ರಾಯಚೂರು | ಇಡ್ಲಿ ತಿನ್ನುವ ವಿಚಾರಕ್ಕೆ ಜಗಳ; ಯುವಕನ ಬರ್ಬರ ಕೊಲೆ

Date:

ಹೋಟೆಲ್‌ನಲ್ಲಿ ಇಡ್ಲಿ ತಿನ್ನುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ರಾಯಚೂರು ನಗರದ ಡಾ.ಝಾಕೀರಹುಸೇನ ವೃತ್ತದಲ್ಲಿ ನಡೆದಿದೆ.

- Advertisement -

ಸಾದೀಕ್ (27) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ನಗರದ ಏಕ್ ಮಿನಾರ್ ರಸ್ತೆಯಲ್ಲಿರುವ ಜಾಕೀರ್ ಹುಸೇನ್ ವೃತ್ತದಲ್ಲಿ ಬೆಳೆಗಿನ ಜಾವ ಪ್ರತಿನಿತ್ಯ ಇಡ್ಲಿ ತಿನ್ನಲು ಬರುತ್ತಿದ್ದ ಸಾದೀಕ್, ಕರೀಂ ಹಾಗೂ ಸ್ನೇಹಿತರು ರವಿವಾರ ಬೆಳಿಗ್ಗೆ ಇಡ್ಲಿ ತಿನ್ನಿಸುವ ವಿಚಾರದಲ್ಲಿ ಜಗಳ ನಡೆದಿದೆ. ಸಾದೀಕ್ ಹಾಗೂ ಕರೀಂ‌ ನಡುವೆ ವಾಗ್ವಾದ ನಡೆದು ಏಕಾಏಕಿ ಕರೀಂ ಸಾದಿಕ್ ಎದೆಗೆ ಚಾಕುವಿನಿಂದ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದ ಸಾದೀಕ್‌ನನ್ನು ರಿಮ್ಸ್ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಹಳೆ ವೈಷಮ್ಯ ಹಿನ್ನೆಲೆ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಇನ್ನಷ್ಟೇ ನಿಖರ ಮಾಹಿತಿ ತಿಳಿದು ಬರಬೇಕಿದೆ. ಬೆಳ್ಳಂಬೆಳಿಗ್ಗೆ ಭೀಕರ ಕೊಲೆ ಕಂಡ ಸಾರ್ವಜನಿಕರು ಭಯಭೀತಗೊಂಡಿದ್ದಾರೆ.

ಮೃತ ದೇಹವನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸದರ ಬಜಾರ್ ಪಿಎಸ್‌ಐ ಉಮೇಶ ಕಾಂಬ್ಳೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳ್ಳಂಬೆಳಿಗ್ಗೆ ಭೀಕರ ಕೊಲೆ ಕಂಡ ಸಾರ್ವಜನಿಕರು ಭಯಭೀತಗೊಂಡಿದ್ದಾರೆ.

ಇದನ್ನೂ ಓದಿ : ಇಸ್ರೋದ 101ನೇ ಉಪಗ್ರಹ ಉಡಾವಣೆ ಮಾಡಿದ ಕೆಲವೇ ಕ್ಷಣಗಳಲ್ಲಿ ವಿಫಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.2ರಂದು ಟಿ. ನರಸೀಪುರದಲ್ಲಿ ಕೋಮು ಸೌಹಾರ್ದತೆಗಾಗಿ ಬೃಹತ್ ಸಮಾವೇಶ

ಟಿ. ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಂಟಾಗಿರುವ...

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ಕಾರವಾರ | ಫ್ಲೈ ಓವರ್ ಕೆಳಗಿನ ಸರ್ಕಾರಿ ಜಾಗದಲ್ಲಿ ಅನಧಿಕೃತ ನರ್ಸರಿ

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ...

ಕೋಲಾರ | ಜಿಲ್ಲೆಗೆ ₹600 ಕೋಟಿ‌ ಬರ ಪರಿಹಾರ ನೀಡಲು ಜೆಡಿಎಸ್ ಆಗ್ರಹ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರೈತರಿಗೆ ಸಮರ್ಪಕ ಬರ ಪರಿಹಾರ...