ನಟ ಪುನೀತ್ ರಾಜಕುಮಾರ ಅವರ ಹುಟ್ಟು ಹಬ್ಬದ ಪ್ರಯುಕ್ತ ಶುಭಾಶಯ ಕೋರಿ ಸ್ಟೇಟಸ್ ಹಾಕಿದ್ದಕ್ಕೆ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ರಾಯಚೂರು ನಗರದ ದೇವಿನಗರದಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ಮಹೇಶ್ ಎಂದು ಗುರುತಿಸಲಾಗಿದೆ. ಮಹೇಶ್, ನಟ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬ ಆಚರಿಸಿ ಸಾಮಾಜಿಕ ಜಾಲತಾಣದಲ್ಲಿ ಆಚರಣೆಯ ಫೋಟೋ ಹರಿಬಿಟ್ಟಿದ್ದ. ಅದಕ್ಕೆ ರಾಜಕೀಯದಲ್ಲಿ ಗುರುತಿಸಿಕೊಂಡಿರುವ ಸಂತೋಷ್ ತಿಮ್ಮಾರೆಡ್ಡಿ ಎಂಬಾತ ಕಾಮೆಂಟ್ ಮಾಡಿದ್ದ. ಆ ಕಾಮೆಂಟ್‌ನ್ನು ಡಿಲೀಟ್ ಮಾಡಿ ಎಂದು ಮಹೇಶ್ ಹೇಳಿದ್ದಾನೆ. ಇದರಿಂದ ಕುಪಿತಗೊಂಡ ಸಂತೋಷ್ ಯುವಕನ ಮೇಲೆ ಸುಮಾರು 30 ಜನರ ಗುಂಪು ಹಲ್ಲೆ ಮಾಡಿದ್ದು, ಕೊಲೆ ಬೆದರಿಕೆಯನ್ನೂ ಹಾಕಲಾಗಿದೆ ಎನ್ನಲಾಗಿದೆ.
ಜಗಳ ಬಿಡಿಸಲು ಮುಂದಾದ ಸಾರ್ವಜನಿಕರ ಮೇಲೂ ಹಲ್ಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ರಾಯಚೂರು | ನಾಲೆಗಳಿಗೆ ಏ.20ವರಗೆ ನೀರು ಹರಿಸಲು ರೈತರ ಅಹೋರಾತ್ರಿ ಧರಣಿ
ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಭೇಟಿ ನೀಡಿ ದೂರು ನೀಡಿರುವ ಮಹೇಶ್ ತಮಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾನೆ. ನೇತಾಜಿನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.