆ ತೆರಳಿದ್ದ ರೈತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ, ಉಪಾಧ್ಯಕ್ಷ ಕೆ.ವಿರೇಶಗೌಡ ಕಡಗಂದೊಡ್ಡಿ, ನರಸಿಂಗರಾವ್ ಲಕ್ಷ್ಮಣ, ಮಹಿಳಾ ಅಧ್ಯಕ್ಷೆ ಅಕ್ಕಮ್ಮ, ಹುಸೇನಪ್ಪ ರಾಜಲಬಂಡಾ, ಗೋರ್ಕಲ್ ಈರಣ್ಣ, ನರಸಪ್ಪ ಹೊಕ್ರಾಣ, ಹುಲಿಗೆಪ್ಪ ಜಾಲಿಬೆಂಚಿ, ವೆಂಕಟರೆಡ್ಡಿ ರಾಜಲಬಂಡಾ, ಅಬ್ದುಲ್ ಮಜೀದ್ ಬಿಚ್ಚಾಲಿ ಸೇರಿದಂತೆ ಅನೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...