ರಾಯಚೂರು | ಫಾತಿಮಾ ಶೇಕ್ ಜನ್ಮದಿನ; ಶಾಲೆಗೆ ₹25 ಲಕ್ಷದ ನಿವೇಶನ ದಾನ ನೀಡಿದ ಅಕ್ಬರ್ ಪಾಷಾ

Date:

ಭಾರತದ ಮೊದಲ ಮುಸ್ಲಿಂ ಮಹಿಳಾ ಶಿಕ್ಷಕಿ ಫಾತಿಮಾ ಶೇಕ್ ಜನ್ಮದಿನದಂದು, ಗುತ್ತಿಗೆದಾರ ಸೈಯದ್ ಅಕ್ಬರ್ ಪಾಷಾ ಅವರು ರಾಯಚೂರು ಜಿಲ್ಲೆಯ ಮಾನ್ವಿ ನಗರದ ಉರ್ದು ಶಾಲೆಗೆ ₹25 ಲಕ್ಷ ಬೆಲೆಬಾಳುವ ನಿವೇಶನವನ್ನು ದಾನವಾಗಿ ನೀಡಿದ್ದು, ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

- Advertisement -

ಉರ್ದು ಶಾಲೆಯ ಸ್ವಂತ ಕಟ್ಟಡವಿಲ್ಲದೆ ಅನೇಕ ವರ್ಷ ಖಾಸಗಿ ಜಾಗದಲ್ಲಿ ತರಗತಿಗಳನ್ನು ನಡೆಯುತ್ತಿದೆ ಎಂಬ ಕಾರಣಕ್ಕೆ ಪ್ರಥಮ ದರ್ಜೆ ಗುತ್ತಿಗೆದಾರ ಸೈಯದ್ ಅಕ್ಬರ್ ಪಾಶ ಅವರು ತಮ್ಮ ನಿವೇಶನವನ್ನು ದಾನವಾಗಿ ನೀಡಿ ನೂರಾರು ಮಕ್ಕಳ ಭವಿಷ್ಯಕ್ಕೆ ರೂವಾರಿಯಾಗದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಭಾರತದ ಮೊದಲ ಮುಸ್ಲಿಂ ಮಹಿಳಾ ಶಿಕ್ಷಕಿ ಫಾತಿಮಾ ಶೇಖ್ ಜನ್ಮದಿನದಂದೇ ಉರ್ದು ಶಾಲೆ ನಿರ್ಮಾಣಕ್ಕೆ ದಾನವಾಗಿ ನಿವೇಶನ ನೀಡಿ ಅಕ್ಷರದವ್ವನ ಧ್ವನಿಗೆ ಮಕ್ಕಳು ಧ್ವನಿಗೂಡಿಸಲಿ ಎಂದು ಭದ್ರ ಬುನಾದಿ ಹಾಕಿದರು.

1000062443

ಮಾನ್ವಿ ನಗರದ ನಮಾಜಗೇರಿಗುಡ್ಡದ ಸರ್ಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಗೆ ಸ್ವಂತ ಕಟ್ಟಡವಿಲ್ಲದೇ ಖಾಸಗಿ ಕೋಣೆಗಳಲ್ಲಿ ಬೋಧನೆ ನಡೆಯುತ್ತಿತ್ತು. ಶಾಲೆಯ ಮುಖ್ಯ ಗುರುಗಳು ಹಾಗೂ ಶಿಕ್ಷಕರು ಸ್ವಂತ ಕಟ್ಟಡಕ್ಕೆ ಅನೇಕ ಹೋರಾಟಗಳನ್ನು ಮಾಡಿ ಅಲೆದಾಡಿದರೂ ಸ್ವಂತ ಕಟ್ಟಡ ಒದಗಿಸಲು ಸಾಧ್ಯವಾಗಿರಲಿಲ್ಲ.

ಆದರೆ ಈಗ ಮಾನ್ವಿ ಪಟ್ಟಣದ ಪ್ರಥಮ ದರ್ಜೆ ಗುತ್ತಿಗೆದಾರ ಸೈಯದ್ ಅಕ್ಬರ್ ಪಾಷಾ ಅವರು ಈ ಶಾಲೆಯ ಕಟ್ಟಡ ನಿರ್ಮಾಣಕ್ಕೆ ತಮ್ಮ ಸ್ವಂತ ಖರ್ಚಿನಲ್ಲಿ ಖರೀದಿಸಿದ ₹25 ಲಕ್ಷ ಬೆಲೆ ಬಾಳುವ ನಿವೇಶನ ನೀಡಿ ಅಕ್ಷರ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಜತೆಗೆ ನೂರಾರು ಬಡ ಮಕ್ಕಳ ಶಿಕ್ಷಣಕ್ಕೆ‌ ನೆರವಾಗಿ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಕಾರಣರಾಗಿದ್ದಾರೆ.

ಅಕ್ಬರ್ ಪಾಷಾ ಅವರು ಸುಮಾರು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿ ನೂರಾರು ಬಡವರಿಗೆ ಆಹಾರ ಕಿಟ್, ಪಿಂಚಣಿ ಹಾಗೂ ಇತರ ಸಮಾಜಕಾರ್ಯ ಚಟುವಟಿಕೆಯಲ್ಲಿ ಭಾಗಿಯಾಗಿ ಹೆಸರುವಾಸಿಯಾದವರು ಎನ್ನಲಾಗಿದೆ.

ಈ ಸಮಾಜ ಸೇವೆಗೆ ಜಿಲ್ಲೆಯ ಸಾಹಿತಿಗಳು, ಶಿಕ್ಷಣ ಪ್ರೇಮಿಗಳು, ಹೋರಾಟಗಾರರು ಹಾಗೂ ಸಮಾಜ ಸೇವಕರು ಪ್ರಶಂಸೆ ವ್ಯಕ್ತಪಡಿಸಿದರು.

1000062441
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...